ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಕಾವು
Team Udayavani, May 21, 2018, 4:34 PM IST
ಕಲಬುರಗಿ: ಈಗಷ್ಟೇ ಮುಗಿದಿರುವ ರಾಜ್ಯ ವಿಧಾನಸಭೆ ಚುನಾವಣೆ ನಂತರ ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಎದುರಾಗಿದೆ.
ಬರುವ ಜೂನ್ 8ರಂದು ನಡೆಯುವ ಚುನಾವಣೆಗೆ ಪ್ರಮುಖವಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತೀವ್ರ ಕಸರತ್ತು ನಡೆಸಿವೆ. ಬಿಜೆಪಿಯಿಂದ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಹಾಲಿ ಸದಸ್ಯ ಅಮರನಾಥ ಪಾಟೀಲ ಅವರಿಗೆ ಎರಡನೇ ಬಾರಿಗೆ ಅವಕಾಶ ನೀಡದೆ ಬಳ್ಳಾರಿಯ ಕೆ.ಬಿ. ಶ್ರೀನಿವಾಸ ಅವರನ್ನು ಅಭ್ಯರ್ಥಿಯನ್ನಾಗಿಸಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಶ್ರೀನಿವಾಸ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಹೊಸಪೇಟೆ ಉದ್ಯಮಿ, ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಕೆ.ಬಿ. ಶ್ರೀನಿವಾಸ ಶನಿವಾರ ಇಲ್ಲಿನ ಪ್ರಾದೇಶಿಕ ಕಚೇರಿಯಲ್ಲಿ ಚುನಾವಣಾ ಧಿಕಾರಿ ಆಗಿರುವ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಅವರಿಗೆ ಶ್ರೀನಿವಾಸ ನಾಮಪತ್ರ ಸಲ್ಲಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ್ ನಮೋಶಿ, ಎಚ್‌ಕೆಸಿಸಿಐ ಅಧ್ಯಕ್ಷ
ಉಮಾಕಾಂತ ನಿಗ್ಗುಡಗಿ, ಕೆ.ಬಿ. ಶ್ರೀನಿವಾಸ ಅವರ ಧರ್ಮಪತ್ನಿ ರಾಣಿ ಸಂಯುಕ್ತಾದೇವಿ ಮತ್ತಿತರರು ಇದ್ದರು.
ಗೆಲುವು ನಿಶ್ಚಿತ: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಹಿಂದಿನಿಂದ ಬಿಜೆಪಿ ಗೆಲ್ಲುತ್ತಾ ಬಂದಿದೆ. “ಶನಿವಾರ ಪುನರ್ವಸು ನಕ್ಷತ್ರದ ಶುಭದಿನವಾಗಿದ್ದರಿಂದ ನಾಮಪತ್ರ ಸಲ್ಲಿಸಲಾಗಿದೆ. ಈ ಬಾರಿಯೂ ತಮ್ಮದೇ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಶ್ರೀನಿವಾಸ ಅವರು, ಈ ಭಾಗದ ವಿದ್ಯಾರ್ಥಿ,
ಯುವಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮೇಲ್ಮನೆಯಲ್ಲಿ ಧ್ವನಿಯೆತ್ತಿ ಪರಿಹಾರ ಕಲ್ಪಿಸಲು ಸ್ಪರ್ಧಿಸುತ್ತಿದ್ದೇನೆ. ಪದವೀಧರ ಮತದಾರರು ಆಶೀರ್ವದಿಸಲಿದ್ದಾರೆಂಬ ವಿಶ್ವಾಸವಿದೆ. ಪಕ್ಷದ ಮುಖಂಡರು ಪ್ರಚಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.