ಕನಕದಾಸರ ತತ್ವ ಸರ್ವಕಾಲಕ್ಕೂ ಆದರ್ಶಪ್ರಾಯ
Team Udayavani, Feb 1, 2019, 6:55 AM IST
ಕಲಬುರಗಿ: ಸಂತ, ಶ್ರೇಷ್ಠ ಕವಿ ಕನಕದಾಸರ ಕೀರ್ತನೆಗಳು ಮತ್ತು ತತ್ವಗಳು ಸರ್ವಕಾಲಕ್ಕೂ ಆದರ್ಶಪ್ರಾಯವಾಗಿದ್ದು, ಜಾತಿ ಬೇಧವಿಲ್ಲದೆ ಸರ್ವ ಜನಾಂಗವು ಅವರ ಕೀರ್ತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದು ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್ ಹೇಳಿದರು.
ನಗರದ ಡಾ| ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸðತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಜನಿಸಿದ ಕನಕದಾಸರು ತಮ್ಮ ಕೀರ್ತನೆಗಳಿಂದ ಪ್ರಸಿದ್ಧಿ ಪಡೆದ ಸಂತರಾಗಿದ್ದಾರೆ ಎಂದರು.
ಅಪರ ಜಿಲ್ಲಾಧಿಕಾರಿ ರಾಚಪ್ಪ ಮಾತನಾಡಿ, ಕುರುಬ ಸಮುದಾಯ ಮುಂದೆ ಬರಬೇಕಾದರೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಪ್ರಗತಿ ಹೊಂದಲು ಸಾಧ್ಯ ಎಂದರಲ್ಲದೇ ಇತ್ತೀಚೆಗೆ ಜಾತಿ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾಣೆಯಾಗುತ್ತಿರುವುದು ಸಂತಸದ ಬೆಳವಣಿಗೆಯಾಗಿದೆ ಎಂದು ಹೇಳಿದರು.
ಭಂಕೂರಿನ ಕರ್ನಾಟಕ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಪಿ.ಎಸ್.ಕೋಕಟನೂರ ವಿಶೇಷ ಉಪನ್ಯಾಸ ನೀಡಿದರು.
ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಸಂತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಪಂ ಅಧ್ಯಕ್ಷೆ ಸುವರ್ಣ ಹಣಮಂತರಾಯ ಮಲಾಜಿ ಉದ್ಘಾಟಿಸಿದರು.
ಪಾಲಿಕೆ ಮಹಾಪೌರರಾದ ಮಲ್ಲಮ್ಮ ಎಸ್.ವಳಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ.ರಾಜಾ, ಜಿಲ್ಲಾ ಪಂಚಾಯತ ಸದಸ್ಯ ದಿಲೀಪ ಪಾಟೀಲ, ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಗುಂಡಗುರ್ತಿ ಬಳಬಟ್ಟಿ, ಕುರುಬರ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಗದೇವಪ್ಪ ಮುಗಟಾ, ಪ್ರಧಾನ ಕಾರ್ಯದರ್ಶಿ ಡಾ| ಬಾಬುರಾವ ಪೂಜಾರಿ, ಕುರುಬರ ಸಂಘದ ಮಾಜಿ ಅಧ್ಯಕ್ಷ ರೇವಣಸಿದ್ದಪ್ಪ, ನಾಗೇಂದ್ರಪ್ಪ ಪೂಜಾರಿ, ಹಣಮಂತ ಪೂಜಾರಿ ಹಾಗೂ ಸಮಾಜದ ಗಣ್ಯರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಮೇಳಕುಂದ ಮಠದ ಸ್ವಾಮೀಜಿ ಮಹಾದೇವಪ್ಪ ಮುತ್ಯಾ ಸಾನ್ನಿಧ್ಯ, ವಹಿಸಿದ್ದರು. ಕನ್ನಡ ಮತ್ತು ಸಂಸðತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸ್ವಾಗತಿಸಿದರೆ ಶಿವಾನಂದ ಅಣಜಗಿ ನಿರೂಪಿಸಿದರು, ಮಹೇಶ ಧರಿ ವಂದಿಸಿದರು.
ಸಂತ ಶ್ರೇಷ್ಠ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಕಲಬುರಗಿಯ ನೆಹರು ಗಂಜಿನ ನಗರೇಶ್ವರ ಬಾಲ ವಿಕಾಸ ಶಾಲೆಯಿಂದ ಆರಂಭಗೊಂಡು ಚೌಕ ಪೊಲೀಸ್ ಠಾಣೆ, ಸೂಪರ್ ಮಾರ್ಕೆಟ್, ಜಗತ್ ವೃತ್ತದ ಮೂಲಕ ಡಾ| ಎಸ್.ಎಂ.ಪಂಡಿತ ರಂಗಮಂದಿರದ ವರೆಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.