ಖಜೂರಿ ಗ್ರಾಮದಲ್ಲಿ ತೊಗರಿಖರೀದಿಗೆ ಒತ್ತಾಯಿಸಿ ಪ್ರತಿಭಟನೆ


Team Udayavani, Jan 20, 2017, 12:41 PM IST

gul2.jpg

ಆಳಂದ: ಹೋಬಳಿ ಕೇಂದ್ರ ಖಜೂರಿ ಗ್ರಾಮದಲ್ಲಿ ತೊಗರಿ ಖರೀದಿ ಕೇಂದ್ರ ಪ್ರಾರಂಭ ಸೇರಿದಂತೆ ಇನ್ನಿತರ ಬೇಡಿಕೆ ಈಡೇರಿಕೆಗಾಗಿ ನಮ್ಮ ಕರುನಾಡು ರಕ್ಷಣಾ ವೇದಿಯ ಕಾರ್ಯಕರ್ತರು ಉಮರಗಾ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕಳೆದ ಸಾಲಿನಲ್ಲಿ ಬರ ಎದುರಾಗಿದ್ದರೂ ಬೆಳೆ ಪರಿಹಾರ ಬಂದಿಲ್ಲ.

ತಕ್ಷಣವೇ ಸರ್ಕಾರ ಬೆಳೆ ವಿಮೆ, ಬೆಳೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ವೇದಿಕೆ ಜಿಲ್ಲಾಧ್ಯಕ್ಷ ಗಂಗಾಧರ ಕುಂಬಾರ ಒತ್ತಾಯಿಸಿದರು. ಗ್ರಾಮದಲ್ಲಿ ತೊಗರಿ ಖರೀದಿ ಕೇಂದ್ರ ಪ್ರಾಂಭಿಸದಿರುವುದರಿಂದ ರೈತರು ಮಧ್ಯವರ್ತಿಗಳಿಗೆ ಮಾರಾಟ ಮಾಡಿ ಕೈ ಸುಟ್ಟುಕೊಳ್ಳುವಂತಾಗಿದೆ. 

ಖಜೂರಿಯಲ್ಲಿ ಕೂಡಲೇ ತೊಗರಿ ಖರೀದಿ ಪ್ರಾರಂಭಿಸಿ ರೈತರಿಗೆ ಅನುಕೂಲ ಒದಗಿಸಬೇಕು. ಅನಿಲ ಸಂಪರ್ಕ ಪಡೆಯದಿರುವ ಫಲಾನುಭವಿಗಳಿಗೆ ಸೀಮೆ ಎಣ್ಣೆ ಕಡಿತಗೊಳಿಸಲಾಗಿದೆ. ಅವರಿಗೂ ವಿತರಣೆ ಕಾರ್ಯ ಪ್ರಾರಂಭಗೊಳಿಸಬೇಕು ಎಂದು ಒತ್ತಾಯಿಸಿದರು. 

ಪ್ರತಿಭಟನೆಗೆ ಬೆಂಬಲಿಸಿದ ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಬಸವರಾಜ ಎಸ್‌. ಕೊರಳ್ಳಿ ಮಾತನಾಡಿ, ಬೆಳೆ ಪರಿಹಾರ ನೀಡಲು ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ. ಕೂಡಲೇ ತೊಗರಿಗೆ ಬೆಂಬಲ ಬೆಲೆ ನೀಡಿ ಖಜೂರಿ ವಲಯ ಸೇರಿ ಪ್ರತಿ ಹೋಬಳಿಯಲ್ಲಿ ಸಮಾರೋಪಾದಿಯಲ್ಲಿ ಖರೀದಿ ಪ್ರಕ್ರಿಯೆ ನಡೆಸಲು ಜಿಲ್ಲಾಡಳಿತ ಮಧ್ಯಸ್ಥಿಕೆ ವಹಿಸಬೇಕು.

ಇಲ್ಲವಾದಲ್ಲಿ ಹೋರಾಟ ಚುರುಕುಗೊಳಿಸಲಾಗುವುದು ಎಂದು ಎಚ್ಚರಿಸಿದರು.  ನಮ್ಮ ಕರುನಾಡು ತಾಲೂಕು ಅಧ್ಯಕ್ಷ ಗುರು ಬಂಗರಗಿ, ಗಜಾನಂದಸಾಲೇಗಾಂವ, ವಲಯ ಅಧ್ಯಕ್ಷ ಕುಮಾರ  ಬಂಡೆ, ಶ್ರೀಶೈಲ ಭೀಮಪೂರೆ, ಶ್ರೀನಿವಾಸ ಪಾತ್ರೆ, ಶರಣ ಕೋಟೆ, ವಿಜಯಕುಮಾರ ಪೂಜಾರಿ, ಶಿವುಕುಮಾರ ಹಳ್ಳೆ ಪಾಲ್ಗೊಂಡಿದ್ದರು. ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ಖಜೂರಿಯಲ್ಲಿ ಜ. 27ಕ್ಕೆ ತೊಗರಿ ಖರೀದಿ ಕೇಂದ್ರ ಪ್ರಾರಂಭಿಸಲಾಗುವುದು.

ಇನ್ನುಳಿದ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು. ಹೆದ್ದಾರಿ ತಡೆಯಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಒಳ ಮತ್ತು ಹೊರಭಾಗದಲ್ಲಿ ಸಂಚರಿಸಬೇಕಾಗಿದ್ದ ಎಲ್ಲ ವಾಹನಗಳ ಸಂಚಾರಕ್ಕೆ  ಪರದಾಡಿದವು. ಬಂದೋಬಸ್ತ್ ಒದಗಿಸಿದ್ದ ಪಿಎಸ್‌ಐ ಉದ್ದಂಡಪ್ಪ ಮತ್ತು ಸಿಬ್ಬಂದಿಗಳು ಸುಗಮ ಸಂಚಾರಕ್ಕೆ ಅನುಕೂಲ ಒದಗಿಸಿದರು. 

ಟಾಪ್ ನ್ಯೂಸ್

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Naa Ninna Bidalare Movie Review

Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!

Maharashtra; Gondia bus accident: PM announces compensation

Maharashtra; ಗೊಂಡಿಯಾ ಬಸ್‌ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ

sanjeev-ramya

Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್‌

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.