ಬಿಜೆಪಿ ಸಂಘಟನೆಯಲ್ಲಿ ವಾಲ್ಮೀಕಿ ಪಾತ್ರ ಪ್ರಮುಖ
Team Udayavani, Mar 22, 2022, 12:34 PM IST
ಚಿತ್ತಾಪುರ: ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಸಂಘಟನೆ ಬಲಪಡಿಸು ವಲ್ಲಿ ಮಾಜಿ ಶಾಸಕ ದಿ. ವಾಲ್ಮೀಕಿ ನಾಯಕ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸಮಾಜ ಸೇವಕ ಮಣಿಕಂಠ ರಾಠೊಡ ಹೇಳಿದರು.
ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಮಾಜಿ ಶಾಸಕ ದಿ.ವಾಲ್ಮೀಕಿ ನಾಯಕ ಪ್ರಥಮ ಪುಣ್ಯಸ್ಮರಣೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
ಚಿತ್ತಾಪುರ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಬಾವುಟ ಹಾರಿಸುವ ಮೂಲಕ ಕಾರ್ಯಕರ್ತರ ಶಕ್ತಿಯಾಗಿದ್ದ ಮಾಜಿ ಶಾಸಕ ದಿ.ವಾಲ್ಮೀಕಿ ನಾಯಕ ನಮ್ಮ ಮಧ್ಯದಲ್ಲಿ ಇಲ್ಲದೇ ಇರಬಹುದು. ಆದರೆ ಅವರ ನಡೆ, ನುಡಿ ಮತ್ತು ಅವರಲ್ಲಿನ ದಿಟ್ಟತನ, ಹೋರಾಟದ ಮನೋಭಾವನೆ ಈಗಿನ ಕಾರ್ಯಕರ್ತರಿಗೆ ಸ್ಫೂರ್ತಿಯಾಗಿದೆ ಎಂದರು.
ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ ಮಾತನಾಡಿ, ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಾಗಿದ್ದ ಸಮಯದಲ್ಲಿ ವಾಲ್ಮೀಕಿ ನಾಯಕ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಈಗಲೂ ಅವರು ಮಾಡಿದ ಕಾರ್ಯಗಳು ಕಣ್ಣೆದುರಿಗೆ ಕಾಣುತ್ತಿವೆ ಎಂದು ಹೇಳಿದರು.
ಬಿಜೆಪಿ ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಮದಾಸ ಚವ್ಹಾಣ, ಅಶ್ವಥ ರಾಠೊಡ, ಮನೋಜ ರಾಠೊಡ, ಶಶಿ ಭಂಡಾರಿ, ಅಭಿಷೇಕ್ ಸಣ್ಣೂಕರ್, ಅಂಬರೀಶ ಸುಲೇಗಾಂವ, ನಾಗರಾಜ ಹೂಗಾರ, ದಶರಥ ದೊಡ್ಡಮನಿ, ಮಹೇಶ ಬಟಗೇರಿ, ಆನಂದ ಪಾಟೀಲ, ಸಂಜು ಕಾಶಿ ಹಾಗೂ ಬಂಜಾರಾ ಸಮಾಜದ ಮಹಿಳೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.