ಆಟೋಟಗಳು ಪಠ್ಯದಷ್ಟೇ ಮುಖ್ಯ: ಮತ್ತಿಮಡು
Team Udayavani, Dec 3, 2018, 10:52 AM IST
ಕಲಬುರಗಿ: ಸ್ವಾಮಿ ನಾರಾಯಣ ಗುರುಕುಲ ಇಂಟರನ್ಯಾಷನಲ್ ಶಾಲೆಯಲ್ಲಿ ನಡೆದ ಗುರುಕುಲ ಒಲಿಂಪಿಕ್ಸ್ -2018 ಕ್ರೀಡಾಕೂಟದ ಚಾಂಪಿಯನ್ ಆಗಿ ಸ್ವಾಮಿ ನಾರಾಯಣ ಗುರುಕುಲ ಇಂಟರನ್ಯಾಷನಲ್ ಶಾಲೆ ಹೊರ ಹೊಮ್ಮಿತು. ಆದರೆ ಈ ಚಾಂಪಿಯನ್‌ಶಿಪ್ ಪಟ್ಟವನ್ನು ಮಳಖೇಡದ ಆದಿತ್ಯ ಬಿರ್ಲಾ ಪಬ್ಲಿಕ್ ಶಾಲೆಗೆ ಬಿಟ್ಟು ಕೊಡಲಾಯಿತು.
ರನ್ನರ್ ಆಪ್ ಪ್ರಶಸ್ತಿಯು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಪ್ಪ ಪಬ್ಲಿಕ್ ಶಾಲೆಗೆ ನೀಡಲಾಯಿತು. ಪೂಜ್ಯ ಋಷಿ ಚರಣದಾಸ್ ಜಿ. ಸ್ವಾಮೀಜಿ ಹಾಗೂ ಆಡಳಿತ ಮಂಡಳಿ ನಿರ್ಧಾರದಂತೆ ಚಾಂಪಿಯನ್ ಕಪ್‌ನ್ನು ಆದಿತ್ಯ ಬಿರ್ಲಾ ಪಬ್ಲಿಕ್ ಶಾಲೆಗೆ ಹಾಗೂ ರನ್ನರ್ ಕಪ್‌ನ್ನು ಅಪ್ಪ ಪಬ್ಲಿಕ್ ಶಾಲೆಗೆ ನೀಡಲಾಯಿತು.
ಗುರುಕುಲ -2018 ಇದನ್ನು ಭಗವಾನ ಶ್ರೀ ಸ್ವಾಮಿ ನಾರಾಯಣ ಸ್ಮರಣೆಯಲ್ಲಿ ಈ ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆ ಹಾಗೂ ಮೌಲ್ಯಗಳ ಬೆಳವಣಿಗೆಗಾಗಿ ನೀಡಲಾಗುವುದು ಎಂದು ರವಿವಾರ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ವಿವರಣೆ ನೀಡಲಾಯಿತು.
ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಪರಮ ಪೂಜ್ಯ ಶ್ರೀ ಸುಖವಲ್ಲಭದಾಸ್ ಜೀ ಸ್ವಾಮೀಜಿ ವಹಿಸಿದ್ದರು. ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕ್ರೀಡಾ ಪದಕ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು.
ನಂತರ ಮಾತನಾಡಿದ ಅವರು, ದೈಹಿಕ ಪರಿಶ್ರಮ ಕಡಿಮೆಯಾಗಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠ-ಪ್ರವಚನದಷ್ಟೇ ಆಟೋಟಗಳು ಮುಖ್ಯವಾಗಿವೆ ಎಂದರು. ಜಿಲ್ಲಾ ಪಂಚಾಯತ್ ಸದಸ್ಯ ಅಶೋಕ ಸಗರ, ಬಸವರಾಜ ಮಾಲಿಪಾಟೀಲ್, ಜಯಶವರೂ, ವಿಧೇಹ ಸ್ವರೂಪ ಸ್ವಾಮೀಜಿ, ಹಾಗರಗಾ ಗ್ರಾಮ ಪಂಚಾಯಿತಿ ಸದಸ್ಯರು, ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.