ಮಳೆ; ಮುಂಗಾರು ಬೆಳೆಗೆ ಜೀವ ಕಳೆ
Team Udayavani, Jul 19, 2022, 1:00 PM IST
ಚಿಂಚೋಳಿ: ತಾಲೂಕಿನಲ್ಲಿ ಎರಡು ದಿನಗಳಿಂದ ಮಳೆ ಆಗದೇ ಇರುವುದರಿಂದ ಕೃಷಿ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿದ್ದು, ಮುಂಗಾರು ಬೆಳೆಗಳಿಗೆ ಜೀವ ಕಳೆ ಬಂದಿದೆ.
ತಾಲೂಕಿನ ಐನಾಪುರ, ಚಿಮ್ಮನಚೋಡ, ಸಲಗರ ಬಸಂತಪುರ, ಸುಲೇಪೇಟ, ಗಡಿಕೇಶ್ವಾರ, ಚಂದನಕೇರಾ, ಮಿರಿಯಾಣ, ಕುಂಚಾವರಂ ಗ್ರಾಮಗಳಲ್ಲಿ ಬೆಳೆದ ತೊಗರಿ, ಹೆಸರು, ಉದ್ದು, ಸೋಯಾಬಿನ್ ಬೆಳೆಗಳಲ್ಲಿ ಎಡೆ ಹೊಡೆಯುತ್ತಿದ್ದಾರೆ. ಹೊಲದಲ್ಲಿ ಮಳೆ ನೀರು ನಿಂತುಕೊಂಡಿದ್ದರಿಂದ ಎತ್ತುಗಳ ಮೂಲಕ ಎಡೆ ಹೊಡೆಯದೇ ಬೆಳೆಗಳ ಸಾಲುಗಳಲ್ಲಿ ರೈತರು ತಾವೇ ಎಡೆ ಮಾಡಿಕೊಳ್ಳುತ್ತಿದ್ದಾರೆ. ಮಳೆಯಿಂದ ಬೆಳೆಗಳಲ್ಲಿ ಹುಲ್ಲು ವಿಪರೀತವಾಗಿ ಹೆಚ್ಚಾಗಿ ಬೆಳೆದಿರುವುದರಿಂದ ಕೃಷಿ ಚಟುವಟಿಕೆಗಳು ಹೆಚ್ಚು ನಡೆದಿವೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ರಾಠೊಡ ತಿಳಿಸಿದ್ದಾರೆ.
ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಲ್ಲಿ ಒಳಹರಿವು ಕಡಿಮೆ ಇದೆ. ಇದರಿಂದ ನದಿಗೆ ನೀರು ಹರಿದು ಬಿಡುತ್ತಿಲ್ಲವೆಂದು ಎಇಇ ಹಣಮಂತ ಪೂಜಾರಿ ತಿಳಿಸಿದ್ದಾರೆ.
ಚಂದ್ರಂಪಳ್ಳಿ ಜಲಾಶಯ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದೆ. ಇನ್ನು ಗೇಟಿನ ಬಳಿ ನೀರು ಬಂದಿಲ್ಲ ಮುಂದಿನ ದಿನಗಳಲ್ಲಿ ನೀರು ಹತ್ತಿರ ಬರಲಿದೆ ಎಂದು ಎಇಇ ಚೇತನ ಕಳಸ್ಕರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.