ಉದಯವಾಣಿ ದೀಪಾವಳಿ ವಿಶೇಷಾಂಕ ಬಿಡುಗಡೆ
Team Udayavani, Oct 17, 2017, 9:56 AM IST
ಕಲಬುರಗಿ: “ಉದಯವಾಣಿ’ ದಿನಪತ್ರಿಕೆಯ ದೀಪಾವಳಿ ವಿಶೇಷಾಂಕವನ್ನು ಸೋಮವಾರ ಮಹಾದಾಸೋಹಿ ಸಂಸ್ಥಾನದ ಪೀಠಾಧಿಪತಿಗಳು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ| ಶರಣಬಸವಪ್ಪ ಅಪ್ಪ ಅವರು ಮಹಾಸಂಸ್ಥಾನದಲ್ಲಿ ಬಿಡುಗಡೆ ಮಾಡಿದರು.
ಏಳು ವರ್ಷಗಳ ಹಿಂದೆ ಉದಯವಾಣಿ ಕಲಬುರಗಿ ಆವೃತ್ತಿಗೆ ತಾವೇ ಚಾಲನೆ ನೀಡಿದ್ದನ್ನು ನೆನಪಿಸಿದ ಅವರು, ಕರಾವಳಿ ಭಾಗದ ನಂ.1 ಪತ್ರಿಕೆಯಾಗಿರುವ “ಉದಯವಾಣಿ’ ಕಲ್ಯಾಣ ಕರ್ನಾಟಕದ ಈ ಭಾಗದಲ್ಲೂ ಮನೆ ಮಾತಾಗಿರುವುದು ಪತ್ರಿಕೆಯ ಸಾಮಾಜಿಕ ಕಾಳಜಿಗೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಶ್ಲಾಘಿಸಿದರು.
ಸಾಹಿತ್ಯ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ಉದಯವಾಣಿ ಬಳಗದ ದೀಪಾವಳಿ ವಿಶೇಷಾಂಕ, ನಾಡಿನ ದಿಗ್ಗಜರ ಕಥೆ-ಕವನಗಳು, ಪ್ರಬಂಧಗಳನ್ನು ಒಳಗೊಂಡು ಮಾದರಿಯಾಗಿದೆ. ವಿಶೇಷಾಂಕದ ಎಲ್ಲ ಲೇಖನಗಳು ಸಂಗ್ರಹ ಯೋಗ್ಯವಾಗಿವೆ ಎಂದು ಡಾ|ಅಪ್ಪ ತಿಳಿಸಿದರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ ನಿಷ್ಠಿ, ಸಹಕುಲಪತಿ ಡಾ| ವಿ.ಡಿ.ಮೈತ್ರಿ, ಕುಲಸಚಿವ ಡಾ|ಅನೀಲಕುಮಾರ ಬಿಡವೆ, ನಂದಿನಿ ಡಾ| ನಿರಂಜನ ನಿಷ್ಠಿ, ಉದಯವಾಣಿ ಕಲಬುರಗಿ ಆವೃತ್ತಿ ಹಿರಿಯ ವರದಿಗಾರ ಹಣಮಂತರಾವ ಭೈರಾಮಡಗಿ, ಜಾಹೀರಾತು ಸಹಾಯಕ ವ್ಯವಸ್ಥಾಪಕ ನಾಗಶೆಟ್ಟಿ ಡಾಕುಳಗಿ, ಪ್ರಸರಣ ಪ್ರತಿನಿಧಿ ರೇವಣಸಿದ್ದ ಜವಳಿ ಸೇರಿದಂತೆ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.