ಅಲ್ಲಮಪ್ರಭು ಬದುಕೇ ಆದರ್ಶ

Team Udayavani, Feb 26, 2017, 3:06 PM IST

gul6.jpg

ಶಹಾಬಾದ: ತನಗೆ ತೋಚಿದ್ದನ್ನು ತಾನು ಕಂಡದ್ದನ್ನು ಅಂದಿನ ಸಮಾಜದ ಅಂಕು ಡೊಂಕುಗಳನ್ನು ತನ್ನ ನೇರ ನಡೆನುಡಿಗಳಿಗೆ ವಚನ ರೂಪ ನೀಡಿದ. ಅದರಂತೆ ಬದುಕಿ ಇತರರಿಗೆ ಮಾರ್ಗದರ್ಶನ ತೋರಿದ ನಿಜಶರಣ ಅಂಬಿಗರ ಚೌಡಯ್ಯ ಆದರ್ಶ ಮಾನವ ಎಂದು ತೊನಸನಹಳ್ಳಿ (ಎಸ್‌) ಅಲ್ಲಮಪ್ರಭು ಸಂಸ್ಥಾನ ಪೀಠದ ಮಲ್ಲಣಪ್ಪ ಮಹಾಸ್ವಾಮೀಜಿ ಹೇಳಿದರು. 

ಮುತ್ತಗಾ ಗ್ರಾಮದಲ್ಲಿ ಕೋಲಿ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಅಂಬಿಗರ ಚೌಡಯ್ಯನವರು ಹನ್ನೆರಡನೇ ಶತಮಾನದ ಬಸವಣ್ಣನವರ ಸಮಕಾಲೀನರು. 

ಸಾವಿರಾರು ವರ್ಷಗಳಿಂದ ಧರ್ಮ-ದೇವರುಗಳ ಬಗೆಗೆ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳನ್ನೆಲ್ಲ ಚೌಡಯ್ಯನವರು ಹೊಡೆದೋಡಿಸುತ್ತಲೇ ವಿಚಾರಪರವಾದ, ವಾಸ್ತವವಾದ ಅಂಶಗಳನ್ನು ಜನಮನದಲ್ಲಿ ಮೂಡಿಸಿದರು ಎಂದರು. ಇಂದಿಗೂ ಅನೇಕ ಜನರಲ್ಲಿ ಮೂಢನಂಬಿಕೆ, ಅಜ್ಞಾನ ತುಂಬಿ ಸಮಾಜ ಹಿಂದುಳಿಯಲು ಕಾರಣವಾಗಿದೆ. 

ಇದರಿಂದ ಹೊರಬೇಕಾದರೆ ನಮ್ಮ ಮಕ್ಕಳು ಹೆಚ್ಚು ಶಿಕ್ಷಣವಂತರಾಗಬೇಕು. ಅಲ್ಲದೇ ಬಸವಾದಿ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಮಳಖೇಡ ಹಜರತ್‌ ಸೈಯದ್‌ ಶಹಾ ಮುಸ್ತಫಾಖಾದ್ರಿ ಮಾತನಾಡಿ, ಸ್ವಂತಿಕೆಯಿಂದ ಯೋಚಿಸಿ ಸ್ವಾಭಿಮಾನದ ಬದುಕು ಬದುಕಬೇಕೆಂಬ ಅಂಶವನ್ನು ಅಂಬಿಗರ ಚೌಡಯ್ಯ ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ ಎಂದರು.

ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ ಮಾತನಾಡಿ, ಚೌಡಯ್ಯನಲ್ಲಿ ಸಾಮಾಜಿಕ ಕಳಕಳಿ ಅಗಾಧವಾಗಿತ್ತು. ಹಾಗೆಂದೆ ಸಮಾಜದಲ್ಲಿನ ಅಸಂಪ್ರದಾಯಿಕ ಆಚರಣೆಗಳನ್ನು ವಚನದಲ್ಲಿ ಬಯಲಿಗೆಳೆದಿದ್ದಾನೆ. ಮೇಲ್ವರ್ಗದವರ ದಬ್ಟಾಳಿಕೆ, ಪುರೋಹಿತಶಾಹಿಗಳ ಶೋಷಣೆ, ಧಾರ್ಮಿಕ ಹೆಸರಿನಲ್ಲಿ ನಡೆಯುವ ಮೋಸ, ವಂಚನೆ, ಲಿಂಗಭೇದ, ವರ್ಗಭೇದಗಳಲ್ಲಿತಾರತಮ್ಯ ಇವೇ ಮೊದಲಾದ ಅಂಧಾನುಕರಣೆ ವಿರುದ್ಧ ಹೋರಾಡಿದ್ದಾರೆ ಎಂದು ಹೇಳಿದರು. 

ಪೇಠಶಿರೂರನ ಸಿದ್ದಲಿಂಗ ಸ್ವಾಮೀಜಿ, ಯಾದಗಿರಿ ಕೋಲಿ ಸಮಾಜದ ಅಧ್ಯಕ್ಷ ಉಮೇಶ ಮುದ್ನಾಳ, ಮಾಜಿ ಜಿಪಂ ಸದಸ್ಯೆ ಶೋಭಾ ಬಾಣಿ, ತಾಪಂ ಸದಸ್ಯೆರಾದ ಸಂಗೀತಾ ದೇವೆಂದ್ರ ಕಾರೊಳ್ಳಿ, ಶ್ರೀದೇವಿ ಪ್ರಕಾಶ ಮಸಬೂ, ವಿಜಯಲ ಸುರೇಶ ಚವ್ಹಾಣ, ನಗರ ಕೋಲಿ ಸಮಾಜದ ಅಧ್ಯಕ್ಷ ನಿಂಗಪ್ಪ ಹುಳಗೋಳಕರ್‌, ಶಿವುಕುಮಾರ ಯಾಗಾಪುರ,  ಶಿವಕುಮಾರ ಸುಣಗಾರ, ಭಂಕೂರ ಗ್ರಾಪಂ ಅಧ್ಯಕ್ಷೆ ವಿಜಯ ವಗ್ಗನ್‌, ಮೃತ್ಯುಂಜಯ ಹಿರೇಮಠ, ಸಂಪೂರ್ಣಬಾಯಿ ದತ್ತು ಹಾಗೂ ಇತರರು ಇದ್ದರು. 

ಟಾಪ್ ನ್ಯೂಸ್

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.