ಕವಿತೆ ಬರೆದಂತೆ ಬದುಕಿದವರು ವಾಜಪೇಯಿ
Team Udayavani, Sep 30, 2018, 10:44 AM IST
ಶಹಾಬಾದ: ಕವಿತೆ ಬರೆದಂತೆ ಬದುಕಿದ ಅತಿ ವಿರಳ ಕವಿಗಳ ಸಾಲಿನಲ್ಲಿ ವಾಜಪೇಯಿ ಕೂಡಾ ಒಬ್ಬರು ಎಂದು ಕಲಬುರಗಿ
ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಹೇಳಿದರು.
ನಗರದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಅಟಲ್ ಜೀ ಕುರಿತು ಆಯೋಜಿಸಲಾಗಿದ್ದ ಕಾವ್ಯಾಂಜಲಿ ಕಾರ್ಯಕ್ರಮದ ಉದ್ಘಾಟಕರಾಗಿ ಅವರು ಮಾತನಾಡಿದರು. ವಾಜಪೇಯಿ ಅವರು ತಮ್ಮ ಕವಿತೆಗಳಲ್ಲಿ ನಾವು ಬದುಕುವುದಾದರೆ ಭಾರತಕ್ಕಾಗಿ, ನಾವು ಸಾಯುವುದಾದರೆ ಭಾರತಕ್ಕಾಗಿ ಎಂದು ರಾಷ್ಟ್ರಪ್ರೇಮ ಮೆರೆದಿದ್ದದೇ ನಮ್ಮ ಸಂಸ್ಕೃತಿಯನ್ನು ಹೇಳಿಕೊಂಡವರು. ಅಲ್ಲದೇ ಜನರ
ಸ್ವಾರ್ಥವನ್ನು ಕಟುವಾಗಿ ಟೀಕಿಸಿದ ಒಬ್ಬ ಮೇಧಾವಿ ಕವಿಯಾಗಿದ್ದರು ಎಂದರು.
ಸಾಹಿತಿ ಮಂಡಲಗಿರಿ ಪ್ರಸನ್ನ ಮಾತನಾಡಿ, ರಾಜಕೀಯದಲ್ಲಿ ಅಟಲಜೀ ಸರ್ವೋತ್ತಮ ನಾಯಕನಾಗಿ ಎಲ್ಲರಿಂದ ಮೆಚ್ಚುಗೆ ಗಳಿಸಲು ಅವರೊಳಗಿದ್ದ ಒಬ್ಬ ಸಂವೇದನಾಶೀಲ ಕವಿ ಕೂಡ ಕಾರಣ. ದೇಶದ ಪ್ರಧಾನಮಂತ್ರಿ ಹುದ್ದೆವರೆಗೆ ಏರಿದರೂ, ಅವರೊಬ್ಬ ಸ್ವತ್ಛ ಮನಸ್ಸಿನ ಕವಿಯಾಗಿದ್ದರು. ಸ್ಪಟಿಕದಂತೆ ಪುಟಿಯುವ ಅವರ ಸಾಲುಗಳು ಎಂಥವರನ್ನು ಪ್ರಭಾವಿತಗೊಳಿಸುತ್ತಿದ್ದವು. ಭಾಷಣಕ್ಕೆ ನಿಂತರೆ ಅವರಿಂದ ಸಿಡಿಯುವ ಸಾಲುಗಳನ್ನು ಯಾರೂ ಮರೆಯುವುದಕ್ಕೂ ಸಾಧ್ಯವಿಲ್ಲ ಎಂದರು. ನಿವೃತ್ತ ಪ್ರಾಧ್ಯಾಪಕ ಶಂಕರ
ಸೋಮಯಾಜಿ, ಮಾಜಿ ಸಚಿವ ಬಾಬುರಾವ್ ಚವ್ಹಾಣ, ಸಂಜಯ ಮಿಸ್ಕಿನ್ ಅತಿಥಿಗಳಾಗಿದ್ದರು. ಸುಭಾಷ ಜಾಪೂರ ಅಧ್ಯಕ್ಷತೆ ವಹಿಸಿದ್ದರು. ದೇವದಾಸ ಜಾಧವ ನಿರೂಪಿಸಿದರು, ರಾಜು ಕೋಬಾಳ ಹಾಗೂ ಸಂಗಡಿಗರು ಪ್ರಾರ್ಥಿಸಿದರು, ಬಸವರಾಜ ಬಿರಾದಾರ ಸ್ವಾಗತಿಸಿದರು, ನಾಗಣ್ಣ ರಾಂಪೂರೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.