ಇವಿಎಂ ಜತೆಗೆ ವಿವಿಪ್ಯಾಟ್ ಯಂತ್ರ
Team Udayavani, Apr 6, 2018, 5:01 PM IST
ಬಸವಕಲ್ಯಾಣ: ಚುನಾವಣೆಯಲ್ಲಿ ಮತಯಂತ್ರಗಳ ಬಗ್ಗೆ ಜನರಲ್ಲಿ ಸಂಶಯ ಮೂಡಬಾರದು ಎನ್ನುವ ಕಾರಣದಿಂದ ಚುನಾವಣಾ ಆಯೋಗದಿಂದ ವಿವಿಪ್ಯಾಟ್ ಎನ್ನುವ ವಿನೂತನ ಯಂತ್ರ ಬಳಸಲಾಗುತ್ತಿದ್ದು, ಪ್ರತಿ ಮತಗಟ್ಟೆ ಕೇಂದ್ರದಲ್ಲಿ ಇವಿಎಂ ಯಂತ್ರದ ಜತೆಗೆ ಇದನ್ನು ಅಳವಡಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಪ್ರೀತಮ ನಸಲಪುರೆ ತಿಳಿಸಿದರು.
ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಇವಿಎಂ ಯಂತ್ರ ಹಾಗೂ ವಿವಿಪ್ಯಾಟ್ ಯಂತ್ರದ ಬಗ್ಗೆ ಪತ್ರಕರ್ತರಿಗೆ ಮಾಹಿತಿ ನೀಡಿದ ಅವರು, ಮತದಾನ ಮಾಡಿದ ವ್ಯಕ್ತಿ ಯಾವ ಅಭ್ಯರ್ಥಿಗೆ ಹಕ್ಕು ಚಲಾಯಿಸಿದ್ದಾರೆ ಎನ್ನುವ ಬಗ್ಗೆ ಅವರಿಗೆ ಖಾತ್ರಿ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.
ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ಮತದಾನಕ್ಕಾಗಿ ಅಳವಡಿಸಲಾಗುವ ಇವಿಎಂ ಯಂತ್ರಗಳ ಬಗ್ಗೆ ಕೆಲವರು ಸಂಶಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಿವಿಪ್ಯಾಟ್ ಎನ್ನುವ ವಿನೂತನ ಯಂತ್ರ ಬಳಸುತ್ತಿದೆ. ಜನರು ಇವಿಎಂ ಯಂತ್ರದಲ್ಲಿ ಮತ ಚಲಾಯಿಸಿದ ನಂತರ ಇದರ ಪಕ್ಕದಲ್ಲಿಯೇ ಇರಲಿರುವ ವಿವಿಪ್ಯಾಟ್ ಯಂತ್ರದಲ್ಲಿ ಅವರು ಯಾವ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ ಎನ್ನುವ ಕುರಿತು ಖಾತ್ರಿಪಡಿಸಲಾಗುತ್ತಿದೆ. ಅಭ್ಯರ್ಥಿ ಹೆಸರು, ಅವರ ಚಿಹ್ನೆ ಯಂತ್ರದಲ್ಲಿ ಏಳು ಸೆಕೆಂಡ್‌ಗಳ ಕಾಲ ಕಾಣಿಸಿಕೊಳ್ಳಲಿದೆ. ನಂತರ ಸ್ವಯಂ ಚಾಲಿತವಾಗಿ ಒಂದು ಖಾತ್ರಿಪತ್ರ ಮುದ್ರಣಗೊಂಡು ಯಂತ್ರದಲ್ಲಿ ಶೇಖರಿಸಿಕೊಳ್ಳುತ್ತದೆ ಎಂದು ವಿವರಿಸಿದರು.
ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು ಎಂಬ ಕಾರಣದಿಂದ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಇನ್ನು ಜಾರಿಯಲ್ಲಿದೆ. ಈವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದ ಅರ್ಹ ಮತದಾರರನ್ನು ಸೇರಿಸಿಕೊಳ್ಳಲು ಏಪ್ರಿಲ್ 14ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತದಾರರು ನಮ್ಮ ಅಧಿಕಾರಿ, ಸಿಬ್ಬಂದಿ ಸಂಪರ್ಕಿಸಿ ತಮ್ಮ ಹೆಸರು ಸೇರಿಸಿಕೊಳ್ಳಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಮತದಾರರ ಹೆಸರು ಸೇರಿರುವುದು, ಮತದಾನ ಖಾತ್ರಿಪಡಿಸಿಕೊಳ್ಳುವಿಕೆ, ಮತದಾರರಾಗುವ ಅವಶ್ಯಕತೆ ಕುರಿತು ಅರಿವು ಮೂಡಿಸಲು ಏ. 8ರಂದು ತಾಲೂಕಿನಾದ್ಯಂತ ವಿಶೇಷ ದಿನ ಆಚರಿಸಲಾಗುತ್ತಿದೆ. ಮತದಾನದ ಅರಿವು ಮೂಡಿಸಲು ಬಿಎಲ್‌ಒ ಮಟ್ಟದಲ್ಲಿ ನಡೆಯುವ ಜಾಗೃತಿ ಕಾರ್ಯಕ್ರಮದಲ್ಲಿ ಪಿಡಿಒ, ಬಿಎಲ್ ಒಗಳು, ಗ್ರಾಮ ಲೆಕ್ಕಾ ಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಇನ್ನಿತರೆ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ತಾಲೂಕಿನಲ್ಲಿ ಧಾರ್ಮಿಕ ಸಭೆ, ಸಮಾರಂಭಗಳು, ಮದುವೆ ಸಮಾರಂಭಗಳು ಸೇರಿದಂತೆ ಯಾವುದೇ ಕಾರ್ಯಕ್ರಮ ನಡೆಸಬೇಕಿದ್ದಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯ ವಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಲ್ಲಿ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಚುನಾವಣೆ ಪ್ರಕ್ರಿಯೆ ಸುಸೂತ್ರವಾಗಿ ನಡೆಸಬೇಕು ಎನ್ನುವ ಉದ್ದೇಶದಿಂದ ಆಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎರಡು ಹೋಬಳಿಗೆ ಒಬ್ಬರಂತೆ ಫ್ಫ್ಲೈಯಿಂಗ್ ಅಧಿ ಕಾರಿ ನೇಮಿಸಲಾಗಿದೆ. ತಾಲೂಕಿನ ಗಡಿಗಳಲ್ಲಿ ಒಟ್ಟು 6 ಕಡೆ ಚೆಕ್ ಪೋಸ್ಟ್ ಸ್ಥಾಪಿಸಿ ಪ್ರತಿ ವಾಹನ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಅ ಧಿಕಾರಿಗಳ ಗಮನಕ್ಕೆ ತರಬೇಕು. ತಹಶೀಲ್ದಾರ ಕಚೇರಿಯಲ್ಲಿ ಸ್ಥಾಪಿಸಲಾದ ಚುನಾವಣೆ ಸಹಾಯವಾಣಿ ಸಂಖ್ಯೆ 08481-250338 ಅಥವಾ ತಮ್ಮ ಮೊಬೈಲ್ ಸಂಖ್ಯೆ 8762701033 ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಗ್ರೇಡ್-2 ತಹಶೀಲ್ದಾರ ಸಂಗಯ್ಯ ಸ್ವಾಮಿ, ಉಪ ತಹಶೀಲ್ದಾರ ಶಿವಾನಂದ ಮೇತ್ರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.