ಲಸಿಕೆಯೊಂದಿಗೆ ಹಳ್ಳಿ ಗೆ ಸಾರಿಗೆ ಬಸ್
Team Udayavani, Jun 16, 2021, 4:28 PM IST
ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಕ್ಕೆ ತೆರಳಿ ಕೊರೊನಾ ಲಸಿಕೆ ಹಾಕಲು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್‌ಗಳು ಸಿದ್ಧವಾಗಿವೆ. ಜಿಲ್ಲಾಡಳಿತ ಸಹಯೋಗದೊಂದಿಗೆ ಸಾರಿಗೆ ಸಂಸ್ಥೆಯ ಎರಡು ಬಸ್‌ಗಳನ್ನು ವೈದ್ಯಕೀಯ ಸೌಲಭ್ಯಗಳೊಂದಿಗೆ ಸುಸಜ್ಜಿತ ವಾಗಿ ಸಿದ್ದಪಡಿಸಲಾಗಿದ್ದು, ಬುಧವಾರ (ಜೂ. 16) ಚಾಲನೆ ನೀಡಲಾಗುತ್ತಿದೆ.
ವ್ಯಾಕ್ಸಿನ್ ಹೊತ್ತ ಬಸ್‌ಗಳು ಇಲ್ಲಿಯ ವರೆಗೆ ವ್ಯಾಕ್ಸಿನ್ ಹಾಕಿಸಿಕೊಳ್ಳದ ಅದರಲ್ಲೂ ಸಮುದಾಯ ಆರೋಗ್ಯದಿಂದ ದೂರ ಇರುವ ಹಳ್ಳಿಗೆ ತಲುಪಿ ಜನರಿಗೆ ಲಸಿಕೆ ಹಾಕಲಿವೆ. ಇದರಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಇರಲಿದ್ದು ಲಸಿಕೆ ನೀಡುತ್ತಾರೆ. ಬಸ್ ಚಾಲಕ ಹಾಗೂ ಡೀಸೆಲ್‌ನ್ನು ಸಾರಿಗೆ ಸಂಸ್ಥೆ ನೀಡಲಿದೆ. ಎನ್‌ಇಕೆಆರ್‌ಟಿಸಿ ಸಂಸ್ಥೆ ಅಧ್ಯಕ್ಷ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ವರ್ಕ್ ಶಾಪ್‌ನಲ್ಲಿ ಮಂಗಳವಾರ ಈ ಬಸ್‌ಗಳನ್ನು ವೀಕ್ಷಿಸಿದರು.
ನಂತರ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಲಸಿಕೆಯನ್ನು ಜನರಿಗೆ ವ್ಯಾಪಕವಾಗಿ ತಲುಪಿಸಲು ತೀರ್ಮಾನಿಸಲಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿ ರೈತರು, ಕಾರ್ಮಿಕರು ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿರುತ್ತಾರೆ. ಆದ್ದರಿಂದ ಅವರ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲದೇ ಇತರ ಜಿಲ್ಲೆಗಳಿಂದಲೂ ಬೇಡಿಕೆ ಬಂದಲ್ಲಿ ಈ ರೀತಿಯ ಬಸ್‌ಗಳನ್ನು ಸಿದ್ಧಪಡಿಸಿ ಕೊಡಲಾಗುವುದು.
ಒಟ್ಟಾರೆ ಕೊರೊನಾ ವ್ಯಾಕ್ಸಿನ್ ಎಲ್ಲರಿಗೂ ತಲುಪಿಸಿ ಕೊರೊನಾ ಹೊಡೆದೋಡಿಸಬೇಕಿದೆ ಎಂದು ಹೇಳಿದರು. ಈಗಾಗಲೇ ಆರು ಬಸ್‌ಗಳನ್ನು ಆಕ್ಸಿಜನ್ ಸೌಲಭ್ಯ ಒದಗಿಸಲು ನೀಡಲಾಗಿದೆ. 46 ಚಾಲಕರನ್ನು ಸೇವೆಗೆ ಬಿಡಲಾಗಿದೆ ಎಂದರಲ್ಲದೇ ಬಸ್‌ನ್ನು ಸಜ್ಜುಗೊಳಿಸಿದ ಸಂಸ್ಥೆಯ ಸಿಬ್ಬಂದಿಗೆ ಅಭಿನಂದಿಸಿದರು. ಎನ್‌ಇಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.