ಅರ್ಥಪೂರ್ಣ ಹೈಕ ವಿಮೋಚನಾ ದಿನ ಆಚರಣೆಗೆ ತೀರ್ಮಾನ
Team Udayavani, Sep 9, 2017, 10:08 AM IST
ಕಲಬುರಗಿ: ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನವನ್ನು ನಗರ ಮತ್ತು ಜಿಲ್ಲೆಯಾದ್ಯಂತ ಸೆ.17ರಂದು ಅರ್ಥಪೂರ್ಣವಾಗಿ ಆಚರಿಸಲು ಹಾಗೂ ಮುಖ್ಯಮಂತ್ರಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ಶುಕ್ರವಾರ ನಡೆದ ಹೈದ್ರಾಬಾದ ಕರ್ನಾಟಕ ಪ್ರದೇಶ ವಿಮೋಚನಾ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆ ತೀರ್ಮಾನಿಸಿತು.
ಜಿಲ್ಲಾಧಿಕಾರಿ ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೆ.17ರಂದು ಬೆಳಗ್ಗೆ 8:30 ಗಂಟೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾಲಾರ್ಪಣೆ ಮಾಡುವರು.ನಂತರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಡಿಎಆರ್) ಮೈದಾನದಲ್ಲಿ ಬೆಳಗ್ಗೆ 9:00
ಗಂಟೆಗೆ ಹೈದ್ರಾಬಾದ ಕರ್ನಾಟಕ ವಿಮೋಚನೆ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಹೈದ್ರಾಬಾದ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಪಾಲ್ಗೊಂಡ ಸ್ವಾತಂತ್ರ್ಯಯೋಧರಿಗೆ ಸನ್ಮಾನಿಸಲಾಗುವುದು. ನಂತರ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹೈದ್ರಾ ಬಾದ ಕರ್ನಾಟಕ ವಿಮೋಚನೆಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಜಿಲ್ಲಾ ಕಚೇರಿಗಳಲ್ಲಿ ಧ್ವಜಾರೋಹಣ
ನೆರವೇರಿಸಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಪೊಲೀಸ ಪರೇಡ್ ಮೈದಾನದಲ್ಲಿ ನಡೆಯುವ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಯಿತು. ಹಾಜರಾಗದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಶುಕ್ರವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಗೆ ಗೈರು ಹಾಜರಾದ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ, ನಗರ ನೀರು ಸರಬರಾಜು ಮಂಡಳಿ ಮತ್ತು ಜೆಸ್ಕಾಂ
ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಮಾರಂಭದ ಸೂಕ್ತ ವೇದಿಕೆ ನಿರ್ಮಾಣ ಹಾಗೂ ಸಮಾರಂಭಕ್ಕೆ ಆಗಮಿಸುವ ಹೈಕೋರ್ಟ್ ನ್ಯಾಯಾಧೀಶರಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ, ಹೈದ್ರಾಬಾದ ಕರ್ನಾಟಕ ವಿಮೋಚನಾ ಚಳವಳಿ ಹೋರಾಟಗಾರರಿಗೆ, ಗಣ್ಯವ್ಯಕ್ತಿಗಳಿಗೆ, ಪತ್ರಕರ್ತರಿಗೆ ಹಾಗೂ ಅಧಿಕಾರಿಗಳಿಗೆ ಬಿಸಿಲು ಬೀಳದಂತೆ, ಮಳೆ ಬರುವ ಸಂಭವ ಇರುವುದರಿಂದ ವಾಟರ್ ಪ್ರೂಫ್ ಶ್ಯಾಮಿಯಾನ, ಆಸನಗಳ ವ್ಯವಸ್ಥೆ ಮತ್ತು ಸಮರ್ಪಕ ವಿದ್ಯುತ್ ಮತ್ತು ಧ್ವನಿವರ್ಧಕ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.
ದಿನಾಚರಣೆ ಅಂಗವಾಗಿ ಸಾಮೂಹಿಕ ಪಥಸಂಚಲನ, ಕವಾಯತು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಆಯೋಜಿಸಲು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ ಸ್ವತ್ಛಗೊಳಿಸಬೇಕು. ವಾಟರ್ ಬೋರ್ಡ್ ಮತ್ತು ಮಹಾನಗರ ಪಾಲಿಕೆಯಿಂದ ಧ್ವಜಾರೋಹಣ ನಡೆಯುವ ಮೈದಾನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಅಂಬ್ಯುಲೆನ್ಸ್ ಮತ್ತು ಅಗ್ನಿಶಾಮಕದಳದ ವ್ಯವಸ್ಥೆ, ಮಕ್ಕಳಿಗೆ ಸಿಹಿ ತಿಂಡಿ ನೀಡುವ ವ್ಯವಸ್ಥೆ, ಸಮಾರಂಭದಲ್ಲಿ ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಜಿಲ್ಲಾ ಹೆಚ್ಚುವರಿ ಪೊಲೀಸ ಅಧೀಕ್ಷಕ ಜಯಪ್ರಕಾಶ, ವಿಧಾನ ಪರಿಷತ್ ಮಾಜಿ ಶಾಸಕ ಶಶೀಲ ಜಿ.ನಮೋಶಿ, ಹೈದ್ರಾಬಾದ ಕರ್ನಾಟಕ ವಿಮೋಚನಾ ಸಮಿತಿ ಸದಸ್ಯ ಲಕ್ಷ್ಮಣ ದಸ್ತಿ, ಸಾಹಿತಿ ಪ್ರೊ| ವಸಂತ ಕುಷ್ಠಗಿ, ಗಣ್ಯರಾದ ಶಿವರಾಜ ಪಾಟೀಲ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಸಭೆಯ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.