ಆರಾಧನೆಗೆ ಜಾತಿ ಸಂಕೋಲೆಯಿಲ್ಲ


Team Udayavani, Oct 23, 2017, 10:13 AM IST

gul-1.jpg

ಸೇಡಂ: ಸಂತ, ಶರಣರ ಆರಾಧನೆಗೆ ಯಾವುದೇ ತರಹದ ಜಾತಿ ಸಂಕೋಲೆಗಳು ಇರುವುದಿಲ್ಲ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾ ಧಿಪತಿ ಪೂಜ್ಯ ಸುಭುದೇಂದ್ರತೀರ್ಥ ಶ್ರೀಪಾದಂಗಳವರು ನುಡಿದರು. ಪಟ್ಟಣದ ಕೋಡ್ಲಾ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಭೂಮಿ ಪೂಜೆ ನೆರವೇರಿಸಿದ ಅವರು, ನಂತರ ತಾಪಾಡಿಯಾ ಭವನದಲ್ಲಿ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ರಾಘವೇಂದ್ರ ಸ್ವಾಮೀಜಿ ಸರ್ವ ಜಾತಿ, ಜನಾಂಗದ ಭಕ್ತರಿಂದ ಪೂಜಿಸಲ್ಪಟ್ಟವರು. ಅವರ ನಿತ್ಯ ಆರಾಧನೆಯಿಂದ ಮನಶಾಂತಿ ದೊರೆಯುತ್ತದೆ. ಇಷ್ಟಾರ್ಥಗಳ ಈಡೇರಕರಾಗಿರುವ ರಾಯರನ್ನು ಸೇಡಂ ಪಟ್ಟಣಕ್ಕೆ ಬರಮಾಡಿಕೊಳ್ಳುವ ಜವಾಬ್ದಾರಿ ಪ್ರತಿ ಸಮಾಜದ ವ್ಯಕ್ತಿಗಳ ಮೇಲೂ ಇದೆ. ಎಲ್ಲರೂ ಒಟ್ಟಾಗಿ ರಾಯರ ಮಠ ನಿರ್ಮಿಸುವಂತಾಗಬೇಕು ಎಂದು ನುಡಿದರು.

ಮಾನವನು ಸಮಯದ ಸದುಪಯೋಗ ಮಾಡಿಕೊಳ್ಳದೇ ದಿನನಿತ್ಯ ನರಳುವಂತಾಗಿದೆ. ಸರಿಯಾದ ರೀತಿಯಲ್ಲಿ ಸಮಯ ಸದ್ಬಳಕೆಯಾದರೆ ಆರ್ಥಿಕ, ಸಾಮಾಜಿಕ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯ. ಭವ ರೋಗದಿಂದ ಮುಕ್ತಿ ಹೊಂದಲು ರಾಯರ ಆರಾಧನೆ ಅತಿಮುಖ್ಯ. ರಾಘವೇಂದ್ರ ಸ್ವಾಮೀಜಿ ನೆಲೆಸುವ ಸ್ಥಳ ಸರ್ವ ಸಂಪದ್ಭರಿತ ಆಗಿರುತ್ತದೆ ಎಂದು ಹೇಳಿದರು.

ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಲಕ್ಷಾಂತರ ಜನರ ಆರಾಧ್ಯ ದೈವವಾಗಿರುವ ರಾಘವೇಂದ್ರ ಸ್ವಾಮೀಜಿ ಮಠ ಸೇಡಂನಲ್ಲಿ ನಿರ್ಮಾಣ ಆಗುತ್ತಿರುವುದು ಖುಷಿ ತಂದಿದೆ. ಕಾಮಗಾರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಅಥವಾ ವೈಯಕ್ತಿಕವಾಗಿ ಸೇವೆ ಸಲ್ಲಿಸಲು ಸದಾ ಸಿದ್ಧರಿರುವುದಾಗಿ ಭರವಸೆ ನೀಡಿದರು.

