ತ್ರಿವಳಿ ಕೊಲೆ ಪ್ರಕರಣ: 5 ಸೆರೆ

Team Udayavani, Jul 19, 2017, 12:28 PM IST

19-GUB-2.gif

ಕಲಬುರಗಿ: ಸೇಡಂ ತಾಲೂಕಿನ ಮುಗನೂರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮೂವರನ್ನು ಹತ್ಯೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಘಟನೆ ನಡೆದ 24 ಗಂಟೆಯಲ್ಲಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೊಪ್ಪಿಸಿದ್ದಾರೆ ಎಂದು ಈಶಾನ್ಯ ವಲಯದ ಐಜಿಪಿ ಆಲೋಕಕುಮಾರ ತಿಳಿಸಿದರು.

ಪೊಲೀಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂವರನ್ನು ಹತ್ಯೆ ಮಾಡಿ ವಿವಿಧೆಡೆ ಪರಾರಿಯಾಗಿದ್ದ ಆರೋಪಿಗಳನ್ನು ನಾಲ್ಕು ತಂಡದವರು ದಾಳಿ ನಡೆಸಿ ಹರಸೂರಲ್ಲಿ ಚಂದ್ರಕಾಂತ ಅಮಲಯ್ಯ ಕಲಾಲ, ಮಲ್ಲಿಕಾರ್ಜುನ ಚಂದ್ರಕಾಂತ ಕಲಾಲರನ್ನು, ಗಡಿಕೇಶ್ವರದಲ್ಲಿ ಲಕ್ಷ್ಮಯ್ಯ ಹಣಮಯ್ಯ ಈಳಗೇರ, ಚಂದ್ರಮ್ಮ ಚಂದ್ರಕಾಂತ ಕಲಾಲ, ಬೆಂಗಳೂರಿನ ಯಲಹಂಕದಲ್ಲಿ ನಾರಾಯಣ ಚಂದ್ರಕಾಂತ ಕಲಾಲ ಎನ್ನುವರನ್ನು ಬಂಧಿಸಲಾಗಿದೆ ಎಂದರು.

ಮುಗನೂರದ ಸರ್ವೇ ಸಂಖ್ಯೆ 73’1 ರಲ್ಲಿನ ಜಮೀನು ಕಲಾಲ ಮತ್ತು ಕೊಳ್ಳಿ ಕುಟುಂಬದವರ ಮಧ್ಯ ಕಳೆದ 16 ವರ್ಷಗಳಿಂದ ವಿವಾದವಿದ್ದು, ಕೊಳ್ಳಿ ಕುಟುಂಬದವರು ಜು.16 ರಂದು ಉಳುಮೆ ಮಾಡಲು ಹೋದಾಗ ಚಂದ್ರಕಾಂತ ಕಲಾಲ ಹಾಗೂ ಆತನ ಮನೆಯವರು ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ದೇವರಾಯ ಅಡಿವೆಪ್ಪ ಕೊಳ್ಳಿ(60), ಕಾಳಮ್ಮಾ ದೇವರಾಯ ಕೊಳ್ಳಿ(53) ಹಾಗೂ ರಾಜಶೇಖರ ಬಸವರಾಜ ಕೊಳ್ಳಿ(24) ಎಂಬುವವರನ್ನು ಕೊಲೆ ಮಾಡಿದ್ದರು. ಪ್ರಕರಣದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಚಿಂಚೋಳಿ ಡಿಎಸ್‌ಪಿ ಯು.ಶರಣಪ್ಪ, ಸೇಡಂ ಸಿಪಿಐ ಪಿ.ವಿ.ಸಾಲಿಮಠ, ಮುಧೋಳ ಪಿಐ ತಮ್ಮರಾಯ ಪಾಟೀಲರ ನೇತೃತ್ವದಲ್ಲಿ ಮಿರಿಯಾಣ ಪಿಎಸ್‌ಐ ಎಸ್‌.ಎ.ಪಟೇಲ, ಚಿಂಚೋಳಿ ಪಿಎಸ್‌ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಹಣಮಂತ, ಬಸವರಾಜ,ಗೌತಮ, ಶ್ರೀನಿವಾಸರೆಡ್ಡಿ, ಆಸೀಫ್‌ಮಿಯಾ, ಇಂದುಮತಿ, ಶಿವಕುಮಾರ, ಮಲ್ಲಿಕಾರ್ಜುನ ಸೇರಿ ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರವಾಹನಗಳನ್ನು ಜಪ್ತಿಮಾಡಲಾಗಿದೆ ಎಂದರು.

24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸ್‌ ಸಿಬ್ಬಂದಿಗಳ ಕರ್ತವ್ಯ ಮೆಚ್ಚಿ 10 ಸಾ.ರೂ.ಗಳ ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದರು. ಎಸ್‌ಪಿ ಎನ್‌.ಶಶಿಕುಮಾರ, ಡಿಎಸ್‌ಪಿ ಯು.ಶರಣಪ್ಪ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

4

Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.