ವರದಿ ಪಾಸಿಟಿವ್ ಬಂತು, ಇದನ್ನು ಕೇಳಿ ಆಘಾತಗೊಂಡು ವ್ಯಕ್ತಿ ಸಾವು ; ಆಮೇಲೆ ನೆಗೆಟಿವ್ ಬಂತು!
Team Udayavani, Jul 23, 2020, 8:07 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹೊತ್ತಲ್ಲೇ ಗುರುವಾರ ವಿಚಿತ್ರ ಘಟನೆಯೊಂದು ನಡೆದಿರುವುದು ಇದೀಗ ವರದಿಯಾಗಿದೆ.
ತನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂಬ ಸುದ್ದಿ ಕೇಳಿಯೇ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಂತರ ಮರಣೋತ್ತರವಾಗಿ ನಡೆಸಿದ ಆಂಟಿಜನ್ RAPID ಪರೀಕ್ಷೆಯಲ್ಲಿ ಆ ವ್ಯಕ್ತಿಗೆ ಕೋವಿಡ್ ನೆಗೆಟಿವ್ ಎಂದು ವರದಿ ಬಂದಿದೆ.
ಇಲ್ಲಿನ ಭವಾನಿ ನಗರದ ನಿವಾಸಿ, 55 ವರ್ಷದ ಆಟೋ ಚಾಲಕರೊಬ್ಬರು ಜು.8ರಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಗುರುವಾರ ಬೆಳಿಗ್ಗೆ, ಅಂದರೆ 15 ದಿನಗಳ ನಂತರ ಆರೋಗ್ಯ ಇಲಾಖೆಯವರು ವ್ಯಕ್ತಿಗೆ ಕರೆ ಮಾಡಿ ನಿಮಗೆ ಪ್ರಯೋಗಾಲಯದ ವರದಿಯಲ್ಲಿ ಕೋವಿಡ್ 19 ಸೋಂಕು ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ ಮಾತ್ರವಲ್ಲದೇ ಎಲ್ಲಿಗೂ ಹೊರಹೋಗಬೇಡಿ ಮನೆಯಲ್ಲಿ ಇರಿ ಎಂದು ಹೇಳಿದ್ದಾರೆ.
ಇತ್ತ, ತನಗೆ ಪಾಸಿಟಿವ್ ಬಂದಿದೆ ಎಂದು ವಿಷಯ ತಿಳಿಯುತ್ತಲೇ ಗಾಬರಿಗೊಂಡ ಆ ವ್ಯಕ್ತಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ಮತ್ತು ಒದ್ದಾಡುತ್ತಾ ಸ್ವಲ್ಪ ಹೊತ್ತಿನಲ್ಲೇ ಸಾವಿಗೀಡಾಗಿದ್ದಾರೆ. ಅಷ್ಟರಲ್ಲಿ ಕೋವಿಡ್ ಯೋಧರೂ ಸಹ ಈ ವ್ಯಕ್ತಿಯ ಮನೆಗೆ ತಲುಪಿದ್ದು, ಈ ಘಟನೆ ನೋಡಿ ಅವರೂ ಗಾಬರಿಗೊಂಡಿದ್ದಾರೆ.
ಇದನ್ನೂ ಓದಿ: ಜು.23: ರಾಜ್ಯದಲ್ಲಿ ನಿತ್ಯ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕೇರಿಕೆ; 97 ಸಾವು, 2071 ಚೇತರಿಕೆ
ಮೃತ ದೇಹವನ್ನು ಜಿಮ್ಸ್ ಆಸ್ಪತ್ರೆಗೆ ಸಾಗಿಸಿದ ಬಳಿಕ ಅಲ್ಲಿ ಮತ್ತೊಮ್ಮೆ ಆಂಟಿಜನ್ RAPID ಪರೀಕ್ಷೆ ನಡೆಸಲಾಗಿದೆ. ಆಗ ಕೋವಿಡ್ ನೆಗೆಟಿವ್ ವರದಿ ತೋರಿಸಿದೆ ಎಂದು ಕಲಬುರಗಿ ತಾಲೂಕ ವೈದ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ತಿಳಿಸಿದ್ದಾರೆ.
ಹಿನ್ನೆಲೆ ಏನು?: ಈ ಹಿಂದೆ ಮೃತ ವ್ಯಕ್ತಿಯ ಅಳಿಯನಿಗೆ ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಹೀಗಾಗಿ ಇಡೀ ಕುಟುಂಬದದವರು ಜು.8ರಂದು ಗಂಟಲು ದ್ರವದ ಮಾದರಿ ನೀಡಿ ಸೋಂಕು ಪತ್ತೆ ಪರೀಕ್ಷೆಗೆ ಒಳಗಾಗಿದ್ದರು. ಆದರೆ, 15 ದಿನಗಳಾದರೂ ವರದಿ ಬಗ್ಗೆ ಯಾರೂ ಏನೂ ಹೇಳಿರಲಿಲ್ಲ.
ಇದೀಗ ತನಗೆ ಕೋವಿಡ್ ಸೋಂಕು ಇದೆ ಎಂದು ಕೇಳಿಯೇ ಆಘಾತಗೊಂಡು ಸಾವಿಗೀಡಾದ ವ್ಯಕ್ತಿಯ ಮರಣೋತ್ತರ ಸೋಂಕು ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದು ಅವರ ಕುಟುಂಬ ಸದಸ್ಯರನ್ನು ಆಘಾತಕ್ಕೀಡುಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್‌ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
Border-Gavaskar Trophy: ಮಿಚೆಲ್ ಮಾರ್ಷ್ ಗಾಯಾಳು; ವೆಬ್‌ಸ್ಟರ್ ಬ್ಯಾಕಪ್ ಆಟಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.