ಯಡ್ರಾಮಿ: ಟ್ರ್ಯಾಕ್ಟರ್ ಹಾಯ್ದು ಸೆಕ್ಯುರಿಟಿ ಗಾರ್ಡ್ ದುರ್ಮರಣ
Team Udayavani, Mar 7, 2022, 11:31 AM IST
ಯಡ್ರಾಮಿ(ಕಲಬುರಗಿ) : ಟ್ರ್ಯಾಕ್ಟರ್ ಹಾಯ್ದು ಸೆಕ್ಯುರಿಟಿ ಗಾರ್ಡ್ ಯೊಬ್ಬ ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಮಳ್ಳಿ-ನಾಗರಳ್ಳಿ ಉಗಾರ್ ಶುಗರ್ಸ್ (ಘಟಕ-2) ಕಾರ್ಖಾನೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಹದನೂರು ಗ್ರಾಮದ ಮಲ್ಲಿಕಾರ್ಜುನ ಜಂಡೆ (23) ಮೃತ ದುರ್ಧೈವಿ.
ಕಳೆದ ಹದಿನೈದು ದಿನಗಳ ಹಿಂದಷ್ಟೆ ಕಾರ್ಖಾನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸಕ್ಕೆ ಸೇರಿದ್ದ ಮಲ್ಲಿಕಾರ್ಜುನ ಎಂದಿನಂತೆ ರವಿವಾರ ರಾತ್ರಿ ಪಾಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ನಿದ್ದೆ ಬರುತ್ತಿದೆ ಎಂದು ಕಬ್ಬು ಹೊತ್ತುಕೊಂಡು ನಿಂತ ಟ್ರ್ಯಾಕ್ಟರ್ ಚಕ್ರದ ಮುಂದೆ ಮಲಗಿಕೊಂಡಿದ್ದಾನೆ. ಟ್ರ್ಯಾಕ್ಟರ್ ಸರದಿ ಬಂದಾಗ ಅದರ ಚಾಲಕ ಸಹಜವಾಗಿ ವಾಹನ ಚಾಲನೆ ಮಾಡಿಕೊಂಡು ಹೋಗುವಾಗ ಚಕ್ರದಡಿ ಸಿಲುಕಿ ಒದ್ದಾಡ ತೊಡಗಿದ್ದಾನೆ. ಚಕ್ರ ಉರುಳಲು ಕಲ್ಲು ಅಡಚಣೆ ಆಗಿರಬಹುದೆಂದು ಚಾಲಕ ವಾಹನದಿಂದ ಕೆಳಗಿಳಿದು ನೋಡಿದಾಗ ಸೆಕ್ಯುರಿಟಿ ಗಾರ್ಡ್ ಒದ್ದಾಡುತ್ತಿರುವುದನ್ನು ಕಂಡು ತಕ್ಷಣ ಅಲ್ಲಿದ್ದ ಸಿಬ್ಬಂದಿ ಗಮನಕ್ಕೆ ತಂದಿದ್ದಾನೆ.
ಇತರ ಸಿಬ್ಬಂದಿಯ ಸಹಕಾರದಿಂದ ತಕ್ಷಣವೇ ವಿಜಯಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಸಾವಪ್ಪಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.