ಪ್ರಗತಿಗೆ ಸಮಾಜವಾದಿ ವ್ಯವಸ್ಥೆ ಅನಿವಾರ್ಯ
Team Udayavani, Feb 21, 2017, 3:13 PM IST
ಶಹಾಬಾದ: ರಷ್ಯಾ ದೇಶ ಸಾಧನೆ ಮಾಡಿದ್ದನ್ನು ಭಾರತ ಸಾಧಿಸಬೇಕಾದರೆ ಸಮಾಜವಾದಿ ವ್ಯವಸ್ಥೆ ಅನಿವಾರ್ಯ ಎಂದು ಎಸ್‌ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಹೆಚ್.ವಿ. ದಿವಾಕರ್ ಹೇಳಿದರು. ಎಐಡಿಎಸ್‌ಒ, ಎಐಡಿವೈಒ, ಎಐಎಂಎಸ್‌ಎಸ್ ಹಾಗೂ ಪ್ರೇರಣಾ ಸಾಂಸ್ಕೃತಿಕ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಷ್ಯಾದ ನವೆಂಬರ್ ಮಹಾಕ್ರಾಂತಿಗೆ ಸಮರ್ಪಿತ ಶಹಾಬಾದನ 7ನೇ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
ಸಿನಿಮಾ, ಸಾಹಿತ್ಯ, ಟಿವಿ ಹಾಗೂ ಇತರೆ ಮಾಧ್ಯಮಗಳಿಂದ ಹರಡುತ್ತಿರುವ ಅಶ್ಲೀಲ, ಕ್ರೌರ್ಯ, ಅನೈತಿಕತೆಗಳ ವಿರುದ್ಧ ಹೋರಾಡಲು ಹೊಸ ಸಂಸ್ಕೃತಿ, ಕಲೆ, ಸಾಹಿತ್ಯದ ಅಗತ್ಯತೆ ಇದೆ ಎಂದು ಹೇಳಿದರು. ಸಮಾಜವಾದಿ ವ್ಯವಸ್ಥೆ ಇರುವವರೆಗೂ ರಷ್ಯಾದಲ್ಲಿ ನಿರುದ್ಯೋಗ, ಬಡತನ, ಅನಕ್ಷರತೆ, ಬಾಲ ಕಾರ್ಮಿಕರ ಪದ್ಧತಿಯಂತಹ ಅನಿಷ್ಠ ಕುರುಹುಗಳು ಸಿಗಲಿಲ್ಲ.
ಬದಲಿಗೆ ಅಲ್ಲಿ ಎಲ್ಲರೂ ಸಹಬಾಳ್ವೆಯನ್ನು ಸಮಾನವಾಗಿ ನಡೆಸುತ್ತಿದ್ದರು. ಅದರಿಂದಾಗಿ ಆ ದೇಶ ಕೆಲವೇ ಕೆಲವು ವರ್ಷಗಳಲ್ಲಿ ಇಡೀ ಪ್ರಪಂಚವನ್ನೇ ಬೆರಗುಗೊಳಿಸುವಂತೆ ಸಾಧಿಸಿ ತೋರಿಸಿತು ಎಂದು ಹೇಳಿದರು. ಮನಸ್ಸಿನಲ್ಲಿ ಸದಭಿರುಚಿ ಹಾಗೂ ಕೊಳೆತ ವ್ಯವಸ್ಥೆ ವಿರುದ್ಧ ಹೋರಾಡುವ ಮನೋಭಾವ ಬೆಳೆಸುವಂತಹ ಕಲೆ, ಸಾಹಿತ್ಯ, ನಾಟಕ, ಹಾಡು, ಕವನಗಳು ಸಮಾಜದಲ್ಲಿ ಬರಬೇಕು ಎಂದು ಹೇಳಿದರು.
ಎಸ್.ಎಸ್. ಮರಗೋಳ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ಸೂರ್ಯಕಾಂತ ಬಿ. ಬಿರಾಜದಾರ್ ಕಾರ್ಯಕ್ರಮ ಉದ್ಘಾಟಿಸಿದರು. ಕೂಡಲಸಂಗಮ ಶಿಕ್ಷಣ ಸಂಸ್ಥೆ ಪ್ರಾಧ್ಯಾಪಕ ಪೀರಪಾಶಾ ಎಂ. ಹೊನಗುಂಟಿಕರ್, ಎಐಎಂಎಸ್ ಎಸ್ ಅಧ್ಯಕ್ಷ ಗುಂಡಮ್ಮ ಮಡಿವಾಳ ಮಾತನಾಡಿದರು. ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ನಿಂಗಣ್ಣ ಜಂಬಗಿ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನಾ ಸಮಾರಂಭದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.