ಸಮಸ್ಯೆ ಉಲ್ಬಣಗೊಳಿಸುವುದು ಕೆಲವರ ಉದ್ದೇಶ: ಬಿಎಸ್‌ವೈ
Team Udayavani, Jan 21, 2017, 3:45 AM IST
ಕಲಬುರಗಿ: ರಾಜ್ಯ ಬಿಜೆಪಿಯಲ್ಲಿ ಗೊಂದಲವಿರುವುದು ನಿಜ. ಕೆಲವರಿಗೆ ಸಮಸ್ಯೆ ಬಗೆಹರಿಸುವುದನ್ನು ಬಿಟ್ಟು ಉಲ್ಬಣಗೊಳಿಸುವುದೇ ಉದ್ದೇಶವಾಗಿದೆ. ಆದರೂ ಇನ್ನೊಮ್ಮೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಈಶ್ವರಪ್ಪ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವರು ಪಕ್ಷದಲ್ಲಿ ಸಮಸ್ಯೆಗಳಿವೆ ಎಂದಾಗ ಅಹವಾಲು ಕೇಳಲು ಸಭೆ ಕರೆದಿದ್ದೆ. ಆದರೆ ಅವರದೇ ಕಾರಣಗಳಿಂದ ಬಂದಿಲ್ಲ. ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಕುರಿತು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ಕ್ರಮ ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.
ಜ.21 ರಿಂದ ಕಲಬುರಗಿಯಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಬ್ರಿಗೇಡ್ ಹಾಗೂ ಈಶ್ವರಪ್ಪ ಅವರ ಬಗ್ಗೆ ಚರ್ಚಿಸುವುದಿಲ್ಲ. 2018ರ ಚುನಾವಣೆ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವಲ್ಲಿ ಪಕ್ಷದ ಹೆಜ್ಜೆಗಳ ಕುರಿತು ಚರ್ಚಿಸಲಾಗುವುದು ಎಂದರು.
ನಂಜನಗೂಡು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸಪ್ರಸಾದ್ ಗೆಲುವು ಖಚಿತ. ಪ್ರಸಾದ್ ಅವರ ಸೇರ್ಪಡೆಯಿಂದ ಮೈಸೂರು ಮಾತ್ರವಲ್ಲದೇ ರಾಜ್ಯದಲ್ಲಿ ಬಿಜೆಪಿಗೆ ಇನ್ನಷ್ಟು ಶಕ್ತಿ ಬಂದಿದೆ ಎಂದರು. ಮಾಜಿ ಸಚಿವ ಸೋಮಣ್ಣ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರಲ್ಲ ಎನ್ನುವ ಪ್ರಶ್ನೆಗೆ ಬಿಎಸ್‌ವೈ ಉತ್ತರ ನೀಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.