ಸಂಚಾರಿ ನಿಯಮ ಪಾಲನೆ ಕಡ್ಡಾಯ
Team Udayavani, Jan 4, 2019, 5:55 AM IST
ಚಿತ್ತಾಪುರ: ಪಟ್ಟಣದ ಪೋಲಿಸ್ ಠಾಣೆಯಲ್ಲಿ ಸಂಚಾರಿ ಸುರಕ್ಷಾ ಸಪ್ತಾಹ ಅಡಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ
ಆಟೋಗಳ ದಾಖಲೆಗಳನ್ನು ಡಿವೈಎಸ್‌ಪಿ ಕೆ. ಬಸವರಾಜ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ಪಟ್ಟಣದಲ್ಲಿಯೇ 200 ಕ್ಕೂ ಹೆಚ್ಚು ಆಟೋಗಳು ಹಾಗೂ ಚಾಲಕರು ಇದ್ದಾರೆ. ಚಾಲಕರು ತಮ್ಮ ಆಟೋಗಳಲ್ಲಿಯೇ ದಾಖಲಾತಿಗಳನ್ನು ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಇದರಿಂದ ತಪಾಸಣೆ ವೇಳೆ ಅನುಕೂಲವಾಗುತ್ತದೆ ಎಂದರು.
ಕಳೆದ ಎರಡು ತಿಂಗಳ ಹಿಂದೆಯೇ ಸಿಪಿಐ ಪಂಚಾಕ್ಷರಿ ಸಾಲಿಮಠ ನೇತೃತ್ವದಲ್ಲಿ ಆಟೋ ಚಾಲಕರ ಸಭೆ ಕರೆದು ಎಲ್ಲ
ಆಟೋ ಚಾಲಕರಿಗೂ ತಮ್ಮ ವಾಹನಗಳಲ್ಲಿ ಕಡ್ಡಾಯವಾಗಿ ವಾಹನಗಳ ದಾಖಲೆ ಇಟ್ಟುಕೊಳ್ಳಬೇಕು ಎಂದು ಸೂಚಿಸಲಾಗಿತ್ತು. ಆದರೂ ಕೆಲವರು ದಾಖಲೆಗಳನ್ನು ಸಿದ್ಧಪಡಿಸಿಕೊಂಡಿಲ್ಲ.
ರಸ್ತೆ ಸುರಕ್ಷತೆ ನಿಯಮ ಪಾಲನೆ ಕಡ್ಡಾಯ ಎಂದು ಎಚ್ಚರಿಕೆ ನೀಡಿದರು. ವಾಹನ ಚಾಲಕರು ತಮ್ಮ ಪರವಾನಗಿ, ಇನ್ಸುರೆನ್ಸ್, ಮಾಲೀಕತ್ವ ಪತ್ರ, ಆರ್‌ಸಿ ಬುಕ್, ಮಾಲಿನ್ಯ ನಿಯಂತ್ರಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು. ಇದು ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಅಲ್ಲದೇ ವಾಹನ ಚಾಲಕರು ಖಾಕಿ ಬಟ್ಟೆ ಧರಿಸದೇ ಬೇಜವಬ್ದಾರಿ ತೋರುತ್ತಿದ್ದಾರೆ. ಇದು ಸರಿಯಲ್ಲ ಎಂದರು.
ಪಟ್ಟಣದಲ್ಲಿ ದಿನೇ ದಿನೇ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಆಟೋಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸುರಕ್ಷತೆ ದೃಷ್ಟಿಯಿಂದ ಅವುಗಳನ್ನು ನೋಂದಣಿ ಮಾಡಿ. ಯೂನಿಕ್ ನಂಬರ್ ನೀಡಲಾಗುವುದು. ಇದರಿಂದ ರಸ್ತೆ ಸುರಕ್ಷತೆಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ. ಆಟೋಗಳಲ್ಲಿ ಅಕ್ರಮ ಮಧ್ಯವನ್ನಿಟ್ಟು ಹಳ್ಳಿಗಳಿಗೆ ಸಾಗಾಟ ಮಾಡುತ್ತಿದ್ದಾರೆ ಎನ್ನುವ ಆರೋಪ ಗಂಭೀರವಾಗಿ ಕೇಳಿ ಬರುತ್ತಿದೆ. ಒಂದು ವೇಳೆ ಈ ರೀತಿ ಮಾಡಿದ್ದೇ ಆದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಆಟೋ ಸೀಜ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಆಟೋ ಚಾಲಕರ ಅಧ್ಯಕ್ಷ ದಿಲೀಪ ಕಾಶಿ ಮಾತನಾಡಿ, ಆಟೋ ಚಾಲಕರು ಬಡವರಾಗಿದ್ದು, ತಮ್ಮ ಆಟೋಗಳ ಕಾಗದ ಪತ್ರ ಮಾಡಿಕೊಳ್ಳಲು ಆರ್ಥಿಕ ಪರಿಸ್ಥಿತಿಯಿಂದ ಸಾಧ್ಯವಾಗುತಿಲ್ಲ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್‌ಐ ನಟರಾಜ ಲಾಡೆ, ವಾಡಿ ಪಿಎಸ್‌ಐ ವಿಜಯಕುಮಾರ ಬಾವುಗೆ, ಎಎಸ್‌ಐ ಕಲಾವತಿ, ಅಂಬುಬಾಯಿ, ಪೇದೆಗಳಾದ ಬಲವಂತರೆಡ್ಡಿ, ಮೇಲಗೇರಿ, ವಿನೊದಕುಮಾರ, ಪ್ರಶಾಂತ ಹೆರೂರ, ಮಲ್ಲೇಶಿ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.