ಹಿಂಗಾರು ಬಿತ್ತನೆಗೆ ಮರಳಿ ಬಂದ ಗ್ರಾಮಸ್ಥರು
Team Udayavani, Oct 24, 2021, 10:15 AM IST
ಚಿಂಚೋಳಿ: ತಾಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಭೂಕಂಪದಿಂದ ಭಯಕ್ಕೊಳಗಾಗಿ ಗ್ರಾಮವನ್ನೇ ತೊರೆದಿದ್ದ ಜನರು ಮತ್ತೆ ಗ್ರಾಮದತ್ತ ಹೆಜ್ಜೆ ಹಾಕುತ್ತಿದ್ದು, ತಮ್ಮ ಹೊಲಗಳಲ್ಲಿ ಹಿಂಗಾರು ಬಿತ್ತನೆ ಕೈಗೊಳ್ಳುವ ಚಿಂತನೆ ಮಾಡುತ್ತಿದ್ದಾರೆ.
ಗಡಿಕೇಶ್ವಾರ ಗ್ರಾಮದ ಸುತ್ತಲಿನ ಹಳ್ಳಿಗಳಲ್ಲಿ ಮೇಲಿಂದ ಮೇಲೆ ಸಣ್ಣ ಪ್ರಮಾಣದ ಭೂಕಂಪ ಸಂಭವಿಸಿದ್ದರಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಕಳೆದ ಅಕ್ಟೋಬರ್ 12ರಂದು ಗ್ರಾಮವನ್ನೇ ತೊರೆದು ನೆಂಟರ ಮನೆಗೆ ಹೋಗಿದ್ದರು. ಈಗ ಮೊದಲಿನಂತೆ ಪರಿಸ್ಥಿತಿ ಸುಧಾರಿಸಿದ್ದರಿಂದ ಗ್ರಾಮಕ್ಕೆ ಮರಳಿ ಬರಲು ಗ್ರಾಮಸ್ಥರು ಉತ್ಸುಕರಾಗಿದ್ದಾರೆ.
ಇದೀಗ ಮಳೆ ಬಿಡುವು ಕೊಟ್ಟಿದ್ದರಿಂದ ಹಿಂಗಾರು ಬಿತ್ತನೆಗಾಗಿ ಹೊಲವನ್ನು ಹಸನು ಮಾಡುವುದು ಮತ್ತು ಜೋಳ, ಕಡಲೆ ಇನ್ನಿತರ ಬೀಜ ಬಿತ್ತನೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎನ್ನುತ್ತಾರೆ ಗ್ರಾಮದ ಮುಖಂಡ ಅರುಣಕುಮಾರ ರಂಗನೂರ.
ಕಂದಾಯ ಸಚಿವರು ಗಡಿಕೇಶ್ವಾರಕ್ಕೆ ಭೇಟಿ ನೀಡಿದ ನಂತರ ಗ್ರಾಮದ ಮನೆಗಳ ಎದುರು ಶೆಡ್ ನಿರ್ಮಾಣ ಆಗಬಹುದು ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದೆವು. ಅದಿನ್ನು ಈಡೇರಿಲ್ಲ. ಹೀಗಾಗಿ ಕಾಳಜಿ ಕೇಂದ್ರದ ಊಟವೇ ಗತಿಯಾಗಿದೆ ಎಂದು ಗ್ರಾಮಸ್ಥರಾದ ಸಂತೋಷಕುಮಾರ ಬಳಿ, ನಾಗರಾಜ ಚಕ್ರವರ್ತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.