ಸಾರಿಗೆ ಸಂಸ್ಥೆ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ
Team Udayavani, Nov 5, 2019, 10:58 AM IST
ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಬ್ಬರು ಅಧಿಕಾರಿಗಳು 50 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ. ನಗರ ಕೇಂದ್ರ ಬಸ್ ನಿಲ್ದಾಣದ 2ನೇ ವಿಭಾಗೀಯ ಕಚೇರಿ ನಿಯಂತ್ರಕ ಶರಣಬಸಪ್ಪ ಭಾವಿಕಟ್ಟಿ ಮತ್ತು ಸಹಾಯಕ ಸಾರಿಗೆ ವ್ಯವಸ್ಥಾಪಕ (ಎಟಿಎಂ) ಜಯವಂತ ಎಸಿಬಿ ಬಲೆಗೆ ಬಿದ್ದವರು.
ಆಳಂದ ಡಿಪೋ ಮ್ಯಾನೇಜರ್ ಈಶ್ವರ ಪರಿಟ್ ಅವರಿಂದ ಲಂಚ ಸ್ವೀಕರಿಸಿದ್ದರು. ಪ್ರಕರಣವೊಂದರಲ್ಲಿ ಈಶ್ವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದ್ದು, ಇದನ್ನು ಇತರ್ಥ್ಯ ಪಡಿಸಲು ಶರಣಬಸಪ್ಪ ಭಾವಿಕಟ್ಟಿ ಅವರು ಜಯವಂತ ಮೂಲಕ ಒಂದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಅದರಂತೆ ಈಶ್ವರ ಅವರಿಂದ ಜಯವಂತ 50 ಸಾವಿರ ರೂ. ಲಂಚ ಸ್ವೀಕರಿಸಿದ್ದರು. ಈ ಲಂಚದ ಹಣವನ್ನು ಸೋಮವಾರ ಸಂಜೆ ಭಾವಿಕಟ್ಟಿ ಅವರಿಗೆ ಜಯವಂತ ನೀಡಲು ಹೋದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಎಸಿಬಿ ಎಸ್‌ಪಿ ವಿ.ಜಿ. ಜ್ಯೋತಿ ಮಾರ್ಗದರ್ಶನದಲ್ಲಿ ಡಿಎಸ್‌ಪಿ ಸುಧಾ ಆದಿ, ಇನ್ಸ್‌ಪೆಕ್ಟರ್‌ಗಳಾದ ಕೃಷ್ಣಪ್ಪ ಕಲ್ಲದೇವರು, ಮಹಮ್ಮದ್ ಇಸ್ಮಾಯಿಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.