ಮಹಿಳೆಯ ಹಿಂಸೆಗೆ ಪುರುಷ ಪ್ರಧಾನ ವ್ಯವಸ್ಥೆಯೇ ಕಾರಣ


Team Udayavani, Mar 2, 2022, 11:05 AM IST

8waadi

ವಾಡಿ: ಜಾತಿ ವ್ಯವಸ್ಥೆ ಜೀವಂತವಾಗಿಟ್ಟಿರುವ ಧರ್ಮ ಸಂಪ್ರದಾಯ ಸ್ತ್ರೀಕುಲವನ್ನು ತುಚ್ಚವಾಗಿ ಕಾಣುತ್ತಿದೆ. ಪುರುಷ ಪ್ರಧಾನ್ಯತೆ ಮತ್ತು ಮತಾಂಧತೆ ಮಹಿಳೆಯರ ಬದುಕಿನಲ್ಲಿ ವಿಕೃತ ಹಿಂಸೆ ಹುಟ್ಟುಹಾಕುತ್ತಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ರಾಜ್ಯ ನಾಯಕಿ, ಹಿರಿಯ ಲೇಖಕಿ ದು. ಸರಸ್ವತಿ ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಪಟ್ಟಣದ ಅಂಬೇಡ್ಕರ್‌ ಕಾಲೋನಿಯ ಸಿದ್ಧಾರ್ಥ ಭವನದಲ್ಲಿ ಏರ್ಪಡಿಸಲಾಗಿದ್ದ “ಸಮತೆಯಡೆಗೆ ನಮ್ಮ ನಡಿಗೆ’ ಧ್ಯೇಯವಾಕ್ಯದ ಅರಿವಿನ ಪಯಣ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು.

ಮಹಿಳೆಯರ ಮೇಲಿನ ದೌರ್ಜನ್ಯಗಳು ಇತ್ತೀಚೆಗೆ ಮಾಮೂಲಿ ವಿಷಯವಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪತ್ನಿಗೆ ಹೊಡೆಯುವ ಪತಿಯೇ ನಿಜವಾದ ಪುರುಷ ಎನ್ನುವ ಕ್ರೌರ್ಯ ಸಮರ್ಥಕ ಮನಸ್ಥಿತಿವುಳ್ಳ ಮಹಿಳೆಯರನ್ನು ಜೀವಂತ ಶವವಾಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೌರ್ಜನ್ಯ ಧಿಕ್ಕರಿಸಿ ಸ್ತ್ರೀಶಕ್ತಿ ದುರ್ಗಿಯ ಅವತಾರದಲ್ಲಿ ಸಿಡಿದೇಳಬೇಕಿದೆ. ಹಿಂಸೆಯನ್ನು ಇಲ್ಲವಾಗಿಸಲು ಸಮಸಮಾಜ ಕಟ್ಟುವುದೊಂದೇ ನಮ್ಮ ಗುರಿಯಾಗಬೇಕು. ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಿದ ಅಂಬೇಡ್ಕರ್‌ ಸ್ತ್ರೀ ಸಮಾನತೆ ಬಯಸದ ಸರ್ಕಾರದ ವಿರುದ್ಧ ಸಂಘರ್ಷ ನಡೆಸಿದ್ದರು. ಮಹಿಳೆಯರಿಗಾಗಿಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಹೋರಾಟದ ಸಾಗರಕ್ಕೆ ಸೇರಿಕೊಂಡಿದ್ದರು. ಅದಾಗ್ಯೂ ಹೆಣ್ಣಿನ ಶೋಷಣೆ ಮುಂದುವರಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉಪನ್ಯಾಸಕ ಡಾ| ಪ್ರಭು ಖಾನಾಪುರೆ, ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ, ಪುರಸಭೆ ಉಪಾಧ್ಯಕ್ಷ ದೇವಿಂದ್ರ ಕರದಳ್ಳಿ, ವಕೀಲ ಶ್ರವಣಕುಮಾರ ಮೊಸಲಗಿ, ಮುಖಂಡರಾದ ದೇವಿಂದ್ರ ನಿಂಬರ್ಗಾ, ಸೂರ್ಯಕಾಂತ ರದ್ದೇವಾಡಿ, ಶರಣಬಸು ಸಿರೂರಕರ, ರವಿ ಕೋಳಕೂರ, ವಿಕ್ರಮ ನಿಂಬರ್ಗಾ, ಮಹಿಳಾ ಒಕ್ಕೂಟದ ಅಶ್ವಿ‌ನಿ ಮದನಕರ, ಶೋಭಾ ನಿಂಬರ್ಗಾ, ಪೂಜಾ ಸಿಂಗೆ, ಪ್ರಿಯಾಂಕಾ ಮಾವಿನಕರ, ಭವನಿಪ್ರಸಾದ ಶಿವುಕೇರಿ ಹಾಗೂ ಇನ್ನಿತರ ಮಹಿಳೆಯರು ಪಾಲ್ಗೊಂಡಿದ್ದರು. ಸ್ತ್ರೀ ದೌರ್ಜನ್ಯ ವಿರುದ್ಧ ಜಾಗೃತಿ ಮೂಡಿಸಬಲ್ಲ ಮೂರು ಕಿರು ನಾಟಕ ಪ್ರದರ್ಶಿಸಲಾಯಿತು. ಸ್ತ್ರೀ ಸಮಾನತೆ ಬಯಸಿ ಮೊಂಬತ್ತಿ ಮೆರವಣಿಗೆ ಮಾಡಲಾಯಿತು.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.