ಉಪರಾಷ್ಟ್ರಪತಿ ಹುದ್ದೆಗೆ ಡಾ| ಸೇಡಂ ಎನ್‌ಡಿಎ ಅಭ್ಯರ್ಥಿ?
Team Udayavani, Jul 9, 2017, 3:15 AM IST
ಕಲಬುರಗಿ: ಆಗಸ್ಟ್ 5ರಂದು ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಈ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ರಾಜ್ಯಸಭಾ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ ಅವರ ಹೆಸರು ಕೇಳಿ ಬರುತ್ತಿದೆ.
ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಗೆ ಉತ್ತರ ಭಾರತದ ಅಭ್ಯರ್ಥಿಯನ್ನು ಎನ್‌ಡಿಎ ಮೈತ್ರಿಕೂಟ ಅಂತಿಮಗೊಳಿಸಿದ್ದರಿಂದ ಉಪರಾಷ್ಟ್ರಪತಿ ಆಯ್ಕೆ ವೇಳೆ ದಕ್ಷಿಣ ಭಾರತದವರಿಗೆ ಆದ್ಯತೆ ನೀಡಬಹುದು ಎನ್ನಲಾಗುತ್ತಿದೆ. ಅದರಲ್ಲೂ ಕರ್ನಾಟಕದ ಸಮರ್ಥರೊಬ್ಬರು ಅಭ್ಯರ್ಥಿ ಆಗಲಿದ್ದಾರೆ ಎನ್ನುವ ಮಾತು ದಟ್ಟವಾಗಿ ಕೇಳಿ ಬರುತ್ತಿದೆ.
ಲಾಬಿ ಮಾಡಿದವರಲ್ಲ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನೇರ ಸಂಪರ್ಕ ಹೊಂದಿರುವ ಸರಳ ವ್ಯಕ್ತಿತ್ವದ ರಾಜ್ಯಸಭಾ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ ಅವರ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದೆ. ಡಾ| ಸೇಡಂ ಅವರು ಯಾವುದೇ ಹುದ್ದೆಗೂ ಲಾಬಿ ಮಾಡಿದವರಲ್ಲ. ವಿಧಾನ ಪರಿಷತ್ ಸದಸ್ಯರಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ, ಸಂಸತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದ ಸೇಡಂ, ರಾಜಕೀಯ ಸಂಪರ್ಕದಿಂದ ದೂರ ಇರುವ ನಿಲುವು ತಳೆದು 2009ರಲ್ಲಿ 10 ಲಕ್ಷ ಜನರನ್ನು ಸೇರಿಸಿ, “ಕಲಬುರಗಿ ಕಂಪು’ ಎಂಬ ಐತಿಹಾಸಿಕ ಕಾರ್ಯಕ್ರಮ ಆಯೋಜಿಸಿ ರಾಷ್ಟ್ರದ ಗಮನ ಸೆಳೆದಿದ್ದರು. ಆಕಸ್ಮಿಕ ಎನ್ನುವಂತೆ 2012ರಲ್ಲಿ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.
ರಾಜ್ಯಸಭಾ ಸದಸ್ಯರಾದರೂ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳದೆ ವಿಕಾಸ ಅಕಾಡೆಮಿ ಮೂಲಕ ಹೈದ್ರಾಬಾದ್ – ಕರ್ನಾಟಕ ಭಾಗದ ಶೈಕ್ಷಣಿಕ ಹಾಗೂ ಪರಿಸರ ಜತೆಗೆ ಮಾನವ ಅಭಿವೃದ್ಧಿ ಸೂಚ್ಯಂಕ ಹೆಚ್ಚಿಸುವ ನಿಟ್ಟಿನಲ್ಲಿ ತಮ್ಮದೇ ಆದ ಕಾರ್ಯಸೂಚಿ ಹೊಂದಿ ಕಾರ್ಯಕ್ರಮಗಳನ್ನು ನಿರೂಪಿಸುತ್ತಾ ಮುನ್ನಡೆದಿದ್ದಾರೆ.
ಪ್ರಧಾನಿ ಮೋದಿ ಸಂಪರ್ಕ
ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಕಾರ್ಯಕರ್ತರಾಗಿರುವ ಸೇಡಂ ಅವರು ರಾಷ್ಟ್ರಮಟ್ಟದ ನಾಯಕರ ಜತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಕಳೆದ ಬಾರಿ ಗುಜರಾತ್ ಚುನಾವಣೆ ಸಂದರ್ಭಗಳಲ್ಲಿ ನರೇಂದ್ರ ಮೋದಿ ಅವರೊಂದಿಗೆ ಎರಡು ವಾರ ಪ್ರಚಾರದಲ್ಲಿ ಭಾಗವಹಿಸಿದ್ದರು. ವಾಗ್ಮಿಯೂ ಆಗಿರುವ ಸೇಡಂ ಅವರ ಹೆಸರು ಉಪರಾಷ್ಟ್ರಪತಿ ಹುದ್ದೆಗೆ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಡಾ| ಬಸವರಾಜ ಪಾಟೀಲ ಸೇಡಂ ಉಪರಾಷ್ಟ್ರಪತಿಯಾಗಲಿ ಎನ್ನುವ ನಿಟ್ಟಿನಲ್ಲಿ ಚರ್ಚೆಯೂ ನಡೆಯುತ್ತಿದೆ. ಹೈ.ಕ. ಭಾಗದಿಂದ ಹಲವರು ಒತ್ತಾಯವನ್ನೂ ಮಾಡಿದ್ದಾರೆ. ದಿಢೀರನೆ ರಾಜ್ಯಸಭಾ ಸದಸ್ಯರಾದಂತೆ ಡಾ| ಸೇಡಂ ಉಪರಾಷ್ಟ್ರಪತಿ ಅಭ್ಯರ್ಥಿಯೂ ಆಗಲಿದ್ದಾರೆ ಎನ್ನಲಾಗುತ್ತಿದೆ.
ನಾನಂತೂ ಉಪರಾಷ್ಟ್ರಪತಿ ಹುದ್ದೆ ಬಯಸಿಲ್ಲ. ಅದಕ್ಕಾಗಿ ಲಾಬಿಯನ್ನೂ ಮಾಡಲ್ಲ. ನಾನೇ ಒಂದು ಹೆಸರನ್ನು ಸೂಚಿಸಿದ್ದೇನೆ. ಮಾಜಿ ರಾಷ್ಟ್ರಪತಿ ಡಾ| ಎಪಿಜೆ ಅಬ್ದುಲ್ ಕಲಾಂ ಅವರೊಂದಿಗೆ ಒಡನಾಟ ಹೊಂದಿದ್ದ ರಾಜ್ಯದವರೊಬ್ಬರ ಹೆಸರನ್ನೂ ಪ್ರಧಾನಿಗಳೊಂದಿಗೆ ಮಾತನಾಡಿ ಹೇಳಿರುವೆ. ಪ್ರಸ್ತುತ ರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರಪತಿ ಹುದ್ದೆಯ ಘನತೆ – ಗೌರವದ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ ರಾಷ್ಟ್ರಪತಿ ಅಭ್ಯರ್ಥಿಗಳ ಜಾತಿ ಬಗ್ಗೆ ಚರ್ಚೆ ಆಗುತ್ತಿರುವುದು ಬೇಸರ ತಂದಿದೆ.
– ಡಾ| ಬಸವರಾಜ ಪಾಟೀಲ ಸೇಡಂ, ರಾಜ್ಯಸಭಾ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.