ಗೀತೆಯಲ್ಲಿದೆ ಸಕಲ ಸಮಸ್ಯೆಗೆ ಪರಿಹಾರ
Team Udayavani, Sep 3, 2018, 11:20 AM IST
ಕಲಬುರಗಿ: ದ್ವಾಪರ ಯುಗದಲ್ಲಿ ಪಾಂಡವ ಮತ್ತು ಕೌರವರ ನಡುವೆ ನಡೆದ ಕುರುಕ್ಷೇತ್ರ ಯುದ್ಧದಲ್ಲಿ ಶ್ರೀಕೃಷ್ಣ ಪರಮಾತ್ಮನು ಅರ್ಜುನನಿಗೆ ಬೋಧಿಸಿದ ಗೀತೆಯಲ್ಲಿ ಮನುಷ್ಯನ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಹಿರಿಯ ಸಾಹಿತಿ ಪ್ರೊ| ವಸಂತ ಕುಷ್ಟಗಿ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ನಗರದ ಡಾ| ಎಸ್. ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಅವತಾರ ಪುರುಷ ಹಾಗೂ ಗೀತಾ ಬೋಧಕ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನ ಮನಸ್ಸು ಕುರುಕ್ಷೇತ್ರವಿದ್ದಂತೆ. ಮನಸ್ಸಿನಲ್ಲಿ ಯಾವಾಗಲೂ ಯುದ್ಧ ನಡೆದಿರುತ್ತದೆ. ಅದನ್ನು ಹಿಡಿತದಲ್ಲಿರಿಸಿ ಸತ್ಕಾರ್ಯ ಮಾಡುವಲ್ಲಿ ತೊಡಗಬೇಕು. ಮನಸ್ಸಿನ ಹೊಯ್ದಾಟದಲ್ಲಿ ಒಳ್ಳೆಯದನ್ನು- ಕೆಟ್ಟದ್ದನ್ನು ಅರ್ಥೈಸಿಕೊಂಡು ಯಾರಿಗೂ ಕೆಡಕನ್ನು ಮಾಡದೆ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬಾಳಲು ಗೀತಾ ಸಾರವು ಸಹಕಾರಿಯಾಗಿದೆ ಎಂದರು. ಗಾಂಧೀಜಿ ಅವರು ಶ್ರೀಕೃಷ್ಣನ ಗೀತಾ ಸಾರದಿಂದ ಪ್ರಭಾವಿತರಾಗಿ ಅಹಿಂಸಾ ಮಾರ್ಗ ತುಳಿದು ದೇಶಕ್ಕೆ ಸ್ವಾತಂತ್ರ್ಯ ದೊರಕಿಸುವಲ್ಲಿಯಶಸ್ವಿಯಾದರು. ಗೀತಾ ಸಾರವು ಗಾಂಧೀಜಿಗೆ ಧೈರ್ಯ ತುಂಬುವ ನಿಧಿ ಯಾಗಿತ್ತು
ಎಂದು ಹೇಳಿದರು. ಜಿಲ್ಲಾ ಯಾದವ ಸಂಘದ ಅಧ್ಯಕ್ಷ ರವೀಂದ್ರ ಉದನೂರ, ಗಣ್ಯರಾದ ಆನಂದ ಶೀಲ,
ಕಲ್ಲಪ್ಪ ಯಾದವ, ರವೀಂದ್ರನಾಥ ಚವ್ಹಾಣ, ಆರ್.ಆರ್. ಯಾದವ, ವಾಸುದೇವ ಮುಡಬೋಳ, ಶರಣಬಸಪ್ಪ ಕುಲಕರ್ಣಿ, ಶಂಕರ ಕಟ್ಟಿಮನಿ, ವೆಂಕಟೇಶ ಕೊಂಡ, ಸುಭಾಶ ರಾಜಂ, ಶ್ರೀಮಂತ ಅಡ್ವೊಕೇಟ್, ಕನ್ನಡ ಮತ್ತು ಸಂಸ್ಜೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ಶ್ರೀಕೃಷ್ಣನ ಭಾವಚಿತ್ರದ ಭವ್ಯ ಮೆರವಣಿಗೆ ವಿವಿಧ ಜನಪದ ಕಲಾ ತಂಡಗಳ ಮೂಲಕ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಡಾ| ಎಸ್.ಎಂ. ಪಂಡಿತ ರಂಗಮಂದಿರದ ವರೆಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.