ಮತದಾರರ ಪಟ್ಟಿ ಪರಿಷ್ಕರಣೆ ಪವಿತ್ರ ಕಾರ್ಯ: ಡಿಸಿ ಶರತ್
ನ್ಯಾಯಸಮ್ಮತ ಚುನಾವಣೆಗೆ ದೋಷರಹಿತ ಮತದಾರ ಪಟ್ಟಿ ಅವಶ್ಯ
Team Udayavani, Sep 2, 2019, 11:25 AM IST
ಕಲಬುರಗಿ: ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಶರತ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಚಟುವಟಿಕೆಯ ಪೋಸ್ಟರ್ ಬಿಡುಗಡೆ ಮಾಡಿದರು.
ಕಲಬುರಗಿ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪವಿತ್ರವಾದದ್ದು. ಹೀಗಾಗಿ ಕ್ಷೇತ್ರದಲ್ಲಿ ಉಸ್ತುವಾರಿ ವಹಿಸಿಕೊಂಡಿರುವ ಬಿ.ಎಲ್.ಒ.ಗಳು ಜಾಗೃತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ. ಶರತ್ ಬಿ.ಎಲ್.ಒ.ಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೆ. 1 ರಿಂದ 30ರ ವರೆಗೆ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ-2020ರ ಅಂಗವಾಗಿ ಅಧಿಕಾರಿಗಳ ಮತ್ತು ಬಿ.ಎಲ್.ಒಗಳ ಸಭೆ ನಡೆಸುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ದೋಷರಹಿತ ಮತದಾರ ಪಟ್ಟಿ ಮೂಲ ಆಧಾರವಾಗಿದೆ. ಇದನ್ನು ಅರಿತು ಕಾರ್ಯೋನ್ಮುಖರಾಗಿ ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಡಾ| ಪಿ. ರಾಜಾ ಮಾತನಾಡಿ, ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಗುರಿ ಸಾಧನೆಗೆ ಸ್ವೀಪ್ ಸಮಿತಿಯಿಂದ ಎಲೆಕ್ಟೋರಲ್ ಲಿಟ್ರಸಿ ಕ್ಲಬ್ ಸದಸ್ಯರಾಗಿರುವ ಮಕ್ಕಳಿಂದ ಪ್ರಭಾತಫೇರಿ, ಜಾಥಾ, ಪೋಸ್ಟರ್, ಕರಪತ್ರ ಹಂಚಿಕೆ ಸೇರಿದಂತೆ ಇನ್ನಿತರ ಮಾಧ್ಯಮದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ವೋಟರ್ ಹೆಲ್ಪ್ಲೈನ್ ಆ್ಯಪ್ ಕುರಿತು ಬಿ.ಎಲ್.ಒ.ಗಳಿಗೆ ಸೆಪ್ಟೆಂಬರ್ 4ರ ನಂತರ ತರಬೇತಿ ನೀಡಲಾಗುತ್ತದೆ. ರಾಜಕೀಯ ಪಕ್ಷದ ನಾಯಕರು ಬ್ಲಾಕ್ ಲೆವೆಲ್ ಏಜೆಂಟರುಗಳನ್ನು ನೇಮಿಸಿ ಪರಿಷ್ಕರಣೆ ಕಾರ್ಯಕ್ಕೆ ಸಾಥ್ ನೀಡಬೇಕು ಎಂದರು.
ರಾಜಕೀಯ ಮುಖಂಡರಾದ ದೊಡ್ಡಪ್ಪಗೌಡ ಪಾಟೀಲ, ಮೊಹಮ್ಮದ್ ಆಲಂ, ಶರಣಪ್ಪ ಮಮಶೆಟ್ಟಿ ಮತದಾರರ ಪಟ್ಟಿಯಲ್ಲಿ ಕಂಡುಬರುವ ವಿವಿಧ ನ್ಯೂನತೆಗಳನ್ನು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಶರಣ್ಣಪ್ಪ ಮಾತನಾಡಿ, ಸಮಗ್ರ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯವು ಸೆ. 1 ರಿಂದ 30ರ ವರಗೆ ನಡೆಯಲಿದ್ದು, ಬಿ.ಎಲ್.ಓ.ಗಳು ಮನೆ-ಮನೆ ಭೇಟಿ ನೀಡಿ ಪರಿಷ್ಕರಣಾ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಅ. 15 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿ ಅ. 30ರ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದರು.
ಐ.ಎ.ಎಸ್ ಪ್ರೊಬೇಷನರಿ ಅಧಿಕಾರಿ ಡಾ| ಗೋಪಾಲಕೃಷ್ಣ ರಾಘವೇಂದ್ರ ಹಾಗೂ ಆಯಾ ತಾಲೂಕಿನ ತಹಶೀಲ್ದಾರರು, ಸಹಾಯಕ ಚುನಾವಣಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ರಾಜಕೀಯ ಪಕ್ಷಗಳ ಮುಖಂಡರು, ಬಿ.ಎಲ್.ಒ.ಗಳು ಇದ್ದರು.
ಇದೇ ಸಂದರ್ಭದಲ್ಲಿ Electors verification program (EVP) ಚಟುವಟಿಕೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.