ಶುದ್ಧೀಕರಣ ಘಟಕವಿದ್ದರೂ ಶುದ್ಧ ನೀರಿಲ್ಲ!

•ವಾಡಿ ಜನತೆಗೆ ರಾಡಿ ನೀರೇ ಗತಿ•ಅನಾರೋಗ್ಯದ ಬಳುವಳಿ•ಅಧಿಕಾರಿಗಳ ನಿರ್ಲಕ್ಷ್ಯ

Team Udayavani, May 21, 2019, 1:11 PM IST

gulbarga-tdy-1…

ವಾಡಿ: ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಾಗಿದೆ. ಘಟಕ ನಿರ್ವಹಣೆ ಮಾಡುವ ಸಿಬ್ಬಂದಿಗಳಿಗೆ ವೇತನವೂ ಪಾವತಿಸಲಾಗುತ್ತಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬ್ಲೀಚಿಂಗ್‌ ಫೌಡರ್‌ ಸೇರಿದಂತೆ ಇತರ ಬಳಕೆ ವಸ್ತುಗಳ ಖರೀದಿ ಲೆಕ್ಕಪತ್ರ ಇದೆ. ಇನ್ನು ಪೈಪ್‌ ದುರಸ್ತಿ, ಯಂತ್ರಗಳ ರಿಪೇರಿ ಹೆಸರಿನಲ್ಲಿ ಬರೆದಿಡಲಾದ ಬಿಲ್ಗಳ ಕಡತ ಕಚೇರಿಯಲ್ಲಿಡಲು ಜಾಗವಿಲ್ಲದಷ್ಟಿವೆ. ಇಷ್ಟಾಗಿಯೂ ಜನರಿಗೆ ಹನಿ ಶುದ್ಧ ನೀರು ಸಿಗುವುದಿಲ್ಲ. ವಾಡಿ ಜನರ ಪಾಲಿಗೆ ರಾಡಿ ನೀರೇ ಗತಿ ಎಂಬಂತಾಗಿದೆ!

ಹೌದು, ಮಿನಿ ಮುಂಬೈ ಎಂದು ಕರೆಯಿಸಿಕೊಳ್ಳುವ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಜನರಿಗೆ ಶುದ್ಧೀಕರಿಸದ ಕಲುಷಿತ ನೀರನ್ನೇ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪವಿದ್ದರೂ ಪುರಸಭೆ ಅಧಿಕಾರಿಗಳು ಮಾತ್ರ ಇದಕ್ಕೆ ತಲೆಕೆಡಿಸಿಕೊಂಡಿಲ್ಲ. ಜನರ ಆರೋಗ್ಯದ ಮೂಲವೇ ಕುಡಿಯುವ ನೀರು ಮತ್ತು ತಿನ್ನುವ ಆಹಾರ. ಕುಡಿಯಲು ಶುದ್ಧ ನೀರು ಕೇಳುವುದು ಜನರ ಮೂಲಭೂತ ಹಕ್ಕು. ಪ್ರತಿ ಬಡಾವಣೆಗೂ ನೀರು ಸರಬರಾಜು ಮಾಡುತ್ತಿರುವ ಸ್ಥಳೀಯ ಪುರಸಭೆ ಆಡಳಿತ, ಅಶುದ್ಧ ನೀರನ್ನೇ ಶುದ್ಧ ನೀರೆಂದು ನಂಬಿಸಿ ವಂಚಿಸುತ್ತಿದೆ ಎಂಬುದು ಸಾರ್ವಜನಿಕರ ಆರೋಪ.

ಈ ಮೊದಲು ಮಳೆಯಿಂದ ಹರಿದು ಬಂದ ನದಿ ನೀರನ್ನೇ ನೇರವಾಗಿ ಜನರಿಗೆ ತಲುಪಿಸಲಾಗುತ್ತಿತ್ತು. ಈಗ ಬೆಣ್ಣೆತೋರಾ ಜಲಾಶಯದಲ್ಲಿ ವರ್ಷಾನುಗಟ್ಟಲೆ ನಿಂತು ಹಸಿರು ಪಾಚಿಗಟ್ಟಿದ ಕಲುಷಿತ ನೀರನ್ನೇ ಜನರಿಗೆ ಪೂರೈಸಲಾಗುತ್ತಿದೆ. ನಳಗಳಿಂದ ಬರುವ ನೀರು ವಾಸನೆ ಬರುತ್ತಿದೆ. ನೀರಿನ ಬಣ್ಣ ಬದಲಾಗಿದೆ. ಕೊಳಕು ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯಲು ನೀರು ಯೋಗ್ಯವಿಲ್ಲ ಎಂದು ಸ್ಥಳೀಯರು ದೂರುತ್ತಿದ್ದಾರೆ. ಕಲುಷಿತ ರಾಡಿ ನೀರು ಸೇವಿಸಿ ಮಕ್ಕಳು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ವಾರ್ಡ್‌ 23ರ ಇಂದ್ರಾ ನಗರದ ಸಿಂಡಿಕೇಟ್ ನಿವಾಸಿಗಳು ಕಲ್ಲು ಗಣಿಯಲ್ಲಿ ನಿಂತ ನೀರು ಹೊತ್ತು ತರುತ್ತಿದ್ದಾರೆ. ಸೂಕ್ಷ್ತ್ರ ಜೀವಿಗಳು ನೀರಿನ ಮೂಲಕ ದೇಹ ಸೇರಿಕೊಂಡು ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿವೆ. ಪುರಸಭೆ ಪೂರೈಸುವ ನಳಗಳ ನೀರನ್ನು ಬಳಕೆಗೆ ಮತ್ತು ಖಾಸಗಿ ನೀರು ಶುದ್ಧೀಕರಣ ಘಟಕಗಳಿಂದ ಕುಡಿಯಲು ನೀರು ಖರೀದಿಸಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ. ಪುರಸಭೆಯ ನೀರು ಶುದ್ಧೀಕರಣ ಘಟಕ ಕೇವಲ ನಾಮಕೇವಾಸ್ತೆ ಎಂಬಂತಿದೆ. ಅದು ಕೇಲವ ಖರ್ಚು ಲೆಕ್ಕ ಬರೆಯಲು ಮಾತ್ರ ಚಾಲನೆಯಲ್ಲಿದೆ ಎಂದು ನಿವಾಸಿಗಳು ಶಾಪ ಹಾಕುತ್ತಿದ್ದಾರೆ.

•ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.