ಸಿಯುಕೆಗೆ ಕೆನರಾ ಬ್ಯಾಂಕಿಂದ ಟ್ರ್ಯಾಕ್ಟರ್‌ ಟ್ಯಾಂಕರ್‌ ಕೊಡುಗೆ


Team Udayavani, May 29, 2022, 11:51 AM IST

6CUK

ಕಲಬುರಗಿ: ಕೆನರಾ ಬ್ಯಾಂಕ್‌ ತನ್ನ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರೀಯ ವಿಶ್ವ ವಿದ್ಯಾಲಯದ ಕ್ಯಾಂಪಸ್‌ನಲ್ಲಿ ಗಿಡ ನೆಟ್ಟು ಪೋಷಿಸಲು ಸಹಾಯವಾಗಲಿ ಎನ್ನುವ ಉದ್ದೇಶದಿಂದ ಟ್ರ್ಯಾಕ್ಟರ್‌ ಟ್ಯಾಂಕರ್‌ನ್ನು ಶನಿವಾರ ಕಾಣಿಕೆಯಾಗಿ ನೀಡಿದೆ.

ಸಿಯುಕೆ ಕ್ಯಾಂಪಸ್‌ನಲ್ಲಿ ಸಿಯುಕೆ ಕುಲಪತಿ ಪ್ರೊ| ಬಟ್ಟು ಸತ್ಯಾನಾರಾಯಣ ಅವರಿಗೆ ಬ್ಯಾಂಕ್‌ನ ಮಹಾ ಪ್ರಬಂಧಕ ಭಾಸ್ಕರ್‌ ಚಕ್ರವರ್ತಿ ಅವರಿಗೆ ಟ್ಯಾಂಕರ್‌ನ ಕೀ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಪ್ರೊ| ಬಟ್ಟು, ಇದೊಂದು ಉತ್ತಮ ಬೆಳವಣಿಗೆ. ಇಂತಹ ಸಾಮಾಜಿಕ ಕಾರ್ಯಗಳಿಂದ ಬ್ಯಾಂಕ್‌ ಕೂಡ ತನ್ನ ಬದ್ಧತೆ ಮತ್ತು ಪ್ರಾಮಾಣಿಕ ಸೇವೆಯನ್ನು ಇನ್ನಷ್ಟು ವೃದ್ಧಿಸಲು ಸಹಾಯವಾಗುತ್ತದೆ. ಇದರಿಂದ ಸಿಬ್ಬಂದಿ ಮತ್ತು ಗ್ರಾಹಕರ ಮಧ್ಯದ ಸಂಪರ್ಕ ಇನ್ನಷ್ಟು ಸುಧಾರಿಸುತ್ತದೆ ಎಂದರು.

ಪರಿಸರ ಸಂರಕ್ಷಣೆ ದೊಡ್ಡ ಸವಾಲು. ಇದನ್ನು ನಾವೆಲ್ಲರೂ ಮಾಡಬೇಕಾದ ಅನಿವಾರ್ಯತೆಯಲ್ಲಿ ಇದ್ದೇವೆ. ಇಂತಹ ಕೊಡುಗೆಗಳು ಬ್ಯಾಂಕಿನ ಅಮೋಘ ಸೇವೆಯ ಭಾಗವಾಗಿದೆ. ಗಿಡ ನೆಟ್ಟು ಪೋಷಿಸಿದರೆ ಬಿಸಿಲಿನ ತಾಪ ಕಡಿಮೆ ಆಗುತ್ತದೆ. ಓಜೋನ್‌ ಸಂರಕ್ಷಣೆಯೂ ಸಾಧ್ಯವಾಗುತ್ತದೆ. ಆಮ್ಲಜನಕ ಹೆಚ್ಚಳ, ಗಿಡ, ಸಸಿಗಳು ನೀಡುವ ಹಣ್ಣುಗಳಿಂದ ಪಕ್ಷಿ ಸಂಕುಲವೂ ಹೆಚ್ಚುತ್ತದೆ ಎಂದು ಹೇಳಿದರು.

