ತುನ್ನೂರ-ಹೊನ್ನಾಳ ಭೀಮಾನದಿಗೆ ಸೇತುವೆ


Team Udayavani, Mar 4, 2017, 3:42 PM IST

gul4.jpg

ವಾಡಿ: ನಾಲವಾರ ವ್ಯಾಪ್ತಿಯ ತುನ್ನೂರು ಮತ್ತು ಜೇವರ್ಗಿ ತಾಲೂಕಿನ ಹೊನ್ನಾಳ ಗ್ರಾಮಗಳ ಮಧ್ಯದ ಭೀಮಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಸರಕಾರದಿಂದ 50 ಕೋಟಿ ರೂ. ಮಂಜೂರಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ ಡಿಸಿಎಲ್‌) ಅಧಿಕಾರಿಗಳು ಗುರುವಾರ ಸ್ಥಳ ಪರಿಶೀಲನೆ ನಡೆಸಿದರು. 

ಕಳೆದ ಹತ್ತಾರು ವರ್ಷಗಳಿಂದಕಗ್ಗಂಟಾಗಿ ಉಳಿದಿದ್ದ ಉಭಯ ಗ್ರಾಮಸ್ಥರ ಸೇತುವೆ ನಿರ್ಮಾಣದ ಬೇಡಿಕೆ ಕೊನೆಗೂ ಈಡೇರಿದಂತಾಗಿದೆ. ಕ್ಷೇತ್ರದ ಶಾಸಕ-ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಶಿಪಾರಸಿನ ಮೇರೆಗೆ 50 ಕೋಟಿ ರೂ.ಬಿಡುಗಡೆಯಾಗುವ ಮೂಲಕ ಎರಡೂ ತಾಲೂಕಿನ ಜನರ ಸಾರಿಗೆ ಸಂಪರ್ಕಸರಳಗೊಳ್ಳುವ ದಿನಗಳು ಸಮೀಪಿಸಿದ್ದು, ಜನರಲ್ಲಿ ಹರ್ಷ ಮೂಡಿಸಿದೆ. 

ಹೊನ್ನಾಳ ಗ್ರಾಮದ ಮಾರ್ಗವಾಗಿ ಜೇವರ್ಗಿ ತಾಲೂಕಿಗೆ ಅತಿ ಹೆಚ್ಚು ಸಂಖ್ಯೆಯ ಜನರು ಪ್ರಯಾಣ ಬೆಳಸುತ್ತಾರೆ. ಇಲ್ಲಿ ಸೇತುವೆ ಸೌಲಭ್ಯ ಅತ್ಯಗತ್ಯವಾಗಿತ್ತು. ದೀರ್ಘ‌ ಕಾಲದ ನಂತರವಾದರೂ ಸೇತುವೆ ನಿರ್ಮಾಣ ಕಾರ್ಯಕ್ಕೆ ಹಸಿರು ನಿಶಾನೆ ದೊರೆತಿದೆ ಎಂದು ಅಧಿಧಿಕಾರಿಗಳ ತಂಡದಲ್ಲಿದ್ದ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ವೀರಣ್ಣಗೌಡ ಪರಸರೆಡ್ಡಿ ಪ್ರತಿಕ್ರಿಯಿಸಿದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ಸಾವಿರ ಕೋಟಿ ರೂ. ಮೊತ್ತದಲ್ಲಿ ರಾಜ್ಯದ ಪ್ರಮುಖ ರಸ್ತೆಗಳನ್ನು ಜೋಡಿಸಲು ಸೇತುವೆ ನಿರ್ಮಾಣ ಯೋಜನೆ ಪ್ರಕಟಿಸಿದ್ದರು. ಅದರಂತೆ ರಾಜ್ಯದಲ್ಲಿ ಒಟ್ಟು 195 ಸೇತುವೆಗಳು ಮಂಜೂರಾಗಿವೆ.ಇದರಲ್ಲಿ ತುನ್ನೂರ-ಹೊನ್ನಾಳ ಸೇತುವೆ ನಿರ್ಮಾಣವೂ ಸೇರಿದ್ದು, ಕಾಮಗಾರಿಗೆ ಆದೇಶಿಸಿದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಲಾಗುತ್ತಿದೆ. 

ನದಿಯಲ್ಲಿ 7ಕಿ.ಮೀ. ವಿಸ್ತೀರ್ಣದಷ್ಟು ಹಿನ್ನೀರಿನ ಹರಿವಿದೆ. 500 ಮೀ. ಉದ್ದ, 100 ಮೀ. ಅಗಲದ ಸೇತುವೆ ನಿರ್ಮಾಣವಾಗಲಿದೆ. ಇದರಿಂದ ಜೇವರ್ಗಿ ತಾಲೂಕಿನ ಬಿರಾಳ, ಆಂದೋಲಾ, ಗಂವಾರ, ನರಿಬೋಳ ಹಾಗೂ ಚಿತ್ತಾಪುರ ತಾಲೂಕಿನ ಅನೇಕ ಗ್ರಾಮಗಳ ಜನತೆಗೆ ಅನುಕೂಲವಾಗಲಿದೆ. 

ಎಂಟು ತಿಂಗಳ ನಂತರ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಕೆಆರ್‌ ಡಿಸಿಎಲ್‌ ಕಾರ್ಯ ನಿರ್ವಾಹಕ ಅಭಿಯಂತರ ಶಮಶೋದ್ಧೀನ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಕೆಆರ್‌ಡಿಸಿಎಲ್‌ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಗಿರೀಶ ಕುಮಾರ, ಕಡಬೂರ ಗ್ರಾಪಂ ಸದಸ್ಯ ಶಿವುಗೌಡ ತುನ್ನೂರ, ಸಿದ್ದಣ್ಣ ಮದ್ರಕಿ, ಬಸವರಾಜ ಕುಂಬಾರ, ಮರಲಿಂಗ ತುನ್ನೂರ ಹಾಗೂ ಗ್ರಾಮಸ್ಥರು ಇದ್ದರು. 

ಟಾಪ್ ನ್ಯೂಸ್

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.