ಮಕ್ಕಳ ಕಳ್ಳರೆಂದು ಭಾವಿಸಿಮೂವರಿಗೆ ಥಳಿತ; ವ್ಯಕ್ತಿ ಸಾವು
Team Udayavani, Jul 14, 2018, 10:48 AM IST
ಔರಾದ: ಹಂದಿಕೇರಾ ಗ್ರಾಮದಲ್ಲಿ ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಶಾಲೆಯ ಬಳಿ ತಿರುಗುತ್ತಿದ್ದ ಮೂವರನ್ನು ಮಕ್ಕಳ ಕಳ್ಳರೆಂದು ಶಂಕಿಸಿ ಮುರ್ಕಿ ಗ್ರಾಮಸ್ಥರು ಥಳಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಥಳಿತಕ್ಕೊಳಗಾದ ಒಬ್ಬ ವ್ಯಕ್ತಿ ಔರಾದ ತಾಲೂಕು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಹಂದಿಕೇರಾ ಗ್ರಾಮದಲ್ಲಿ ಮೂವರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ತಿರುಗಾಡುತ್ತಿದ್ದರು. ಶಾಲೆಯ ಪಕ್ಕದಲ್ಲೇ ನಿಂತಿದ್ದರಿಂದ ಅಲ್ಲೇ ಇದ್ದ ಮಕ್ಕಳಿಗೆ ಚಾಕೋಲೇಟ್ ಕೊಡಲು ಯತ್ನಿಸಿದ್ದಾರೆ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು “ಮಕ್ಕಳ ಕಳ್ಳರೆಂದು’ ಪ್ರಶ್ನಿಸಿದ್ದಾರೆ.
ಅಪಾಯದ ಮುನ್ಸೂಚನೆ ಅರಿತ ಮೂವರು ಕಾರಿನಲ್ಲಿ ಪರಾರಿಯಾಗಿದ್ದಾರೆ. ಇದರಿಂದ ಕ್ರುದ್ಧಗೊಂಡ ಹಂದಿಕೇರಾ
ಗ್ರಾಮಸ್ಥರು ಮುರ್ಕಿ ಗ್ರಾಮಸ್ಥರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮೊದಲೇ ಮಾಹಿತಿ ಅರಿತಿದ್ದ ಮುರ್ಕಿ ಗ್ರಾಮಸ್ಥರು ರಸ್ತೆಗೆ ಅಡ್ಡಲಾಗಿ ಕಲ್ಲು ಹಾಕಿ ಕಾಯುತ್ತ ಕುಳಿತಿದ್ದಾರೆ.
ನೂರಾರು ಜನ ಸೇರಿದ್ದಲ್ಲದೇ, ರಸ್ತೆಗೆ ಕಲ್ಲು ಅಡ್ಡ ಹಾಕಿದ್ದರಿಂದ ಹೆದರಿ ಕಾರನ್ನು ಕಲ್ಲಿನ ಮೇಲೆಯೇ ಹತ್ತಿಸಿ
ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ, ಕಲ್ಲಿನ ಮೇಲೆ ಹತ್ತಿಸುವ ವೇಳೆ ಕಾರು ಉರುಳಿ ಬಿದ್ದಿದೆ. ಆಗ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕಮಲನಗರ ಸಿಪಿಐ ದಯಾಸಾಗರ ನೇತೃತ್ವದಲ್ಲಿ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಗಾಯಗೊಂಡಿದ್ದ ಮೂವರಿಗೂ ಮುರ್ಕಿ ಗ್ರಾಮದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಗಂಭೀರ ಗಾಯಗೊಂಡಿದ್ದ
ಒಬ್ಬನನ್ನು ಹೆಚ್ಚಿನ ಚಿಕಿತ್ಸೆಗೆ ಔರಾದ ತಾಲೂಕು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ.
ಹಂದಿಕೇರಾ ಗ್ರಾಮಕ್ಕೆ ಬಂದವರು ಮಕ್ಕಳ ಕಳ್ಳರು ಅಲ್ಲ. ಹೈದಾರಾಬಾದ್ ಮೂಲದವರಾಗಿದ್ದು, ಕಾರಿನಲ್ಲಿ ಲಾಂಗ್
ಡ್ರೈವ್‌ಗೆ ಬಂದಿದ್ದರು.
ಡಿ. ದೇವರಾಜ, ಎಸ್‌ಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.