ವೀರಭದ್ರೇಶ್ವರ ಜಾತ್ರೆ:ಸಿದ್ಧತೆಗೆ ಸ್ಥಳ ಪರಿಶೀಲನೆ
Team Udayavani, Jan 19, 2018, 11:51 AM IST
ಹುಮನಾಬಾದ: ಕುಲದೇವ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಪೂರ್ವ ಸಿದ್ಧತಾ ಕಾರ್ಯರೂಪಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಪಟ್ಟಣದ ಅಗ್ನಿಕುಂಡ, ದೇವಸ್ಥಾನ ಹಾಗೂ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪರಿಶೀಲಿಸಿದರು.
ಜಾತ್ರೆಗೆ ಪ್ರತಿವರ್ಷ ಜನ ಸಂಖ್ಯೆ ಹೆಚ್ಚಾಗುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಸೂಚಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಪಟ್ಟಣದ ಅಗ್ನಿ ಕುಂಡಕ್ಕೆ ಭೇಟಿ ನೀಡಿದರು.
ಅಲ್ಲದೇ ಸಾರ್ವಜನಿಕರಿಗೆ ತೊಂದರೆ ಆಗದಂತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು. ದೇವಸ್ಥಾನದ
ಒಳಗಿನ ಹಾಗೂ ಹೊರ ಪ್ರದೇಶದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಭಕ್ತರಿಗೆ ಸರಳವಾಗಿ ದೇವರ ದರ್ಶನ ಪಡೆಯಲು ಅನುಕುಲ ಮಾಡುವ ಕುರಿತು ಚರ್ಚಿಸಿದರು.
ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ವಿಡಿಯೋ ಕ್ಯಾಮರಾ, ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಜಾತ್ರೆಗೆ ಆಗಮೀಸುವ ಜನರ ಮೇಲೆ ಸೂಕ್ಷ್ಮನೀಗಾ ವಹಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಅಗ್ನಿಕುಂಡ, ಬಸ್ ನಿಲ್ದಾಣ ಸೇರಿದಂತೆ ವಿವಿಧಡೆ ಕ್ಯಾಮೆರಾಗಳನ್ನು ಅಳವಡಿಸಿ ಕಳ್ಳತನ, ಯಾವುದೇ ಅಪರಾಧ ನಡೆಯದಂತೆ ಹಾಗೂ ಯಾವುದಾರೂ ಘಟನೆಗಳು ಸಂಭವಿಸಿದರೆ ಕೂಡಲೆ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.