ರಾಜ್ಯವನ್ನು ಆನೆಕಾಲು ರೋಗ ಮುಕ್ತವಾಗಿಸುವ ಗುರಿ
Team Udayavani, Mar 24, 2018, 3:27 PM IST
ಕಲಬುರಗಿ: ರಾಜ್ಯವನ್ನು 2020ರಷ್ಟೊತ್ತಿಗೆ ಅನೇಕಾಲು ರೋಗ ಮುಕ್ತವನ್ನಾಗಿಸಲು ಗುರಿ ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಆನೆಕಾಲು ರೋಗ ನಿರ್ಮೂಲನೆಗೆ ಆದ್ಯತೆ ನೀಡಬೇಕೆಂದು ಬೆಂಗಳೂರಿನ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಪ್ರಾದೇಶಿಕ ನಿರ್ದೇಶಕ ಡಾ| ಕೆ. ರವಿಕುಮಾರ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬೀದರ, ಬಾಗಲಕೋಟೆ, ಯಾದಗಿರಿ ಜಿಲ್ಲಾ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಆನೆಕಾಲು ರೋಗ ನಿರ್ಮೂಲನೆ ಕಾರ್ಯಕ್ರಮದ ವಿಭಾಗ ಮಟ್ಟದ ವಿಶೇಷ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಒಂಭತ್ತು ಜಿಲ್ಲೆಗಳಲ್ಲಿ ಆನೆಕಾಲು ರೋಗ ಹೆಚ್ಚಿಗೆ ಇತ್ತು. ಈ ಪೈಕಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆನೇಕಾಲು ರೋಗವನ್ನು ನಿರ್ಮೂಲನೆ ಮಾಡಲಾಗಿದೆ. ಉಳಿದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ನಿರ್ಮೂಲನೆ ಆಗಬೇಕಾಗಿದೆ ಎಂದರು.
ಆರೋಗ್ಯ ಇಲಾಖೆಯಿಂದ ಅನೇಕಾಲು ರೋಗಕ್ಕೆ ನೀಡುವ ಸಾಮೂಹಿಕ ಔಷಧಿ ವಿತರಣಾ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಆನೆಕಾಲು ರೋಗ ನಿರ್ಮೂಲನೆಗೆ ಪ್ರದೇಶವಾರು ನಿರ್ದಿಷ್ಟ ಕ್ರಿಯಾ ಯೋಜನೆ ರೂಪಿಸಿ ಗಂಭೀರವಾಗಿ, ಗುಣಾತ್ಮಕವಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಆನೆಕಾಲು ರೋಗ ನಿರ್ಮೂಲನೆಯು ಆರೋಗ್ಯ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ರೋಗ ವಾಹನ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಜಂಟಿ ನಿರ್ದೇಶಕ ಡಾ| ಶಿವರಾಜ ಸಜ್ಜನಶೆಟ್ಟಿ ಮಾತನಾಡಿ, ರಾಜ್ಯದ 14.45 ಲಕ್ಷ ಜನ ಆನೆಕಾಲು ರೋಗದ ಅಪಾಯಕ್ಕೆ ಒಳಗಾಗಿದ್ದಾರೆ. ಆನೆಕಾಲು ರೋಗ ನಿರ್ಮೂಲನೆಗೆ 2004 ರಿಂದ ರಾಜ್ಯದಲ್ಲಿ ಸಾಮೂಹಿಕ ಔಷಧಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ವರೆಗೆ 15 ಸುತ್ತಿನ ಸಾಮೂಹಿಕ ಔಷಧಿ ವಿತರಣಾ ಕಾರ್ಯಕ್ರಮ ನಡೆದಿದೆ ಎಂದು ವಿವರಿಸಿದರು.
ಕಲಬುರಗಿ, ಯಾದಗಿರಿ ಮತ್ತು ಬೀದರ ಜಿಲ್ಲೆಗಳಲ್ಲಿ ಆನೆಕಾಲು ರೋಗ ಹತೋಟಿಗೆ ಬರದ ಪ್ರಯುಕ್ತ ಇನ್ನೂ ಸಾಮೂಹಿಕ ಔಷಧ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ರಾಯಚೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಆನೆಕಾಲು ರೋಗ ಭಾಗಶಃ ನಿರ್ಮೂಲನೆಯಾಗಿದ್ದು, ಅಲ್ಲಿ ಪ್ರಸರಣಾ ಮೌಲ್ಯಮಾಪನ ನಡೆಸಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು ಇನ್ನು ಮುಂದೆ ಸಾಮೂಹಿಕ ಔಷಧಿ ವಿತರಣಾ ಕಾರ್ಯಕ್ರಮದಲ್ಲಿ ಔಷಧಿಗಳನ್ನು ಖುದ್ದಾಗಿ ನುಂಗಿಸಲು ಕ್ರಮ ಜರುಗಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಕೆ. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 8270 ಆನೆಕಾಲು
ರೋಗಿಗಳಿದ್ದು, ಈ ಪೈಕಿ 1213 ಜೈಡ್ರೋಸಿಲ್ ನಿಂದ ಬಳಲುತ್ತಿದ್ದಾರೆ. ಆನೆಕಾಲು ರೋಗ ನಿರ್ಮೂಲನೆಗೆ ನಿಖರ ಕಾರ್ಯಕ್ರಮ ಹಮ್ಮಿಕೊಳ್ಳುವುದು ಅವಶ್ಯಕವಿದೆ ಎಂದರು.
ರಾಷ್ಟ್ರೀಯ ರೋಗ ವಾಹನ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಉಪನಿರ್ದೇಶಕ ಡಾ| ಪ್ರಕಾಶಕುಮಾರ ಬಿ.ಜಿ., ಸಂಶೋಧನಾಧಿಕಾರಿ ಡಾ| ಮಹ್ಮದ್ ಶರೀಫ್, ಬೀದರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪಾಲ್ಗೊಂಡಿದ್ದರು. ಮಲೇರಿಯಾ ವಿಭಾಗದ ಜಿಲ್ಲಾ ಸಮಾಲೋಚಕ ಕರಣಿಕ ಕೋರೆ ನಿರೂಪಿಸಿದರು. ಕಾಲರಾ
ನಿಯಂತ್ರಣಾಧಿಕಾರಿ ಡಾ| ಗಣಜಲಖೇಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.