ಕಲಬುರಗಿಯಲ್ಲಿ ಮತ್ತಿಬ್ಬರಿಗೆ ಕೋವಿಡ್-19: ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆ
Team Udayavani, May 1, 2020, 6:23 PM IST
ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ದಿನದಿಂದ ದಿನಕ್ಕೆ ಮತ್ತಷ್ಟು ವ್ಯಾಪಿಸುತ್ತಿದ್ದು, ಶುಕ್ರವಾರ ಮತ್ತಿಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಮಹಾಮಾರಿ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 55 ವರ್ಷದ ವ್ಯಕ್ತಿ (ಪಿ-587) ಮತ್ತು ಕೋವಿಡ್-19 ಸೋಂಕಿತ ಮಹಿಳೆ (ಪಿ-425)ಯಿಂದ ಸಂಪರ್ಕದಲ್ಲಿದ್ದ 20 ವರ್ಷದ ಯುವತಿ (ಪಿ-588) ಸೋಂಕು ತಗುಲಿರುವುದು ಖಚಿತವಾಗಿದೆ.
ಈ ಹಿಂದೆ 26 ವರ್ಷದ ಮಹಿಳೆ (ಪಿ-425) ಯಿಂದಲೇ ಐವರಿಗೆ ಸೋಂಕು ಹರಡಿತ್ತು. ಇದೀಗ ಇನ್ನೋರ್ವ ವ್ಯಕ್ತಿಗೂ ಸೋಂಕು ಹಬ್ಬಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 24 ಜನರಿಗೆ ಸೋಂಕು ತಾಗಿರುವುದು ಧೃಢವಾಗಿದೆ. ಇದರಿಂದ ರಾಜ್ಯದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ 589ಕ್ಕೆ ಏರಿಕೆಯಾಗಿದೆ. ಇದರಲ್ಲಿ 251 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 22 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಮತ್ತು ಓರ್ವ ಸೋಂಕಿತ ಕೋವಿಡ್-19 ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.