ಕುಂಚಾವರಂನಲ್ಲಿ ಮಕ್ಕಳ ಮಾರಾಟ-ಖಂಡನೆ
Team Udayavani, Mar 17, 2018, 1:05 PM IST
ಸೇಡಂ: ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ಹೆಣ್ಣು ಮಕ್ಕಳ ಮಾರಾಟ ನಡೆಯುತ್ತಿದ್ದು, ರಾಜ್ಯ ಸರ್ಕಾರ ಗಮನಹರಿಸಬೇಕು ಎಂದು ಕರವೇ ಅಧ್ಯಕ್ಷ ರಾಮಚಂದ್ರ ಗುತ್ತೇದಾರ ಆಗ್ರಹಿಸಿದರು.
ಕುಂಚಾವರಂನ ಮಕ್ಕಳ ಮಾರಾಟ ಘಟನೆ ಖಂಡಿಸಿ ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಸಲ್ಲಿಸಿದ ಅವರು, ಮಕ್ಕಳ ಮಾರಾಟದ ಹಿಂದಿರುವ ಮರ್ಮ ಅರಿಯಬೇಕು. ಅಲ್ಲಿನ ಜನತೆಗೆ ಹೆಚ್ಚಿನ ಸೌಲಭ್ಯ ಕಲ್ಪಿಸಿ, ಬಡತನದಿಂದ ಮುಕ್ತಿ ಕೊಡಿಸಬೇಕು ಎಂದು ಒತ್ತಾಯಿಸಿದರು.
ಮಕ್ಕಳ ಮಾರಾಟದಂತಹ ಕೀಳು ಮಟ್ಟದ ಸ್ಥಿತಿಗೆ ಜನ ತಲುಪಿರುವುದು ಇಡೀ ರಾಜ್ಯಕ್ಕೆ ಆದ ಅವಮಾನ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕುಂಚಾವರಂ ಭಾಗದ ಬಡ ಕುಟುಂಬಗಳಿಗೆ ವಿಶೇಷ ಯೋಜನೆಗಳನ್ನು ಘೋಷಿಸಬೇಕು. ಸೇಡಂನ ಕಲಬುರಗಿ ವೃತ್ತಕ್ಕೆ ಬಸವೇಶ್ವರ ಹೆಸರನ್ನಿಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕಾರ್ಯದರ್ಶಿ ವಿದ್ಯಾಸಾಗರ ದುದ್ದೇಲಿ, ಮಹೇಶ ಪಾಟೀಲ, ಶ್ರೀನಿವಾಸರೆಡ್ಡಿ, ದೇವು ನಾಟೀಕಾರ, ಮಹೇಶ ಇಮಡಾಪುರ, ಸುಭಾಶ ಇಮಡಾಪುರ, ರವಿ ಮದರಿ, ರವಿಸಿಂಗ ಇಮಡಾಪುರ, ಮಹಿಪಾಲ, ಭಗವಂತ ನಾಟೀಕಾರ, ಭೀಮಾಶಂಕರ, ಕಾಶಿನಾಥ ಮದರಿ, ಶಶಿ ಪಾಟೀಲ ಮುಗನೂರ, ಭೀಮರೆಡ್ಡಿ ಮಲ್ಕಾಪಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
MUST WATCH
ಹೊಸ ಸೇರ್ಪಡೆ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.