ಶ್ರೀಮಠದ ಅರ್ಚಕ ವಾದಿರಾಜ ಆಚಾರ್ಯ, ಸುಭಾಶ ಆಚಾರ್ಯ, ಹಾಪಕಾಮ್ಸ್‌ ರಾಜ್ಯಾಧ್ಯಕ್ಷ ಬಸವರಾಜ ಪಾಟೀಲ ಊಡಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರಾವ್‌ ಮಾಲಿಪಾಟೀಲ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಸುದರ್ಶನರೆಡ್ಡಿ ಪಾಟೀಲ, ಪ್ರಮುಖರಾದ ಶ್ರೀನಿವಾಸರಾವ್‌ ದೇಶಪಾಂಡೆ, ಡಾ| ಮುರಳಿಧರ ದೇಶಪಾಂಡೆ, ಪಾಡುರಂಗ ಜೋಶಿ, ಸಂತೋಷ ಮಹಾರಾಜ ಸಿಂಧನಮಡು, ರಮೇಶ ಮಾಲು, ಕೃಷ್ಣಾಚಾರ ನವಲಿ, ಮೋಹನಕುಮಾರ ರಂಜೋಳ, ಅಮಿತ ಜೋಶಿ, ರಾಜಗೋಪಾಲರೆಡ್ಡಿ, ವೆಂಕಟೇಶ ಕುಲಕರ್ಣಿ, ನರಸಿಂಹ ಕುಲಕರ್ಣಿ, ಕಾಶಿನಾಥ ಕುಲಕರ್ಣಿ, ಸಂತೋಷ ಕುಲಕರ್ಣಿ ಇನ್ನಿತರರು ವೇದಿಕೆಯಲ್ಲಿದ್ದರು. ಸರೋಜಾ ಕುಲಕರ್ಣಿ ವೈಯಕ್ತಿಕ ಗೀತೆ ಹಾಡಿದರು. ಶ್ರೀನಿವಾಸ, ಭೀಮಸೇನರಾವ್‌ ಕುಲಕರ್ಣಿ ಪ್ರಾರ್ಥಿಸಿದರು. ಸಂತೋಷ ಕುಲಕರ್ಣಿ ಸ್ವಾಗತಿಸಿದರು. ರಾಮಚಂದ್ರ ಜೋಶಿ, ಜಗನ್ನಾಥ ದೇಶಕ ನಿರೂಪಿಸಿ, ವಂದಿಸಿದರು. 

ಪುರ ಪ್ರವೇಶಕ್ಕೆ ಭಕ್ತರ ಮಹಾಪೂರ
ಸೇಡಂ: ಪ್ರಥಮ ಬಾರಿಗೆ ಸೇಡಂ ಪುರಪ್ರವೇಶ ಮಾಡಿದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿ ಪತಿ ಪೂಜ್ಯ ಸುಬುಧೇಂದ್ರತೀರ್ಥ ಶ್ರೀಪಾದಂಗಳವರನ್ನು ಭಕ್ತ ಸಮೂಹ ಅದ್ಧೂರಿಯಾಗಿ ಸ್ವಾಗತಿಸಿತು. ಶನಿವಾರ ಸಂಜೆ ಪುರಪ್ರವೇಶ ಮಾಡಿದ ಶ್ರೀಗಳನ್ನು ಶ್ರೀ ಹನುಮಾನ ದೇವಾಲಯದಿಂದ ಲಕ್ಷ್ಮೀನಾರಾಯಣ ಮಂದಿರದ ವರೆಗೆ ತೆರೆದ ರಥದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಭಕ್ತರು ಪುಷ್ಪಾರ್ಚನೆ ಮಾಡಿದರು. ರವಿವಾರ ಬೆಳಗ್ಗೆ ಯಾದಗಿರಿ ರಸ್ತೆಯಲ್ಲಿರುವ ಭೂದಾನಿ ಪಾಡುರಂಗ ಜೋಶಿ ಅವರ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಾಲಯದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನಂತರ ಸಾಮೂಹಿಕ ಪಾದಪೂಜೆ ನೆರವೇರಿಸಿದ ನೂರಾರು ಭಕ್ತರು, ಸಂಸ್ಥಾನ ಮಹಾಪೂಜೆಯಿಂದ ಕಾರ್ಯಕ್ರಮ ಸಂಪನ್ನಗೊಳಿಸಿದರು.

ಟಾಪ್ ನ್ಯೂಸ್

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.