ಅಧ್ಯಯನ ಶ್ರೇಷ್ಠ ಗುಣಮಟ್ಟದ್ದಿರಲಿ
Team Udayavani, Mar 16, 2019, 6:06 AM IST
ಕಲಬುರಗಿ: ಅಧ್ಯಯನ ಶುದ್ಧ, ಭದ್ರತೆ, ಆಸಕ್ತಿ, ಸ್ವಾರಸ್ಯ, ಆರೋಗ್ಯಕರ ಹಾಗೂ ಶ್ರೇಷ್ಠ ಗುಣಮಟ್ಟದಿಂದ ಕೂಡಿದ್ದಾಗಿರಬೇಕು ಎಂದು ಮೈಸೂರಿನ ಅಂತಾರಾಷ್ಟ್ರೀಯ ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ ಒಕ್ಕೂಟದ ಅಧ್ಯಕ್ಷ, ಅಂತಾರಾಷ್ಟ್ರೀಯ ಪೌಷ್ಟಿಕ ವಿಜ್ಞಾನ ಒಕ್ಕೂಟದ ಉಪಾಧ್ಯಕ್ಷ, ಪದ್ಮಶ್ರೀ ಪುರಸ್ಕೃತ ಡಾ| ವಿ. ಪ್ರಕಾಶ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ನಡೆದ 37ನೇ ಘಟಿಕೋತ್ಸವ ಸಮಾರಂಭದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ಅಧ್ಯಯನ ಕೈಗೊಳ್ಳುವ ವಿದ್ಯಾರ್ಥಿಗಳು ಇಲ್ಲದ ಸೌಕರ್ಯಗಳ ಬಗ್ಗೆ ಚಿಂತಿಸದೆ ಇರುವ ಸವಲತ್ತು ಪಡೆದು ಗುಣಮಟ್ಟದ ಫಲಿತಾಂಶ, ರಚನಾತ್ಮಕ ಸಂಶೋಧನೆ ಮಾಡುವುದರ ಮೂಲಕ ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡಬೇಕು ಎಂದರು.
ಉನ್ನತ ಶಿಕ್ಷಣ ನೀಡುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಬಹುತೇಕ ಇತರ ರಾಜ್ಯದ ವಿದ್ಯಾರ್ಥಿಗಳು ಇಲ್ಲಿ ಅಧ್ಯಯನಕ್ಕೆ ಬರುತ್ತಾರೆ. ಇಂತಹ ಸದಾವಕಾಶ ಬಳಸಿಕೊಂಡು ಶ್ರೇಷ್ಠ ಶಿಕ್ಷಣ ಮತು ಸಂಶೋಧನೆಗೆ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯವು ಜಾಗತಿಕ ವಿಶ್ವವಿದ್ಯಾಲಯವಾಗಿ ಗುರುತಿಸಿಕೊಳ್ಳುವಂತೆ ಆಗಬೇಕೆಂದು ಆಶಯ ವ್ಯಕ್ತಪಡಿಸಿದರು.
ನೂರು ಹಳ್ಳಿಗಳಿಗೆ ಹೋಗಿ: ಸಂಶೋಧನಾ ಪದವಿ ಪಡೆದವರು ಕನಿಷ್ಠ 100 ಹಳ್ಳಿಗಳಿಗೆ ಹೋಗಬೇಕು. ಅಲ್ಲಿನ ರೈತ ಸಮುದಾಯ, ಗ್ರಾಮಸ್ಥರೊಂದಿಗೆ ಭೇಟಿಯಾಗಿ ಚರ್ಚಿಸಿ ನಿಮ್ಮ ಅಧ್ಯಯನದ ಬಗ್ಗೆ ತಿಳಿಸಬೇಕು. ಅದೇ ರೀತಿ ರೈತರಿಂದ ಸಮಸ್ಯೆಗಳ ಬಗ್ಗೆ
ಅರಿತು ಪರಿಹಾರಕ್ಕೆ ಮಾರ್ಗ ಕಂಡುಕೊಂಡಲ್ಲಿ ಶಿಕ್ಷಣ ಪಡೆದಿದ್ದು ಸಾರ್ಥಕವಾಗುತ್ತದೆ. ಗ್ರಾಮೀಣ ಭಾರತದಲ್ಲಿ ಪಠ್ಯದಲ್ಲಿರದ ಅನೇಕ ಸಂಗತಿಗಳು ನಿಮಗೆ ಸಮಾಜವು ವಾಸ್ತವದ ಜ್ಞಾನವನ್ನು ಉಣಬಡಿಸುತ್ತದೆ ಎಂದು ಹೇಳಿದರು.
ಮೂವರಿಗೆ ಗೌರವ ಡಾಕ್ಟರೇಟ್: ಘಟಿಕೋತ್ಸವದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಮಾನವ ಧರ್ಮ ಪೀಠದ ಅಧ್ಯಕ್ಷ, ನಿಡುಮಾಮಿಡಿ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಬೀದರ್‌ನ ಚಿದಂಬರಾಶ್ರಮ ಸಿದ್ಧಾರೂಢ ಮಠದ ಶಿವಕುಮಾರ ಮಹಾಸ್ವಾಮೀಜಿ ಹಾಗೂ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪಂ.ವೀರಭದ್ರಪ್ಪ ಗಾದಗೆ ಅವರಿಗೆ ಕುಲಪತಿ ಪ್ರೊ| ಎಸ್.ಆರ್.ನಿರಂಜನ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದರು.
ನಿರ್ಮಲಾನಂದನಾಥ ಶ್ರೀ ಗೈರು: ವಿಶ್ವವಿದ್ಯಾಲಯದ ಸಂಗೀತ ವಿಭಾಗದಲ್ಲಿ ಪಿಎಚ್‌ಡಿ ಪೂರೈಸಿರುವ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಘಟಿಕೋತ್ಸವ ಸಮಾರಂಭಕ್ಕೆ ಗೈರಾಗಿದ್ದರು.
ನಿವೃತ್ತ ಪ್ರಾಧ್ಯಾಪಕ ಡಾ| ಪಿ.ಬಿ. ಸಂತಪ್ಪನವರ ಮಾರ್ಗದರ್ಶನದಲ್ಲಿ ಶ್ರೀಗಳು ಮಂಡಿಸಿದ್ದ “ನಾಥ ಸಂಪ್ರದಾಯ ಒಂದು ಸಾಂಸ್ಕೃತಿಕ ಅಧ್ಯಯನ’ ಶೋಧನಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಲಭಿಸಿದೆ. ಕುಲಸಚಿವ ಪ್ರೊ| ಸಿ. ಸೋಮಶೇಖರ, ಮೌಲ್ಯಮಾಪನ ಕುಲಸಚಿವ ಪ್ರೊ| ಡಿ.ಎಂ. ಮದರಿ ಸೇರಿದಂತೆ ವಿಶ್ವವಿದ್ಯಾಲಯದ ವಿದ್ಯಾವಿಷಯಕ, ಸಿಂಡಿಕೇಟ್ ಕೌನ್ಸಿಲ್ ಸದಸ್ಯರು, ವಿವಿಧ ಅಧ್ಯಯನ ವಿಭಾಗದ ಮುಖ್ಯಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.