ವಾಡಿ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಸೌಲಭ್ಯ
Team Udayavani, May 16, 2022, 12:37 PM IST
ವಾಡಿ: ಪಟ್ಟಣದ ಹೊರ ವಲಯದ ಬಳಿರಾಮ ಚೌಕ್ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೀಗ ಸಂತಾನ ಹರಣ ಶಸ್ತ್ರಚಿಕಿತ್ಸಾ ಸೌಲಭ್ಯ ಒದಗಿಸಲಾಗಿದ್ದು, ನಗರ ಸೇರಿದಂತೆ ಸುತ್ತಲಿನ ಗ್ರಾಮಗಳ ಬಡ ಕುಟುಂಬದ ಬಾಣಂತಿಯರು ಇದರ ಲಾಭ ಪಡೆದುಕೊಳ್ಳುತ್ತಿದ್ದಾರೆ. ಕಲಬುರಗಿ ನಗರದ ನುರಿತ ತಜ್ಞ ವೈದ್ಯರಿಂದ ಪ್ರತಿ ತಿಂಗಳು ಸಂತಾನ ಹರಣ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಗುತ್ತಿದೆ.
ಕಳೆದ ಮೂರು ತಿಂಗಳ ಹಿಂದೆ ಚಿತ್ತಾಪುರ ತಾಲೂಕು ವೈದ್ಯಾಧಿಕಾರಿ ಡಾ| ಅಮರದೀಪ ಪವಾರ ಸ್ಥಳೀಯ ಆಸ್ಪತ್ರೆಗೆ ಅಗತ್ಯವಾಗಿದ್ದ ಸಂತಾನ ಹರಣ ಚಿಕಿತ್ಸಾ ಕೇಂದ್ರ ತೆರೆಯುವ ಮೂಲಕ ಜನರ ಬಹುದಿನಗಳ ಬೇಡಿಕೆ ಈಡೇರಿಸಿದ್ದಾರೆ. ಇದುವರೆಗೂ ಮೂರು ಶಸ್ತ್ರಚಿಕಿತ್ಸಾ ಶಿಬಿರಗಳನ್ನು ನಡೆಸಲಾಗಿದ್ದು, ಸುಮಾರು 60ಕ್ಕೂ ಹೆಚ್ಚು ಮಹಿಳೆಯರು ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ನರಳುತ್ತಿದ್ದ ಆಸ್ಪತ್ರೆಗೆ ಈಗ ಮೂವರು ವೈದ್ಯರನ್ನು ನೇಮಿಸಲಾಗಿದೆ.
ಆಸ್ಪತ್ರೆ ವೈದ್ಯಾಧಿಕಾರಿ ಡಾ| ರಿಜೀವುಲ್ಲಾ ಖಾದ್ರಿ ನಿಯೋಜಿತ ಸೇವೆ ಸಲ್ಲಿಸುತ್ತಿದ್ದಾರೆ. ಹೆರಿಗೆ ಮತ್ತು ಸಂತಾನ ಹರಣ ಶಸ್ತ್ರಚಿಕಿತ್ಸೆಗಾಗಿ ಕಲಬುರಗಿ ನಗರಗಳ ಖಾಸಗಿ ಆಸ್ಪತ್ರೆಗಳನ್ನೇ ನೆಚ್ಚಿಕೊಂಡಿದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆಯತ್ತ ಮುಖಮಾಡಿದ್ದಾರೆ.
ವೈದ್ಯರು ಮತ್ತು ಅಗತ್ಯ ಸಿಬ್ಬಂದಿಗಳ ಸೇವೆ ಹೊಂದಿರುವ ಕಾರಣಕ್ಕೆ ಹಳಕರ್ಟಿ, ಲಾಡ್ಲಾಪುರ, ಚಾಮನೂರ, ಇಂಗಳಗಿ, ರಾವೂರ, ಕುಂದನೂರ, ಕಮರವಾಡಿ, ಸೂಲಹಳ್ಳಿ, ಕೊಂಚೂರು, ಬಳವಡಗಿ, ಕಡಬೂರ ಗ್ರಾಮಗಳು ಸೇರಿದಂತೆ ವಿವಿಧ ತಾಂಡಾಗಳ ಜನರು ವಾಡಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಹೆರಿಗೆಗಾಗಿ ದಾಖಲಾಗುತ್ತಿದ್ದಾರೆ. 108 ಸುರಕ್ಷಾ ಕವಚ ಸೌಲಭ್ಯ ಹೊಂದಿರುವ ಈ ಆಸ್ಪತ್ರೆ ಗ್ರಾಮೀಣ ಜನರ ಕೈಗೆಟುಕುವಂತಿದೆ.
ಸಮುದಾಯ ಆರೋಗ್ಯ ಕೇಂದ್ರ ಈಗ ಮತ್ತಷ್ಟು ಸುಧಾರಣೆ ಕಂಡಿದೆ. ಇಬ್ಬರು ಹೆರಿಗೆ ಶುಶ್ರೂಷಕಿಯರು ನೇಮಕವಾದ ನಂತರ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಡ್‌ಗಳ ಕೊರತೆಯಿಲ್ಲ. ದಿನದ 24 ಗಂಟೆಯಲ್ಲಿ ಯಾವುದೇ ಗಳಿಗೆಯಲ್ಲಿ ಆಸ್ಪತ್ರೆಗೆ ದಾಖಲಾಗುವ ಗರ್ಭಿಣಿಯರ ಹೆರಿಗೆ ಸುಸೂತ್ರವಾಗಿ ನೆರವೇರಿಸಲಾಗುತ್ತಿದೆ. ಜಿಲ್ಲಾ ವೈದ್ಯರಿಂದ ಪ್ರತಿ ತಿಂಗಳು ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಎರಡು ತಿಂಗಳಲ್ಲಿ 60 ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಎಷ್ಟೇ ಮಹಿಳೆಯರು ಆಸ್ಪತ್ರೆಗೆ ಬಂದು ಸಂತಾನ ಹರಣ ಶಸ್ತ್ರಚಿಕಿತ್ಸೆಗಾಗಿ ಹೆಸರು ನಮೂದಿಸಿದರೂ ತಿಂಗಳ ಕೊನೆ ವಾರದಲ್ಲಿ ಚಿಕಿತ್ಸೆ ನಡೆಸಲಾಗುತ್ತದೆ. ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಲ್ಲ. ಆದರೆ ರಾತ್ರಿ ಪಾಳಿಯದ್ದೇ ಸಮಸ್ಯೆ. ವೈದ್ಯರಿಗೆ ವಸತಿ ಸೌಲಭ್ಯ ದೊರೆತರೆ ರಾತ್ರಿ ವೇಳೆಯಲ್ಲೂ ವೈದ್ಯರ ಸೇವೆ ಸಿಗಲಿದೆ. ಆದಷ್ಟು ಬೇಗ ಈ ಸಮಸ್ಯೆಯನ್ನೂ ಬಗೆಹರಿಸುತ್ತೇನೆ. -ಡಾ| ಅಮರದೀಪ ಪವಾರ, ಟಿಎಚ್‌ಒ, ಚಿತ್ತಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.