ಕೆನರಾ ಬ್ಯಾಂಕ್‌ ಮಹಾ ಪ್ರಬಂಧಕ ಭಾಸ್ಕರ್‌ ಚಕ್ರವರ್ತಿ ಮಾತನಾಡಿ, ಬ್ಯಾಂಕ್‌ ತನ್ನ ಸಾಮಾಜಿಕ ಹೊಣೆಗಾರಿಕೆ ನಿಟ್ಟಿನಲ್ಲಿ ಟ್ಯಾಂಕರ್‌ನ್ನು ಸಿಯುಕೆಗೆ ನೀಡಿದೆ. ಇದರಿಂದ ಮುಂಬರುವ ದಿನಗಳಲ್ಲಿ ಕ್ಯಾಂಪಸ್‌ನಲ್ಲಿ ನೂರಾರು ಗಿಡ, ಮರಗಳು ಬೆಳೆಯುತ್ತವೆ. ಇದರಿಂದ ಪರಿಸರವನ್ನು ಕಾಪಾಡಿದಂತಾಗುತ್ತದೆ. ಕ್ಯಾಂಪಸ್‌ನಲ್ಲಿ ಬಿಸಿಲಿನ ತಾಪ ಕಡಿಮೆಯಾಗಿ ಓದಲು ಬರುವ ಮಕ್ಕಳಿಗೆ ತಣ್ಣನೆ ವಾತಾವರಣ ಸೃಷ್ಟಿಯಾಗಲಿದೆ. ಅಲ್ಲದೇ ಆ್ಯಂಬುಲೆನ್ಸ್‌, ವೈದ್ಯಕೀಯ ಉಪಕರಣ, ನೀರು ಫ್ಯೂರಿಫಾಯರ್‌ಗಳನ್ನು ಅನೇಕ ಸಾಮಾಜಿಕ ಸಂಸ್ಥೆಗಳಿಗೆ ಬ್ಯಾಂಕ್‌ ವತಿಯಿಂದ ನೀಡಲಾಗಿದೆ ಎಂದರು.

ಸಿಯುಕೆ ಮುಖ್ಯ ಪರೀಕ್ಷಾ ಅಧಿಕಾರಿ ಚನ್ನವೀರ, ಹಣಕಾಸು ಅಧಿಕಾರಿ ಎಸ್‌. ಶಿವಾನಂದಂ, ಕೆನರಾ ಬ್ಯಾಂಕ್‌ ಕಲಬುರಗಿ ಕ್ಷೇತ್ರೀಯ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕ ಸಂಜೀವಪ್ಪ ಆರ್‌.ಬಿ, ಕಡಗಂಚಿ ಶಾಖಾ ವ್ಯವಸ್ಥಾಪಕಿ ಶುಭಶ್ರೀ, ದೀಕ್ಷಿತ್‌, ಸಿಬ್ಬಂದಿ ಪಾಲ್ಗೊಂಡಿದ್ದರು. ವಿಭಾಗೀಯ ಪ್ರಬಂಧಕ ವೀರಪ್ಪ ನಿರೂಪಿಸಿ, ಸ್ವಾಗತಿಸಿದರು.

ಕೆನರಾ ಬ್ಯಾಂಕ್‌ ಕೇವಲ ವ್ಯಾಪಾರದ ಉದ್ದೇಶವನ್ನಷ್ಟೆ ಹೊಂದಿಲ್ಲ. ಬ್ಯಾಂಕ್‌ ಇರುವುದು ಸಮಾಜದಲ್ಲಿಯೇ. ಬ್ಯಾಂಕ್‌ ಜನರಿಂದಲೇ ನಡೆಯುತ್ತದೆ. ಆದ್ದರಿಂದ ಬ್ಯಾಂಕ್‌ ಜನರಿಗಾಗಿಯೇ ಯೋಜನೆ ರೂಪಿಸುತ್ತದೆ ಮತ್ತು ಯೋಚಿಸುತ್ತದೆ. ಸಾಮಾಜಿಕ ಹೊಣೆಗಾರಿಕೆಯ ಅನುದಾನದಲ್ಲಿ ಸಾಕಷ್ಟು ಕಾರ್ಯಗಳು ನಡೆದಿವೆ, ನಡೆಯುತ್ತದೆ. ಇದಕ್ಕೆ ಜನರ ಸಹಕಾರವೂ ಇರಲಿ. ಭಾಸ್ಕರ್ಚಕ್ರವರ್ತಿ, ಮಹಾಪ್ರಬಂಧಕ, ಕೆನರಾ ಬ್ಯಾಂಕ್

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.