ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಟೀಕೆ ಸಲ್ಲ
Team Udayavani, Feb 25, 2018, 11:19 AM IST
ಆಳಂದ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವ ರಾಜ್ಯ ಸರ್ಕಾರ ಬಡವರು, ಹಿಂದುಳಿದ, ಮಕ್ಕಳು, ಮಹಿಳೆಯರಿಗಾಗಿ ಜಾರಿಗೆ ತಂದ ಹಲವು ಜನಪರ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳ ಮುಖಂಡರು ವಿನಾಕಾರಣ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದು ಶಾಸಕ ಬಿ.ಆರ್.ಪಾಟೀಲ ಹೇಳಿದರು.
ಪಟ್ಟಣದ ಎಪಿಎಂಸಿ ನಿವೇಶನದಲ್ಲಿ ಶನಿವಾರ ಆಹಾರ ಮತ್ತು ನಾಗರಿಕ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡ ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆಯಲ್ಲಿ ಆಯ್ಕೆಯಾದ ಕ್ಷೇತ್ರದ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಪ್ರಮಾಣ ಪತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಬಡ ಮಹಿಳೆಯರಿಗೆ ಹೊಗೆ ಮುಕ್ತ ಅಡುಗೆ ಮಾಡಲು ಅನಿಲ ಭಾಗ್ಯ ಯೋಜನೆ ಜಾರಿಗೆ ತಂದು ಪ್ರತಿಯೊಂದು ಕುಟುಂಬಕ್ಕೆ 4040 ರೂ. ವೆಚ್ಚದಲ್ಲಿ ಒಲೆ, ಸಿಲಿಂಡ್‌ರ ಒದಗಿಸಲಾಗುತ್ತಿದೆ. ಇವುಗಳ ಲಾಭ ಪಡೆಯಬೇಕು ಎಂದು ಹೇಳಿದರು.
ಕ್ಷೇತ್ರದಲ್ಲಿ ಆಹಾರ ಮತ್ತು ಅರಣ್ಯ ಇಲಾಖೆಯಿಂದ ಒಟ್ಟು 10766 ಜನ ಫಲಾನುಭವಿಗಳ ಪೈಕಿ ತಲಾ 4400 ರೂ.
ವೆಚ್ಚದಲ್ಲಿ ಒಟ್ಟು 4,22,826,40 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಬಿಪಿಎಲ್ ಹೊಂದಿರುವ ಫಲಾನುಭವಿಗಳು ಅನಿಲಭಾಗ್ಯ ಯೋಜನೆ ವಂಚಿತರಾಗಿದ್ದರೆ ಅರ್ಜಿ ಸಲ್ಲಿಸಬೇಕು. ಹೊಸ ಬಿಪಿಎಲ್ ಕಾರ್ಡ್‌ದಾರಿಗೂ ಸೌಲಭ್ಯ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಬಡವರು ಅನ್ನ, ಬಟ್ಟೆ, ಮನೆ ಇಲ್ಲದೆ ಸಂಕಷ್ಟದಲ್ಲಿ ಜೀವನ ಕಳೆಯುತ್ತಿರುವುದು ಮನಗಂಡು ಮುಖ್ಯಮಂತ್ರಿಗಳು ಸಾಮಾಜಿಕ ನ್ಯಾಯದಡಿ ಯೋಜನೆಗಳು ಜಾರಿ ತಂದು ಅನುಷ್ಠಾನ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು. ಸಹಕಾರಿ ಸಂಘಗಳಲ್ಲಿನ ರೈತರ ಸಾಲಮನ್ನಾ ಮಾಡಿದರೆ, ಅದೇ ಕೇಂದ್ರ ಸರ್ಕಾರ ತನ್ನ ಪಾಲಿನ ಸಾಲಮನ್ನಾ ಮಾಡಲು ಹಿಂದೇಟು ಹಾಕಿದೆ ಎಂದು ಆರೋಪಿಸಿದರು.
ಮುಖಂಡ ದತ್ತಪ್ಪ ಹೊನ್ನಳ್ಳಿ, ತಹಶೀಲ್ದಾರ ಬಸವರಾಜ ಎಂ.ಬೆಣ್ಣೆಶಿರೂರ ಮಾತನಾಡಿದರು. ತಾಪಂ ಇಒ ಡಾ| ಸಂಜಯ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ ಪಾಟೀಲ, ಉಪಾಧ್ಯಕ್ಷ ಅಜಗರ ಅಲಿ ಹವಾಲ್ದಾರ, ಎಪಿಎಂಸಿ ಅಧ್ಯಕ್ಷ ಶರಣು ಭೂಸನೂರ, ಬಿ.ಜಿ. ಕುದರಿ, ನ್ಯಾಯ ಬೆಲೆ ಅಂಗಡಿ ಸಂಘದ ಅಧ್ಯಕ್ಷ ಮೋಹನಗೌಡ ಪಾಟೀಲ ಬೆಣ್ಣೆಶಿರೂರ, ಆಹಾರ ಶಿರಸ್ತೇದಾರ ದತ್ತಪ್ಪ, ನಿರೀಕ್ಷಿಕ ಪ್ರವೀಣ, ರವೀಂದ್ರ ಕೊರಳ್ಳಿ, ತಾಪಂ ಸದಸ್ಯ ಶಿವುತ್ರಪ್ಪ ಕೊಟ್ಟರಕಿ, ಶಿವಪ್ಪ ವಾರಿಕ ಇದ್ದರು. ಶಿಕ್ಷಕ ಕಲ್ಯಾಣಪ್ಪ ಬಿಜ್ಜರಗಿ ನಿರೂಪಿಸಿದರು. ಕಲ್ಯಾಣಿ ತುಕಾಣಿ ಗೀತೆ ಹಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.