ಪ್ರತಿ ವರ್ಷ ಅಪಘಾತಕ್ಕೆ ಮೃತಪಡುವವರ ಸಂಖ್ಯೆ 500
Team Udayavani, Feb 5, 2019, 6:49 AM IST
ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲಾದ್ಯಂತ ಪ್ರತಿ ವರ್ಷ ಸರಾಸರಿ 350 ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಸುಮಾರು 500 ಜನರು ತಮ್ಮ ಅಮೂಲ್ಯ ಜೀವನ ಕಳೆದುಕೊಳ್ಳುತ್ತಿರುವುದು ಆತಂಕದ ವಿಷಯವಾಗಿದೆ. ಇದನ್ನು ತಪ್ಪಿಸಲು ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲನೆಯಿಂದ ಮಾತ್ರ ಸಾಧ್ಯ ಎಂದು ಎಸ್‌ಪಿ ಎನ್.ಶಶಿಕುಮಾರ ಹೇಳಿದರು. ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ ‘ರಸ್ತೆ ಸುರಕ್ಷೆ-ಜೀವನ ರಕ್ಷೆ’ ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರಿ ಸುಮಾರು 4ರಿಂದ 5 ಸಾವಿರ ಜನರು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಇಂತಹ ಅಪಘಾತ ಪ್ರಕರಣಗಳಿಂದ ತೊಂದರೆಗೆ ಈಡಾಗುತ್ತಿದ್ದಾರೆ. ಅಪಘಾತದಲ್ಲಿ ಮೃತರಾದ ವ್ಯಕ್ತಿಯ ಕುಟುಂಬದ ಪರಿಸ್ಥಿತಿ ಶೋಚನೀಯವಾಗಿದೆ. ಇಂತಹ ಸ್ಥಿತಿಗೆ ಯಾರು ಅವಕಾಶ ನೀಡದಂತೆ ಜಾಗೃತೆಯಿಂದ ವಾಹನ ಚಾಲನೆ ಮಾಡುವ ಮೂಲಕ ನಿಮ್ಮ ಪ್ರಾಣದೊಂದಿಗೆ ಸಹ ಪ್ರಯಾಣಿಕರ ಪ್ರಾಣ ಉಳಿಸಿ ಎಂದು ಕರೆ ನೀಡಿದರು.
ಸಾರಿಗೆ ಇಲಾಖೆ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ಜೆ. ಪುರುಷೋತ್ತಮ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ವರ್ಷ ದೇಶದಲ್ಲಿ 4 ಲಕ್ಷ ಅಫಘಾತ ಪ್ರಕರಣಗಳು ವರದಿಯಾಗುತ್ತಿವೆ. ಇದರಿಂದ 1 ಲಕ್ಷ ಜನ ತಮ್ಮ ಜೀವನ ಕಳೆದಕೊಳ್ಳುತ್ತಿದ್ದರೆ 2 ಲಕ್ಷ ಜನ ಗಾಯಾಳುಗಳಾಗುತ್ತಿದ್ದಾರೆ. ಅಪಘಾತಗಳಿಂದ ಸುಮಾರು 5000 ಕೋಟಿ ರೂ. ಆರ್ಥಿಕ ನಷ್ಟವಾಗುತ್ತಿದೆ. ಅಪಘಾತ ತಪ್ಪಿಸಲು ಅರಿವೆ ಮುಖ್ಯವಾಗಿದೆ. ಎಲ್ಲರು ರಸ್ತೆ ಸುರಕ್ಷತೆ ಬಗ್ಗೆ ಅರಿವು ಹೊಂದಬೇಕು ಹಾಗೂ ರಸ್ತೆ ಸಂಚಾರದ ನಿಯಮಗಳನ್ನು ಇತರರಿಗೂ ತಿಳಿಹೇಳಬೇಕು ಎಂದು ಹೇಳಿದರು.
ಪಾಲಿಕೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್, ಉಪ ಸಾರಿಗೆ ಆಯುಕ್ತ ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ, ಸಹಾಯಕ ಆಯುಕ್ತ ರಾಹುಲ ಪಾಂಡ್ವೆ, ವಿ.ಟಿ.ಯು. ಪ್ರಾದೇಶಿಕ ಕೇಂದ್ರದ ಕೋರ್ಸ್ ಕೋಆರ್ಡಿನೇಟರ್ ಡಾ| ವಿ. ಶಂಭುಲಿಂಗಪ್ಪ, ಸಂಚಾರಿ ಪೊಲೀಸ್ ಠಾಣೆಯ ಪಿಎಸ್.ಐ. ಭಾರತಿಬಾಯಿ ಸೇರಿದಂತೆ ಆರ್.ಟಿ.ಓ ಕಚೇರಿಯ ಮೋಟಾರು ನಿರೀಕ್ಷಕರಾದ ಈರಣ್ಣ, ಶರಣಯ್ಯ ಸ್ವಾಮಿ, ಸುರೇಶ ಶ್ರೀಮಂಡಲ ಭಾಗವಹಿಸಿದ್ದರು. ಆರ್‌ಟಿ0 ಕಚೇರಿ ಅಧಿಧೀಕ್ಷಕ ರಿಯಾಜ್ ಅಹ್ಮದ್ ಸ್ವಾಗತಿಸಿ ನಿರೂಪಿಸಿದರು. ಇದೇ ಸಂದರ್ಭದಲ್ಲಿ ರಸ್ತೆ ಸುರಕ್ಷತೆ ಸಂಬಂಧ ಕಿರುಚಿತ್ರ ಪ್ರದರ್ಶಿಸಲಾಯಿತು.
ಆಟೋ ಓಡಿಸಿದ ಎಸ್‌ಪಿ: ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಪ್ರದರ್ಶನಕ್ಕೆ ಇಡಲಾದ ಕೈನೆಟಿಕ್, ಶೀಗಲ್ ಕಂಪನಿಯ ವಿದ್ಯುತ್ ಚಾಲಿತ ಆಟೋಗಳಿಗೆ ಚಾಲನೆ ನೀಡಿದ ಎನ್. ಶಶಿಕುಮಾರ ನಂತರ ಆಟೋದಲ್ಲಿ ಇತರೆ ಅಧಿಕಾರಿಗಳನ್ನು ಕೂಡಿಸಿಕೊಂಡು ಸ್ವತಃ ಆಟೋ ಚಾಲನೆ ಮಾಡಿ ಎರಡು ಸುತ್ತು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.