ಗುತ್ತಿಗೆ ಪದ್ಧತಿ ರದ್ದತಿಗೆ ಜೆಸ್ಕಾಂ ನೌಕರರ ಆಗ್ರಹ
Team Udayavani, Mar 31, 2017, 3:09 PM IST
ಕಲಬುರಗಿ: ಗುತ್ತಿಗೆ ಪದ್ಧತಿ ರದ್ದುಪಡಿಸಿ ಎಲ್ಲ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ವಿದ್ಯುತ್ ನೌಕರರ ಫೆಡರೇಷನ್ ಜೆಸ್ಕಾಂ ವಿಭಾಗ ಸಮಿತಿ ನೇತೃತ್ವದಲ್ಲಿ ಜೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿ, ವಿದ್ಯುತ್ ಇಲಾಖೆಯಲ್ಲಿ ಖಾಲಿಯಿರುವ ಎಲ್ಲಾ ಕಾಯಂ ಹುದ್ದೆಗಳಿಗೆ ಗುತ್ತಿಗೆ ನೌಕರರಲ್ಲಿ ಅರ್ಹರಾದವರನ್ನು ನೇಮಕ ಮಾಡಬೇಕು. ವಿದ್ಯುತ್ ತಿದ್ದುಪಡಿ ಮಸೂದೆ 2014 ನ್ನು ಜಾರಿಗೊಳಿಸದೆ ಕೈಬಿಡಬೇಕೆಂದು ಒತ್ತಾಯಿಸಿದರು.
ಕನಿಷ್ಠ ವೇತನ ಕಾನೂನನ್ನು ತಿದ್ದುಪಡಿ ಮಾಡಿ ಎಲ್ಲ ರೀತಿಯ ಗುತ್ತಿಗೆ ನೌಕರರಿಗೆ ಕನಿಷ್ಠ 15 ಸಾವಿರ ರೂ. ನೀಡಬೇಕು, ಅರೆಕುಶಲ ನೌಕರರಿಗೆ 18 ಸಾವಿರ ರೂ., ಕುಶಲ ಕಾರ್ಮಿಕರಿಗೆ 21 ಸಾವಿರ ರೂ. ವೇತನವನ್ನು ಪ್ರತಿ ತಿಂಗಳ 5ನೇ ತಾರೀಕಿನೊಳಗೆ ಕಾರ್ಮಿಕರ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕೆಂದು ಒತ್ತಾಯಿಸಿದರು.
ಕಾಯಂ ನೌಕರರು ಮಾಡುತ್ತಿರುವ ಕೆಲಸವನ್ನು ಗುತ್ತಿಗೆ ಕಾರ್ಮಿಕರು ಮಾಡುತ್ತಿರುವುದರಿಂದ ಕಾಯಂ ನೌಕರರಿಗೆ ನೀಡುತ್ತಿರುವ ವೇತನ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕೀ, ಕೆಎಸ್‌ಇಇಯು ರಾಜ್ಯಾಧ್ಯಕ್ಷ ಸತ್ಯಬಾಬು, ರಾಯಚೂರು ಜೆಸ್ಕಾಂ ಗುತ್ತಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೆ.ಜಿ.ವಿರೇಶ, ಜಿಲ್ಲಾಧ್ಯಕ್ಷ ಮುದ್ದುರಂಗಪ್ಪ ಹಾಗೂ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.