ಕಸಾಪ ನಿಬಂಧನೆ ಉಲ್ಲಂಘನೆ: ಕ್ರಮಕ್ಕೆ ಒತ್ತಾಯ
Team Udayavani, Mar 13, 2022, 12:09 PM IST
ಶಹಾಬಾದ: ತಾಲೂಕು ಕಸಾಪ ಅಧ್ಯಕ್ಷರ ನೇಮಕದಲ್ಲಿ ಪರಿಷತ್ ನಿಬಂಧನೆಗಳನ್ನು ಉಲ್ಲಂಘಿಸಿದಕ್ಕೆ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶನಿವಾರ ನಗರ ಕಸಾಪ ಸದಸ್ಯರು ಹಾಗೂ ವಿವಿಧ ಸಂಘಟನೆಯವರು ಕಸಾಪ ರಾಜ್ಯಧ್ಯಕ್ಷರಿಗೆ ಹಾಗೂ ಜಿಲ್ಲಾಕಾರಿಗಳಿಗೆ ಕಂದಾಯ ಅಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಸಾಪ ಸದಸ್ಯ ಪೂಜಪ್ಪ ಮೇತ್ರೆ, ನಗರ ಕಸಾಪ ಅಧ್ಯಕ್ಷರ ಆಯ್ಕೆಯಲ್ಲಿ ಪರಿಷತ್‌ನ ನಿಬಂಧನೆಗಳ ಉಲ್ಲಂಘನೆಯಾಗಿದೆ. ಜಿಲ್ಲಾಧ್ಯಕ್ಷರು ಸರ್ವಾಧಿಕಾರಿಯಾಗಿ ನಡೆದುಕೊಂಡಿದ್ದಾರೆ. ಕಸಾಪ ನಿಬಂಧನೆ 15ರ ಪ್ರಕಾರ ತಾಲೂಕು ಘಟಕಕ್ಕೆ ಅಧ್ಯಕ್ಷರನ್ನು ನೇಮಕ ಮಾಡುವಾಗ ಜಿಲ್ಲಾಧ್ಯಕ್ಷರು ಆಯಾ ಪ್ರತಿ ತಾಲೂಕಿನ ಸದಸ್ಯರೊಡನೆ ಸಮಾಲೋಚನೆ ನಡೆಸಿ ಹಾಗೂ ನಿರ್ದಿಷ್ಟ ಸ್ಥಳ, ದಿನಾಂಕವನ್ನು ಸರ್ವ ಸದಸ್ಯರ ಸಮ್ಮುಖದಲ್ಲಿ ನೇಮಕ ಮಾಡಬೇಕು ಆದರೆ ಜಿಲ್ಲಾಧ್ಯಕ್ಷರು ಕಲಬುರಗಿಯಲ್ಲೇ ಕುಳಿತು ಈ ಕಾರ್ಯ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಾಧ್ಯಕ್ಷರು ಕೂಡಲೇ ಸಭೆ ಕರೆದು ನೂತನ ತಾಲೂಕು ಅಧ್ಯಕ್ಷರನ್ನು ನೇಮಿಸಬೇಕು. ಇಲ್ಲದಿದ್ದರೆ ವಿರೋಧ ವ್ಯಕ್ತಪಡಿಸುತ್ತೇವೆ ಎಂದು ಎಚ್ಚರಿಸಿದರು.
ಕಸಾಪ ಸದಸ್ಯರಾದ ಬಸವರಾಜ ಮಯೂರ, ಪ್ರವೀಣ ರಾಜನ್, ಸುರೇಶ ಮೆಂಗನ, ಮರಲಿಂಗ ಕಮರಡಗಿ, ಶರಣಗೌಡ ಪಾಟೀಲ, ರಾಘವೇಂದ್ರ ಜಾಯಿ, ನರಸಿಂಹಲೂ ರಾಯಚೂರಕರ್, ಮಲ್ಲೇಶಿ ಭಜಂತ್ರಿ, ಸತೀಶ ಕುಮಾರ ಕೋಬಾಳಕರ್, ಶಿವಕುಮಾರ ಎಸ್ .ನಾಟೇಕಾರ, ಶಶಿಕುಮಾರ, ಶಿವಾನಂದ ಪೂಜಾರಿ, ಶಂಕರ ಕೋಟನೂರ್, ರಾಜಶೇಖರ ಕುಂಬಾರ, ಶರಣಯ್ಯಸ್ವಾಮಿ ಹಿರೇಮಠ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.