ನಾಡಿನ ಹೆಸರು ಜಗತ್ತಿನಾದ್ಯಂತ ಹರಡಲಿ
Team Udayavani, Nov 21, 2017, 10:32 AM IST
ಕಲಬುರಗಿ: ಕರುನಾಡಿನ ಹೆಸರು ಜಗತ್ತಿನಾದ್ಯಂತ ಹರಡುವಂತೆ ನಮ್ಮ ಕ್ರೀಡಾಪಟುಗಳು ಮಾಡಬೇಕು. ಅದಕ್ಕಾಗಿ ಇಂತಹ ವೇದಿಕೆಗಳನ್ನು ನಿರ್ಮಾಣ ಮಾಡಿ ಅವರಿಗೆ ತಮ್ಮ ಪ್ರತಿಭೆ ಗಟ್ಟಿಗಳಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ನೀಡಲಾಗುತ್ತಿದೆ ಎಂದು ಪಾಲಿಕೆ ಮಹಾಪೌರ ಶರಣಕುಮಾರ ಮೋದಿ ಹೇಳಿದರು.
ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರದಿಂದ ಆರಂಭವಾದ ರಾಜ್ಯ ಮಟ್ಟದ 14 ಮತ್ತು 17 ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಲಾನ್ ಟೆನಿಸ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಸೋಲು- ಗೆಲುವು ಪ್ರಮುಖ ಪಾತ್ರ ವಹಿಸುವುದಿಲ್ಲ. ತಮ್ಮ ಕ್ರೀಡೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸದೇ ಮುಂದುವರಿಸಿದಲ್ಲಿ ಒಂದಲ್ಲ ಒಂದು ದಿನ ಜಯಸಿಕ್ಕೆ ಸಿಗುತ್ತದೆ. ಅಲ್ಲಿಯವರೆಗೂ ಪರಿಶ್ರಮ ಪಡಬೇಕು.
ತರಬೇತಿ, ಏಕಾಗ್ರತೆ ಮತ್ತು ಶ್ರಮದಿಂದ ಉತ್ತಮ ಕ್ರೀಡಾಪಟು ಹೊರಬರುತ್ತಾನೆ ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಸುವರ್ಣಾ ಹಣಮಂತರಾರ ಮಲಾಜಿ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಾಂತಗೌಡ ಪಾಟೀಲ, ಕ್ರೀಡೆಗಳು ಶಿಕ್ಷಣದ ಒಂದು ಪ್ರಮುಖ ಭಾಗವಾಗಿದೆ. ಈ ಕ್ಷೇತ್ರಕ್ಕೆ ಶಿಕ್ಷಣ ಇಲಾಖೆ ಹೆಚ್ಚಿನ ಪ್ರಾತಿನಿಧ್ಯ ನೀಡುತ್ತಿದೆ. ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳಿಗೆ ಅಗತ್ಯ ಮೂಲ ಸೌಕರ್ಯಕಲ್ಪಿಸಲಾಗುತ್ತಿದ್ದು, ಕ್ರೀಡಾಪಟುಗಳನ್ನು ಕ್ರೀಡಾಂಗಣಕ್ಕೆ ಕರೆ ತರಲು ವಾಹನದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಹೇಳಿದರು.
ಕ್ರೀಡಾಪಟುಗಳ ಯೋಗಕ್ಷೇಮ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಣ ಇಲಾಖೆ ಮೇಲಿದೆ. ಯಾವುದೇ ಕುಂದು-ಕೊರತೆಗಳನ್ನು ನೋಡಿಕೊಳ್ಳಲು 40 ಜನ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಲಾಗಿದೆ. ರಾಜ್ಯದ 34 ಜಿಲ್ಲೆಗಳನ್ನು ಸಂಪರ್ಕಿಸಿ ಇಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೋರಲಾಗಿತ್ತು. ಆದರೆ, ಕ್ರೀಡಾಕೂಟದಲ್ಲಿ ಹೆಚ್ಚು ತಂಡಗಳು ಭಾಗವಹಿಸಿಲ್ಲ ಎಂದು ಹೇಳಿದರು.
ಜಿಲ್ಲಾ ಕ್ರೀಡಾಧಿಕಾರಿ ಟಿ. ರವೀಂದ್ರಕುಮಾರ, ದೈಹಿಕ ಶಿಕ್ಷಣಾಧಿಕಾರಿ ವಿಜಯಕುಮಾರ, ತಾಲೂಕು ಮಟ್ಟದ ದೈಹಿಕಶಿಕ್ಷಣಾ ಧಿಕಾರಿಗಳಾದ ಎಂ.ಜಿ. ಬಿರಾದಾರ, ಎ.ಎಸ್. ವಗ್ಗಿ, ವೀರಭದ್ರಪ್ಪ ದೊಡ್ಡಮನಿ, ಎಸ್.ಎಂ. ಚೌಧರಿ, ನೀಲಕಂಠಪ್ಪ, ಜಿಲ್ಲಾ ಗ್ರೇಡ್ ಒನ್ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಡಾ| ಶಿವಲಿಂಗಪ್ಪ ಗೌಳಿ, ರಾಜ್ಯ ಉಪಾಧ್ಯಕ್ಷ ಚನ್ನಬಸಪ್ಪ ಕೊಲ್ಲೂರ, ಶಿವಶರಣಪ್ಪ ಮಂಠಾಳೆ ಪಾಲ್ಗೊಂಡಿದ್ದರು.
ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ರಟಕಲ್ ಕಾರ್ಯಕ್ರಮ ನಿರೂಪಿಸಿದರು. ಎಂ.ಜಿ. ಬಿರಾದಾರ ವಂದಿಸಿದರು. ಕ್ರೀಡಾ
ಕೋಚ್ ತರಬೇತಿದಾರ ವಿಶ್ವನಾಥ ಮತ್ತಿತರರು ಕ್ರೀಡಾಕೂಟ ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.