ಪತ್ನಿ ಕತ್ತು ಹಿಸುಕಿ ಕೊಲೆ
Team Udayavani, Nov 24, 2017, 10:39 AM IST
ಚಿಂಚೋಳಿ: ತಾಲೂಕಿನ ಇರಗಪಳ್ಳಿ ಗ್ರಾಮದಲ್ಲಿ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ ಎಂದು ಸುಲೇಪೇಟ ಪೊಲೀಸರು ತಿಳಿಸಿದ್ದಾರೆ. ಇರಗಪಳ್ಳಿ ಗ್ರಾಮದ ನವವಿವಾಹಿತೆ ಸವಿತಾ ರವಿಶಂಕರ ಕಲಶೆಟ್ಟಿ (20) ಮೃತಪಟ್ಟವಳು. ಒಂದೂವರೆ ವರ್ಷಗಳ ಹಿಂದೆಯಷ್ಟೆ ತಾಲೂಕಿನ ಪೋತಂಗಲ್ ಗ್ರಾಮದ ಬಸಣ್ಣ ಕಲಶೆಟ್ಟಿ ಎನ್ನುವರ ಮಗಳಾದ ಸವಿತಾ ಎನ್ನಾಕೆಯನ್ನು ಇರಗಪಳ್ಳಿ ಗ್ರಾಮದ ರವಿಶಂಕರ ಎಂಬಾತನೊಂದಿಗೆ ಮದುವೆ ಮಾಡಿಕೊಡಲಾಗಿತ್ತು.
ಪತಿ, ಪತ್ನಿ ಮಧ್ಯೆ ಕಳೆದ ಆರು ತಿಂಗಳಿಂದ ಸಂಸಾರದಲ್ಲಿ ಹೊಂದಾಣಿಕೆ ಇರಲಿಲ್ಲ. ನನ್ನ ಮೇಲೆ ಸಂಶಯಪಟ್ಟು ಅನಾವಶ್ಯಕವಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನನ್ನ ಪತಿ ನೀಡುತ್ತಿದ್ದಾನೆಂದು ಮೃತಳು ತನ್ನ ತಂದೆ ತಾಯಿಗೆ ತಿಳಿಸಿದ್ದಳು. ಅಲ್ಲದೇ ತನ್ನ ತವರು ಮನೆಯಲ್ಲಿಯೇ ವಾಸವಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ
ನ. 20ರಂದು ಗ್ರಾಮಸ್ಥರು ಪತಿ ರವಿಶಂಕರ ಹಾಗೂ ನೆರೆಹೊರೆಯವರು ಎರಡು ಕುಟುಂಬಗಳ ಮಧ್ಯೆ ರಾಜಿ ಸಂಧಾನ ಮಾಡಿದ್ದರಿಂದ ಕುಟುಂಬ ಹಿರಿಯರೊಂದಿಗೆ ಗಂಡನ ಮನೆಗೆ ಬಂದಿದ್ದಳು. ಮತ್ತೆ ಗಂಡ ಹೆಂಡತಿ ಮಧ್ಯೆ ಮಾತಿಗೆ ಮಾತು ಬೆಳೆದು ಇಬ್ಬರು ಜಗಳವಾಡಿದ್ದರು.
ಸಿಟ್ಟಿಗೆದ್ದ ಪತಿ ರವಿಶಂಕರ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆಯ ಕುರಿತು ಮೃತಳ ತಂದೆ ಬಸಣ್ಣ ನೀಡಿದ ದೂರಿನ ಮೇರೆಗೆ ಸುಲೇಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ರವಿಶಂಕರನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್‌ಐ ಪ್ರಭು ದುದ್ದಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.