ಕೇಂದ್ರೀಯ ವಿವಿಗೆ ನೀರಿನ ಸಮಸ್ಯೆ ಇಲ್ಲ
Team Udayavani, Apr 5, 2017, 3:15 PM IST
ಕಲಬುರಗಿ: ಸಮೀಪದ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವ ವಿದ್ಯಾಲಯದಲ್ಲಿ ಈಗ ನೀರಿನ ಸಮಸ್ಯೆ ಇಲ್ಲ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರದ ಸಹಕಾರ, ಚೌಕಾಸಿ ಮಧ್ಯೆಯೂ ವಿವಿ ತನ್ನ ಸಮಸ್ಯೆ ತಾನೇ ನೀಗಿಸಿಕೊಂಡು ದೇಶದ ವಿವಿಧ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ ನೀರಿನ ಸಮಸ್ಯೆ ಉಲಣಗೊಳ್ಳದಂತೆ ಕ್ರಮ ಕೈಗೊಂಡಿದೆ ಎಂದರು. ಈ ರ್ಷ ಉತ್ತಮ ಮಳೆಯಾಗಿದೆ. ಆದ್ದರಿಂದ ನೀರಿನ ಪೂರೈಕೆ ಮೂಲವಾದ ಅಮರ್ಜಾ ಆಣೆಕಟ್ಟೆಯಲ್ಲಿ ಈ ಬಾರಿ ನೀರು ಸಂಗ್ರಹವಾಗಿದೆ.
ಅಲ್ಲದೇ ವಿಶ್ವವಿದ್ಯಾಲಯದಲ್ಲಿಯೂ ಸಾಕಷ್ಟು ನೀರಿನ ಸಂಗ್ರಹ ಮಾಡಿಕೊಳ್ಳಲಾಗಿದೆ. 20 ಲಕ್ಷ ಲೀಟರ್‌ನ ಒಂದು ಟ್ಯಾಂಕ್, 8 ಲಕ್ಷ ಲೀಟರ್ ಸಾಮರ್ಥ್ಯದ ಎರಡು ಟ್ಯಾಂಕ್ ಸೇರಿದಂತೆ ಇತರೆ ಮೂಲಗಳಿಂದ 15 ಲಕ್ಷ ಲೀಟರ್ ನೀರಿನ ಸಂಗ್ರಹವನ್ನು ವಿವಿಧ ಮೂಲಗಳಿಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ಒಟ್ಟು ಸುಮಾರು 40 ಲಕ್ಷ ಲೀಟರ್ ನೀರಿನ ಸಂಗ್ರಹ ಮಾಡಲು ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ.
ಈ ಬಾರಿ ಯಾವುದೇ ಕಾರಣಕ್ಕೂ ಕ್ಯಾಂಪಸ್ ನಲ್ಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗುವುದಿಲ್ಲ ಎಂದರು. ಒಟ್ಟು 654 ಎಕರೆ ಭೂಮಿಯಲ್ಲಿ ಹರಡಿಕೊಂಡಿರುವ ವಿವಿಯಲ್ಲಿ ಎಲ್ಲ ಕಟ್ಟಡಗಳಿಗೆ ನೀರಿನ ಕೊರತೆ ಇತ್ತು. ಆದರೆ, ಈ ವರ್ಷ ಅದನ್ನೂ ನೀಗಿಸಿಕೊಂಡಿದ್ದೇವೆ. ಆದಷ್ಟು ಬೇಗ ಅಗತ್ಯ ಕಟ್ಟಡಗಳು ಸಿದ್ಧವಾಗಲಿವೆ. ಇದರಿಂದ ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು ಕ್ಯಾಂಪಸ್‌ಗೆ ಓದಲು ಬರುತ್ತಾರೆ ಎಂದರು.
ಮಿನಿ ಭಾರತ: ಕೇಂದ್ರೀಯ ವಿವಿ ಕ್ಯಾಂಪಸ್ ಮಿನಿ ಭಾರತವಿದ್ದಂತೆ. ಇಲ್ಲಿ ಭಾರತ ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಓದಲು ಬರುತ್ತಾರೆ. ಅವರ ಭಾಷೆ, ನಡವಳಿಕೆ ಹಾಗೂ ಖುಷಿಯ ಆಚರಣೆಗಳು ನಮಗೆ ಮಿತಿ ಭಾರತದ ದರ್ಶನ ಕೊಡುತ್ತದೆ. ವಿವಿಯಲ್ಲಿ ಓದಲು ಹೈಕ ಭಾಗದ ಶಕ್ತಿ ವಿದ್ಯಾರ್ಥಿಗಳು ಪ್ರಯತ್ನ ಮಾಡಬೇಕು. ಈ ನಿಟ್ಟಿನಲ್ಲಿ ವಿವಿ ಮಂಡಳಿ ಸಹಕಾರ ನೀಡುತ್ತದೆ ಎಂದರು.
ಮೂವರು ಡಿಬಾರ್: ರಾತ್ರಿ ನಾನು ಎಲ್ಲ ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಖುದ್ದು ನಿಗಾ ಇಡುತ್ತೇನೆ. ಹೀಗಾಗಿ ತೊಂದರೆಗಳು ಕಡಿಮೆ. ಒಬ್ಬನ ಮೇಲೆ ಹಲ್ಲೆ ಮಾಡಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದ್ದೇನೆ ಎಂದು ಹೇಳಿದರು. ಈಚೆಗೆ ವಿದ್ಯಾರ್ಥಿನಿಯರು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥರಾದದ್ದಲ್ಲ, ಅವರಿಗೆ ಕೆಲವು ಹವಾಮಾನ ಮತ್ತು ದೈಹಿಕ ಸಮಸ್ಯೆಗಳಿದ್ದವು. ಅದರಿಂದಾಗಿ ಹೀಗೆ ಆಗಿರಬಹುದು ಎಂದು ಹೇಳಿದರು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಬಸ್‌ಗಾಗಿ 2 ಕೋಟಿ ರೂ. ಗಳ ದುಬಾರಿ ಶುಲ್ಕ ಭರಿಸಲಾಗುತ್ತಿತ್ತು. ಈಗ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಮೂರು ಹೆಚ್ಚುವರಿ ಬಸ್‌ಗಳನ್ನು, ಎರಡು ಟಿಪ್ಪರ್‌ಗಳನ್ನು ಒದಗಿಸಿದ್ದು, ಸಮಸ್ಯೆ ನಿವಾರಣೆಯಾಗಿದೆ ಎಂದು ತಿಳಿಸಿದರು.
ವಿಶ್ವವಿದ್ಯಾಲಯಗಳಲ್ಲಿ ಒಟ್ಟು 8000 ಹುದ್ದೆಗಳು ಖಾಲಿ ಇದ್ದು, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸುಮಾರು 110 ಹುದ್ದೆಗಳು ಖಾಲಿ ಇವೆ. ರೋಸ್ಟರ್ ಅಡಿ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದು, ಆ ಸಮಸ್ಯೆ ನಿವಾರಿಸಲಾಗಿದ್ದು, ಶೀಘ್ರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು. ಸಮಕುಲಪತಿ ಪ್ರೊ| ಜಿ.ಆರ್. ನಾಯಕ್, ಕುಲಸಚಿವ (ಮೌಲ್ಯಮಾಪನ) ಪ್ರೊ| ಚಂದ್ರಕಾಂತ ಯಾತನೂರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.