ಯುಡಿಯೂರಪ್ಪ ‘ಸಿಎಂ’ ಸ್ಥಾನ ಯೋಗ್ಯ- ಅಯೋಗ್ಯತೆ ಮೇಲೆ ನಿರ್ಧಾರವಾಗಲಿ: ಸಿದ್ದಲಿಂಗ ಮಹಾಸ್ವಾಮಿ


Team Udayavani, Jun 13, 2021, 1:42 PM IST

ಯುಡಿಯೂರಪ್ಪಗೆ ಸಿಎಂ ಸ್ಥಾನ ಯೋಗ್ಯ, ಅಯೋಗ್ಯತೆ ಮೇಲೆ ನಿರ್ಧಾರವಾಗಲಿ: ಸಿದ್ದಲಿಂಗ ಮಹಾಸ್ವಾಮಿ

ಕಲಬುರಗಿ: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಷಯವು ಯೋಗ್ಯ ಮತ್ತು ಅಯೋಗ್ಯತೆ‌‌ ಮೇಲೆ‌ ನಿರ್ಧಾರವಾಗಲಿ.‌ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪನವರು ಯೋಗ್ಯರಾಗಿದ್ದರೆ ಮುಂದುವರೆಸಲಿ. ಆ ಸ್ಥಾನಕ್ಕೆ ಅಯೋಗ್ಯರಾಗಿದ್ದರೆ ಅವರನ್ನು ತೆಗೆಯಲಿ ಎಂದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ವಿರಕ್ತ ಮಠದ ಸಿದ್ದಲಿಂಗ ಮಹಾಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನ ನಿರ್ಧಾರ ಮಾಡುವುದು ಹೈಕಮಾಂಡ್. ನಾವು ಸ್ವಾಮಿಗಳು ಅಲ್ಲ. ನಾವು ಹೇಳಿದ ತಕ್ಷಣಕ್ಕೆ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ, ಮುಂದುವರೆಯುವುದಿಲ್ಲ ಎಂದೇನು ಇಲ್ಲ ಎಂದರು.

ಆ ಸ್ವಾಮಿಗಳು ಬೆಂಬಲ ಕೊಟ್ಟರು. ಈ ಸ್ವಾಮಿಗಳು ಬೆಂಬಲ ಕೊಟ್ಟರು ಎನ್ನುವುದು ಸುಮ್ಮನೆ. ಅದು ವ್ಯರ್ಥ ಕೂಡ. ಮೇಲಿರುವವರು ಯಾರ ಮಾತನ್ನೂ ಕೇಳುವುದಿಲ್ಲ. ಅವರದ್ದೇ ಸಿದ್ಧಾಂತ ಇರುತ್ತದೆ. ತೆಗೆಯಬೇಕೆಂದರೆ ತೆಗೆದು ಬಿಡುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ:ಅನೈತಿಕ ಸಂಬಂಧ: ತಿಳಿ ಹೇಳಿದರೂ ಸರಿ ಹೋಗದ ವ್ಯಕ್ತಿಯನ್ನು ಹಲ್ಲೆ ಮಾಡಿ ಕೊಲೆಗೈದ ಸಂಬಂಧಿಕರು!

ಮುಖ್ಯಮಂತ್ರಿಗಳ ಪರವಾಗಿ ಸ್ವಾಮೀಜಿಗಳು ಮಾತನಾಡುವ ಪದ್ಧತಿ ಈ ಹಿಂದೆ ಇರಲಿಲ್ಲ. ಕಲಬುರಗಿ ಜಿಲ್ಲೆಯವರೇ ಆಗಿದ್ದ ವೀರೇಂದ್ರ ಪಾಟೀಲ ಮತ್ತು ಧರಂಸಿಂಗ್ ಕೂಡ ಮುಖ್ಯಮಂತ್ರಿಗಳಾಗಿದ್ದರು. ಇವರ ಪರವಾಗಿ ಯಾವ ಸ್ವಾಮಿ ಕೂಡ ಮಾತನಾಡಿರಲಿಲ್ಲ. ಧರಂಸಿಂಗ್ ಮನೆ ಸ್ವಾಮಿಗಳ ಕೇಂದ್ರವಾಗಿತ್ತು. ಆದರೂ, ಯಾವ ಸ್ವಾಮಿ ಮಾತನಾಡಿರಲಿಲ್ಲ ಎಂದರು.‌

ಈಗ ಯಡಿಯೂರಪ್ಪ ವಿಷಯ ಎಂದಾಗ ಎಲ್ಲಾ ಮಠಾಧೀಶರು ಮಾತನಾಡಲು ಶುರು ಮಾಡುತ್ತಾರೆ. ಯಾಕೆ ಎಲ್ಲ ಮಠಗಳಿಗೆ 50 ಲಕ್ಷ ರೂ. ಬರೆದಿದ್ದಾರೆ ಎನ್ನುವ ಕಾರಣಕ್ಕಾಗಿಯೇ ಎಂದೂ ಅವರು ಪ್ರಶ್ನಿಸಿದರು.

ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಸುವುದಕ್ಕಾಲಿ ಅಥವಾ ತೆಗೆಯಲು ಸ್ವಾಮಿಗಳು ಮಾತನಾಡುವುದೇ ಸರಿಯಲ್ಲ. ಇದನ್ನು ನಿರ್ಧಾರ ಮಾಡುವುದಕ್ಕೆ ರಾಜಕೀಯ ಇದೆ. ಅವರ ಪಕ್ಷದ ವರಿಷ್ಠರು ಇದ್ದಾರೆ. ಅವರೇ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅಯೋಗ್ಯನಾಗಿದ್ದರೆ ತೆಗೆಯುತ್ತಾರೆ. ಯೋಗ್ಯತೆ ಇತ್ತು ಎಂದರೆ ಮುಂದುವರೆಸುತ್ತಾರೆ ಅಷ್ಟೇ. ಇದರ ಬಗ್ಗೆ ನಾವು ಮಠಾಧೀಶರು ತಲೆಕೆಡಿಸಿಕೊಳ್ಳಲ್ಲ ಎಂದು ಸ್ಪಷ್ಟವಾಗಿ ಹೇಳಿದರು. ‌

ಟಾಪ್ ನ್ಯೂಸ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು

Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

2

Bajpe: ಹೈಟೆಕ್‌ ಆಗಲು ಕಾಯುತ್ತಿದೆ ಬಜಪೆ ಮಾರ್ಕೆಟ್‌

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

1(1

Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.