ಶೀಘ್ರ ವಿಮಾನ ಹಾರಾಟ ಶುರು
Team Udayavani, Jun 20, 2018, 2:31 PM IST
ಕಲಬುರಗಿ: ಹಲವು ದಶಕಗಳಿಂದ ನಿರೀಕ್ಷಿಸಲಾಗುತ್ತಿರುವ ಕಲಬುರಗಿಯಿಂದ ವಿಮಾನ ಹಾರಾಟದ ಕಾಲ ಸನ್ನಿಹಿತವಾಗುವ ಲಕ್ಷಣಗಳು ಕಂಡು ಬಂದಿದ್ದು, ಮುಂದಿನ ಒಂದುವರೆ ಇಲ್ಲವೇ ಎರಡು ತಿಂಗಳಲ್ಲಿ ಶುಭಾರಂಭಗೊಳ್ಳುವ ಸಾಧ್ಯತೆಗಳಿವೆ.
ಶ್ರೀನಿವಾಸ ಸರಡಗಿ ಹತ್ತಿರದ ಗುಲಬರ್ಗಾ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಂಗಳವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಮುಂದಿನ ಒಂದೂವರೆ ತಿಂಗಳುಗಳಲ್ಲಿ ವಿಮಾನ ನಿಲ್ದಾಣ ಸಂಪೂರ್ಣ ಕಾರ್ಯನಿರ್ವಹಿಸುವಂತೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.
ವಿಮಾನ ನಿಲ್ದಾಣದ 3.25 ಕಿ.ಮೀ. ರನ್ವೇ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದೆ. ಬಹು ಮುಖ್ಯವಾಗಿ
ಮಾರ್ಕಿಂಗ್ ಮಾಡಬೇಕು. ವಿಮಾನ ನಿಲ್ದಾಣದ ಜೀವಾಳವೆಂದೇ ಭಾವಿಸಲಾಗಿರುವ ಎಟಿಸಿ ಕಟ್ಟಡ, ಫೈರ್
ಸ್ಟೇಶನ್ ಹಾಗೂ ಟರ್ಮಿನಲ್ ಬಿಲ್ಡಿಂಗ್ ನಿರ್ಮಾಣ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ರನ್ವೇ ಕಾಮಗಾರಿ ಹಾಗೂ ಕಾಂಪೌಂಡ್ ಗೋಡೆ ಸಂಪೂರ್ಣವಾಗಿ ನಿರ್ಮಿಸಿದಲ್ಲಿ ರಾಜ್ಯ ಸರ್ಕಾರದ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯಿಂದ ಯಾವುದೇ ಸಮಯದಲ್ಲಿ ಪ್ರಾಯೋಗಿಕವಾಗಿ ವಿಮಾನ ಹಾರಾಟ ನಡೆಸಲು ಸಿದ್ಧವಾಗುವುದರಿಂದ ಆದಷ್ಟು ಬೇಗ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ವಿಮಾನ ನಿಲ್ದಾಣ ಕಾಮಗಾರಿಯ ಮೊತ್ತವನ್ನು ಪರಿಷ್ಕೃತ 175 ಕೋಟಿ ರೂ.ಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರವು
ಅನುಮೋದನೆ ನೀಡಿದೆ. ಇದಕ್ಕೆ ಅನುಗುಣವಾಗಿ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ
ಪಾಲನ್ನು ನೀಡಲಾಗುವುದು. ಈಗಾಗಲೇ ವಿಮಾನ ನಿಲ್ದಾಣ ಕಾಮಗಾರಿಗೆ 92 ಕೋಟಿ ರೂ.ಗಳನ್ನು ಪಾವತಿಸಲಾಗಿದ್ದು, ಹಣಕಾಸಿನ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಜೀಜುದ್ದೀನ್,
ಇಂಜನೀಯರ್ ಎಂ. ಜಗದೇವ ಮತ್ತಿತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.