ವಿವಿ ಠಾಣೆ ಪಿಎಸ್ಐ ಅಮಾನತು ವಾಪಸ್ಸಿಗೆ ಒತ್ತಾಯ
Team Udayavani, Mar 1, 2017, 3:47 PM IST
ಕಲಬುರಗಿ: ವಿಶ್ವವಿದ್ಯಾಲಯ ಠಾಣೆ ಪಿಎಸ್ಐ ರಾಘವೇಂದ್ರ ಅವರ ಅಮಾನತನ್ನು ಕೂಡಲೇ ಹಿಂದೆ ಪಡೆಯುವಂತೆ ಒತ್ತಾಯಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕರ್ತವ್ಯ ನಿರ್ವಹಿಸಿದ್ದಕ್ಕೆ ಇಲಾಖೆ ನೀಡಿದ ಉಡುಗೊರೆ ಇದೇನಾ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಐಜಿಪಿ, ಎಸ್.ಪಿ.ಯವರಿಗೆ ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದವರಿಗೆ ಅಮಾನತು ಶಿಕ್ಷೆಯಾದರೆ, ಮುಂದೆ ಯಾರು ಕರ್ತವ್ಯ ನಿರ್ವಹಿಸಲು ಮುಂದಾಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಲ ಸಂಘಟನೆಗಳು, ರಾಜಕೀಯ ಮುಖಂಡರ ಒತ್ತಡಕ್ಕೆ ಮಣಿದು ಪಿಎಸ್ಐನ್ನು ಅಮಾನತು ಮಾಡಲಾಗಿದೆ. ಕೂಡಲೇ ಅಮಾನತನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ರಾಜ್ಯ ಗೌರವಾಧ್ಯಕ್ಷ ಆಂದೋಲಾದ ಸಿದ್ದಲಿಂಗ ಸ್ವಾಮೀಜಿ, ಪಾಳಾದ ಗುರುಮೂರ್ತಿ ಶಿವಾಚಾರ್ಯರು,
ಶ್ರೀನಿವಾಸ ಸರಡಗಿಯ ರೇವಣಸಿದ್ದ ಶಿವಾಚಾರ್ಯರು, ಸ್ಟೇಷನ್ ಬಬಲಾದನ ರೇವಣಸಿದ್ದ ಶಿವಾಚಾರ್ಯರು, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಅಪ್ಪು ಗುಬ್ಯಾಡ್ , ಬಸವರಾಜ ಮದ್ರಕಿ, ಉದಯಪಾಟೀಲ, ಮಲ್ಲಿಕಾರ್ಜುನ ಡೋಲೆ, ನಂದಕುಮಾರ ನಾಗಭುಜಂಗೆ, ಸಚೀನ ಫರತಾಬಾದ ಹಾಗೂ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.