ಸ್ಪರ್ಧೆಯಲ್ಲಿ ಪ್ರತಿಭಾ ಅನಾವರಣ ಮುಖ್ಯ
Team Udayavani, Mar 5, 2017, 2:43 PM IST
ಕಲಬುರಗಿ: ಯಾವುದೇ ಸ್ಪರ್ಧೆಯಿರಲಿ ಸೋಲು, ಗೆಲುವು ಮುಖ್ಯವಲ್ಲ. ಸ್ಪರ್ಧಿಯ ಪ್ರತಿಭೆಯ ಅನಾವರಣವೇ ಮುಖ್ಯ ಎಂದು ಕಲಬುರಗಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥೆ ಅಂಜನಾ ಯಾತನೂರ ಹೇಳಿದರು.
ನಗರದ ಸಿದ್ದಾರ್ಥ ಕಾನೂನು ಕಾಲೇಜಿನಲ್ಲಿ ರಾಜ್ಯ ಕಾನೂನು ವಿವಿ ಹಾಗೂ ಕೆಪಿಇ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 5ನೇ ಅಂತರ ಕಾಲೇಜುಗಳ ವಲಯ ಮಟ್ಟದ ಯುವ ಜನೋತ್ಸವವನ್ನು ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಅತ್ಯಂತ ಸಮರ್ಪಕವಾಗಿ ಹಾಗೂ ಸಮರ್ಥವಾಗಿ ಬಳಸಿಕೊಳ್ಳಬೇಕು. ಅಂಜಿಕೆ, ಭಯ, ಆತಂಕ, ಅವಮಾನಗಳನ್ನು ಸ್ಪರ್ಧಿಗಳು ಬಿಟ್ಟಾಗ ಏನಾದರೂ ಸಾಧಿಸಬಹುದು ಎಂದರು.
ಕಲಿಕೆ ವಿದ್ಯಾರ್ಥಿಗಳಿಗೆ ಅಗತ್ಯವಾದರೂ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆ ಸಹ ಅಷ್ಟೇ ಮುಖ್ಯ. ಈ ಹಂತದಲ್ಲಿ ವ್ಯಕ್ತಿತ್ವ ವಿಕಾಸಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದರು. ಇತ್ತಿಚೆಗೆ ವರ್ಗಾವಣೆಯಾದ ಜಿ.ಪಂ.ಸಿಇಒ ಅನಿರುದ್ದ ಶ್ರವಣ ಅವರ ಆಡಳಿತ ಶ್ಲಾಘಿಸಿದರು.
ಈ ಭಾಗದಿಂದ ಬರಗಾಲದ ಸಂದರ್ಭದಲ್ಲಿ ಕೃಷಿ ಕಾರ್ಮಿಕರು ದೊಡ್ಡ ದೊಡ್ಡ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಗೆ ತರುವ ಮೂಲಕ ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದರು ಎಂದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಎಂಎಲ್‌ಸಿ ಮಾರುತಿರಾವ ಮಾಲೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾನೂನು ವಿವಿ ನಿವೃತ್ತ ಕುಲಸಚಿವ ಪ್ರೊ| ಕೆ.ಎಸ್. ಬಗಾಲೆ ಭಾಗವಹಿಸಿದ್ದರು.
ಕಾನೂನು ಪದವಿಯನ್ನು ಕನ್ನಡ ಮಾಧ್ಯಮದಲ್ಲಿ ಪ್ರಥಮ ರ್‍ಯಾಂಕ್‌ನಲ್ಲಿ ಪಾಸಾದ ಕಾಲೇಜಿನ ವಿದ್ಯಾರ್ಥಿನಿ ಆಶಾಲತಾ ನಾಗರೆಡ್ಡಿ, ಸ್ನಾತಕೋತ್ತರದಲ್ಲಿ ದ್ವಿತೀಯ ರ್‍ಯಾಂಕ್ ಪಡೆದ ಪ್ರಾಚಿ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಡಾ| ಚಂದ್ರಶೇಖರ ಸ್ವಾಗತಿಸಿದರು, ಎನ್. ತಿಪ್ಪೆಸ್ವಾಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.