ಸೋರುತಿಹುದು ರಾಜಾಪುರ ಬ್ರಿಡ್ಜ್ ಕಂ ಬ್ಯಾರೇಜ್
Team Udayavani, Dec 10, 2019, 11:06 AM IST
ಕಾಳಗಿ: ತಾಲೂಕಿನ ರಾಜಾಪುರ ಗ್ರಾಮದಲ್ಲಿ ರೈತರ ಅನುಕೂಲಕ್ಕಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದ್ದರೂ ಮಳೆನೀರು ನಿಲ್ಲುತ್ತಿಲ್ಲ. ಇತ್ತೀಚೆಗೆ ಸುರಿದ ಮಳೆಯಿಂದ ಹಳ್ಳಕ್ಕೆ ನೀರು ಹರಿದು ಬಂದಿದ್ದು, ಗೇಟ್‌ಗಳ ನಡುವೆ ಅಧಿಕ ನೀರು ವ್ಯರ್ಥವಾಗಿ ಸೋರಿಕೆಯಾಗುತ್ತಿದೆ.
ಸುಮಾರು ಎಂಟು ವರ್ಷಗಳ ಹಿಂದೆ ಸಣ್ಣ ನೀರಾವರಿ ಇಲಾಖೆಯಡಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದೆ.ಚಿಂಚೋಳಿ ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ವಿವಿಧ ಹಳ್ಳ, ಕೆರೆಗಳಿಂದ ನೀರು ಹರಿದು ಬಂದಿದ್ದು, 18 ಗೇಟ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋರಿಕೆಯಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತಂದರೂ ಗಮನ ಹರಿಸುತ್ತಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರ ರೈತರ ಅನುಕೂಲಕ್ಕಾಗಿ ಹಳ್ಳಗಳಿಗೆ ಸೇತುವೆ ನಿರ್ಮಿಸುತ್ತಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿರ್ವಹಣೆ ಇಲ್ಲದೇ, ಗೇಟ್‌ಗಳ ಮೂಲಕ ನಿತ್ಯವೂ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಈ ಹಳ್ಳದಲ್ಲಿ ಅಧಿಕ ಪ್ರಮಾಣದ ಹೂಳು ತುಂಬಿಕೊಂಡಿದ್ದು, ಮಳೆಗಾಲಲ್ಲಿ ನೀರು ಸುತ್ತಮುತ್ತಲಿನ ರೈತರ ಹೊಲ, ತೋಟಗಳಿಗೆ ನುಗ್ಗುತ್ತಿದೆ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರಾಜಾಪುರ ಗ್ರಾಮದ ರೈತರಾದ ಸುಧಾಕರ ಪಾಟೀಲ, ಸಂಗರೆಡ್ಡಿ ಕವಳಸ, ಶರಣರೆಡ್ಡಿ ಮಳಗಿ, ನಜೀರಸಾಬ ಫಕೀರ, ರೇವಣಸಿದ್ಧ ಜಮಾದರ, ಖಾಜಿಶಾಬ ಹರಕಂಚಿ ಆರೋಪಿಸಿದ್ದಾರೆ.
ರಾಜಾಪುರ ಗ್ರಾಮದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಇದ್ದು ಇಲ್ಲದಂತಾಗಿದೆ. ಇತ್ತೀಚೆಗೆ ಮಳೆ ಬಂದು ನೀರು ಸಂಗ್ರಹವಾಗಿದೆ. ಆದರೆ ಸಂಗ್ರಹವಾದ ನೀರೆಲ್ಲ ಗೇಟ್‌ಗಳ ಮೂಲಕ ಸೋರಿಕೆಯಾಗಿ ಹರಿದು ಹೋಗುತ್ತಿದೆ. ಈ ಬಗ್ಗೆ ಸಂಬಂಧ ಪಟ್ಟವರು ಕೂಡಲೇ ಗಮನ ಹರಿಸಿ, ಹರಿದು ಹೋಗುವ ನೀರನ್ನು ಉಳಿಸಿಕೊಳ್ಳಬೇಕಿದೆ. –ಮಹೇಶರೆಡ್ಡಿ ಕವಳಸ, ಗ್ರಾಪಂ ಅಧ್ಯಕ್ಷ, ರಾಜಾಪುರ
–ಭೀಮರಾಯ ಕುಡ್ಡಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.