ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದರು ವಾಜಪೇಯಿ
Team Udayavani, Aug 18, 2018, 11:26 AM IST
ವಾಡಿ: ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಭಾರತೀಯ ಜನತಾ ಪಕ್ಷದ ದೊಡ್ಡ ಶಕ್ತಿಯಾಗಿದ್ದರು. ಅವರ ಅಗಲಿಕೆಯಿಂದ ಕಪ್ಪು ಛಾಯೆ ಆವರಿಸಿದಂತಾಗಿದೆ ಎಂದು ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಎಂದು ಹೇಳಿದರು.
ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಶ್ರದ್ಧಾಂಜಲಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ರಾಜಕೀಯ ಅನ್ಯಾಯದ ಧೋರಣೆಗಳ ವಿರುದ್ಧ ಚುರುಕಿನಿಂದ ಚಾಟಿ ಬೀಸುತ್ತಿದ್ದರು. ಪಕ್ಷ ಬೇಧ ಮರೆತು ರಾಜಕಾರಣಿಗಳ ಪ್ರಬುದ್ಧ ವಾದಗಳನ್ನು ಮೆಚ್ಚುತ್ತಿದ್ದರು. ಸ್ವರಚಿತ ಕವನಗಳ ಮೂಲಕ ರಾಜಕೀಯ ಪ್ರಶಂಸೆ ಮತ್ತು ಟೀಕೆಗಳನ್ನು ಮಾಡುತ್ತಿದ್ದರು. ಸಾಹಿತ್ಯ ಪ್ರೇಮ ಮೈಗೂಡಿಸಿಕೊಂಡಿದ್ದ ಅಟಲ್‌ಜಿ, ದೇಶದ ಜನರ ಕಷ್ಟಗಳನ್ನು ಕಾವ್ಯದ ರೂಪದಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನ ಸೆಳೆಯುತ್ತಿದ್ದರು ಎಂದರು.
ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ವಾಜಪೇಯಿ ಬರೆದ ಕವಿತೆ ವಾಚಿಸಿದರು. ವೀರಶೈವ ಸಮಾಜದ ಅಧ್ಯಕ್ಷ, ಭಾಜಪ ಹಿರಿಯ ಮುಖಂಡ ಸಿದ್ದಣ್ಣ ಕಲಶೆಟ್ಟಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಪುರಸಭೆ ಸದಸ್ಯರು ಹಾಗೂ ಮುಖಂಡರು ಇದ್ದರು.
ಪುರಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸದ್ದಕ್ಕೆ ಆಕ್ರೋಶ: ಪುರಸಭೆ ಕಚೇರಿಯಲ್ಲಿ ವಾಜಪೇಯಿ ಭಾವಚಿತ್ರ ಇಟ್ಟು ಶ್ರದ್ಧಾಂಜಲಿ
ಸಲ್ಲಿಸಿಲ್ಲ ಎಂದು ಆರೋಪಿಸಿ, ಮಾಜಿ ಶಾಸಕ ವಾಲ್ಮೀಕಿ ನಾಯಕ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪಿಎಸ್‌ಐ ವಿಜಯಕುಮಾರ ಭಾವಗಿ ಅವರು ಸ್ಥಳಕ್ಕೆ ಆಗಮಿಸಿದಾಗ ಸರಕಾರಿ ರಜೆಯಿರುವ ಕಾರಣಕ್ಕೆ ಶುಕ್ರವಾರ ಶೋಕಾಚರಣೆ, ಶನಿವಾರ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಮುಖ್ಯಾಧಿಕಾರಿ ತಿಳಿಸಿದ ನಂತರ ಪರಿಸ್ಥಿತಿ ತಿಳಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.