ಪ್ರಾಧ್ಯಾಪಕರ ಬಡ್ತಿ ಅನ್ಯಾಯ ಸರಿಪಡಿಸಲು ಮನವಿ
Team Udayavani, Oct 18, 2021, 10:53 AM IST
ಕಲಬುರಗಿ: ಪ್ರಸ್ತುತ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ನೀಡಲು ನಿಗದಿಗೊಳಿಸಿರುವ ನಿಯಮಗಳನ್ನು ಉಲ್ಲಂಘಿಸಿ ಪಟ್ಟಿ ಸಿದ್ಧಪಡಿಸಿ ಅವಸರದಲ್ಲಿ ಪ್ರಕಟಿಸಿರುವುದನ್ನು ಸರಿಪಡಿಸುವಂತೆ ಹೈದ್ರಾಬಾದ್ ಕರ್ನಾಟಕ ಸರಕಾರಿ ಕಾಲೇಜು ಅಧ್ಯಾಪಕರ ಸಂಘ ಒತ್ತಾಯಿಸಿದೆ.
ಸಹ ಪ್ರಾಧ್ಯಾಪಕರಿಗೆ ಬಡ್ತಿ ನೀಡಲು ಅನುಸರಿಸಿದ ಮಾನದಂಡ ಅವೈಜ್ಞಾನಿಕವಾಗಿದ್ದು, ತಕ್ಷಣವೇ ಪರಿಷ್ಕೃರಿಸಬೇಕೆಂದು ಅಧ್ಯಾಪಕರ ಸಂಘವು ಉನ್ನತ ಶಿಕ್ಷಣ ಸಚಿವರಿಗೆ ಹಾಗೂ ಕಾಲೇಜು ಶಿಕ್ಷಣ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ.
ಇದನ್ನೂ ಓದಿ: ಕಣ್ಣಿಗೆ ಬಟ್ಟೆಕಟ್ಟಿ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ
ಸಂವಿಧಾನದ 371ನೇ (ಜೆ)ಕಲಂ ಕಾಯ್ದೆ ಅಡಿಯಲ್ಲಿ ಪ್ರಾಧ್ಯಾಪಕರ ಹುದ್ದೆಗಳಿಗೆ ಬಡ್ತಿ ನೀಡುವಾಗ ವಿಶೇಷ ಮೀಸಲಾತಿ ನೀಡಬೇಕೆಂಬ ನಿಯಮಾವಳಿಗಳನ್ನು ಉಲ್ಲಂಘಿಸಿರುವುದು ಉನ್ನತ ಶಿಕ್ಷಣ ವಿರೋಧಿ ಕ್ರಮವಾಗಿದೆ. ಪ್ರಮುಖವಾಗಿ ಪ್ರಾಧ್ಯಾಪಕರ ಬಡ್ತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧ್ಯಾಪಕರನ್ನು ಕಡೆಗಣಿಸಿರುವುದು ಸರ್ಕಾರದ ಪ್ರಜಾತಾಂತ್ರಿಕ ವಿರೋಧಿ ಕ್ರಮವಾಗಿದೆ. ಕಲ್ಯಾಣ ಕರ್ನಾಟಕದ ಸಹ ಪ್ರಾಧ್ಯಾಪಕರು ಪ್ರಾಧ್ಯಾಪಕರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಭರ್ತಿಮಾಡಿದ ಗೂಗಲ್ ಫಾರಂಗಳನ್ನು ಪರಿಪೂರ್ಣವಾಗಿ ಪರಿಶೀಲಿಸದೇ ಮತ್ತು ಸೇವಾ ಹಿರಿತನ ಪರಿಗಣಿಸದೇ ಇರುವುದು ಸರಿಯಲ್ಲ ಎಂದು ಸಂಘದ ಪದಾಧಿಕಾರಿಗಳು ಮನವಿಯಲ್ಲಿ ತಿಳಿಸಿದ್ದಾರೆ.
ಅಧ್ಯಾಪಕರ ಸಂಘದ ವಿಭಾಗೀಯ ಅಧ್ಯಕ್ಷ ಡಾ| ಶರಣಪ್ಪ ಸೈದಾಪುರ, ಪದಾಧಿಕಾರಿಗಳಾದ ಡಾ| ಅನಿಲಕುಮಾರ ಹಾಲು, ಡಾ| ಮಲ್ಲಿಕಾರ್ಜುನ ಶೆಟ್ಟಿ, ಡಾ| ಚಿನ್ನಾ ಆಶಪ್ಪ, ಡಾ| ಶರಣಪ್ಪ ಗುಂಡಗುರ್ತಿ, ಪ್ರೊ| ಚಿತ್ಕಲಾ ಮಠಪತಿ, ಪ್ರೊ| ಸಂತೋಷ ಹಂಪ್ಳಿ, ಡಾ| ಕಲ್ಯಾಣರಾವ್ ಪಾಟೀಲ, ಡಾ| ದೇವಿದಾಸ ರಾಠೊಡ, ಡಾ| ಶಂಕರ ರಾಠೊಡ, ಚನ್ನಬಸಯ್ಯ ಹಿರೇಮಠ, ಡಾ| ಶರಣಬಸಪ್ಪ ಚಿಕ್ಕಳ್ಳಿ ಇನ್ನಿತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.