ಪಾರಿಭಾಷಿಕ ಪದಕೋಶ ರಚನೆ ಕಾರ್ಯ ಪ್ರಗತಿಯಲ್ಲಿ
Team Udayavani, Jan 18, 2019, 7:23 AM IST
ಕಲಬುರಗಿ: ನಗರದ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅವರ ಬಹು ದಿನಗಳ ಕನಸಾದ ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆ ಕಾರ್ಯ ಪ್ರಗತಿಯಲ್ಲಿದೆ ಎಂದು ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆ ಪ್ರಧಾನ ಸಂಪಾದಕ ಡಾ| ಎಂ.ಎಸ್. ಪಾಟೀಲ ಹೇಳಿದರು.
ಶರಣಬಸವ ವಿವಿ ಕನ್ನಡ ವಿಭಾಗದಲ್ಲಿ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕದ ಯಾವ ವಿಶ್ವವಿದ್ಯಾಲಯಗಳು, ಮಠಗಳು ಮಾಡದ ಕೆಲಸವನ್ನು ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಮಾಡಲು ಮುಂದಾಗಿ, ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆಗಾಗಿ ತಮ್ಮ ವಿದ್ಯಾಸಂಸ್ಥೆಯ ಎಲ್ಲ ಅಧ್ಯಾಪಕರಿಗೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಕೆಲಸಗಳು ನಡೆಯುತ್ತಿವೆ ಎಂದು ತಿಳಿಸಿದರು. ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವಿವಿಧ ಕಾಲೇಜುಗಳ ಅಧ್ಯಾಪಕರು, ಶರಣಬಸವ ವಿವಿ ಅಧ್ಯಾಪಕರು ಹಾಗೂ ಆಸಕ್ತ ಪ್ರಾಧ್ಯಾಪಕರು ಸೇರಿದಂತೆ ಸುಮಾರು 50 ಜನ ಈ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪಾಲ್ಗೊಂಡ ಅಧ್ಯಾಪಕರು ಪದಕೋಶ ರಚನೆಯಲ್ಲಿ ಎದುರಾದ ಸಮಸ್ಯೆಗಳಿಗೆ ಸೂಕ್ತ ಮಾಹಿತಿ ಪಡೆದುಕೊಂಡರು. ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆಯು ಸಾಕಷ್ಟು ಶ್ರಮ ಬಯಸುವುದರಿಂದ ತಾಳ್ಮೆಯಿಂದ ಈ ಕೆಲಸ ಪೂರೈಸುವಂತೆ ಎಲ್ಲರೂ ಸೂಚಿಸಿದರು.
ಡಾ| ಎಸ್.ಜಿ. ಡೊಳ್ಳೆಗೌಡರ, ಡಾ| ಡಿ.ಟಿ. ಅಂಗಡಿ, ಡಾ| ಎನ್.ಎಸ್. ಪಾಟೀಲ, ಡಾ| ನೀಲಾಂಬಿಕಾ ಶೇರಿಕಾರ, ಡಾ| ಶಿವರಾಜಶಾಸ್ತ್ರೀ ಹೇರೂರ, ಡಾ| ಸುರೇಶ ನಂದಗಾಂವ, ಡಾ| ಸಾರಿಕಾದೇವಿ ಕಾಳಗಿ, ಡಾ| ಸುಮಂಗಲಾ ರೆಡ್ಡಿ, ಡಾ| ಪ್ರಭಾವತಿ ಚಿತಕೋಟಿ, ನಾನಾಸಾಹೇಬ್ ಹಚ್ಚಡದ ಹಾಗೂ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.